Ration Card: ರಾಜ್ಯದ ಪಡಿತರ ಚೀಟಿದಾರರಿಗೆ ಆಹಾರ ಇಲಾಖೆಯಿಂದ ಮಹತ್ವದ ಮಾಹಿತಿ

Ration Card: ರಾಜ್ಯದ ಪಡಿತರ ಚೀಟಿದಾರರು ಇ-ಕೆವೈಸಿ ಮಾಡಿಸಲು ಸೆಪ್ಟೆಂಬರ್ 30ರ ವರೆಗೆ ಅವಕಾಶ ಕಲ್ಪಿಸಿದೆ. ಹಾಗಾದ್ರೆ ಈ ಪ್ರಕ್ರಿಯೆ ಪೂರ್ಣಗೊಳಿಸಲು ಯಾವೆಲ್ಲಾ ದಾಖಲೆಗಳು ಬೇಕು ಹಾಗೂ ಉದ್ದೇಶ ಏನು ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ರಾಜ್ಯದಲ್ಲಿ ಪಡಿತರ ಚೀಟಿ ಹೊಂದಿರುವ ಮತ್ತು ಈ ಹಿಂದೆ ಇ-ಕೆವೈಸಿ ಪ್ರಕ್ರಿಯೆ ಪೂರ್ಣಗೊಳಿಸಿ 5 ವರ್ಷಗಳು ಕಳೆದಿರುವ ಎಲ್ಲಾ ಫಲಾನುಭವಿಗಳು ಸೆಪ್ಟೆಂಬರ್ 30ರೊಳಗಾಗಿ ಕಡ್ಡಾಯವಾಗಿ ಮತ್ತೊಮ್ಮೆ ಇ-ಕೆವೈಸಿ ಮಾಡಿಸಬೇಕು ಎಂದು ಸೂಚಿಸಲಾಗಿದೆ. ಇದಕ್ಕೆ ಯಾವೆಲ್ಲಾ ದಾಖಲೆಗಳು ಬೇಕು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

Ration Card e-KYC Documents Required Process and September 30 2026 Deadline in Karnataka State

ಇ-ಕೆವೈಸಿ ಮಾಡಿಸುವುದು ಎಲ್ಲಿ?

ಪಡಿತರ ಚೀಟಿಯಲ್ಲಿ ಹೆಸರಿರುವ ಕುಟುಂಬದ ಪ್ರತಿಯೊಬ್ಬ ಸದಸ್ಯರೂ ಈ ಪ್ರಕ್ರಿಯೆಗೆ ಒಳಪಡುವುದು ಕಡ್ಡಾಯ. ಫಲಾನುಭವಿಗಳು ತಾವು ನಿರಂತರವಾಗಿ ಪಡಿತರ ಪಡೆಯುವ ನ್ಯಾಯಬೆಲೆ ಅಂಗಡಿಗೆ ಅಥವಾ ತಮ್ಮ ಸಮೀಪದ ಯಾವುದಾದರೂ ನ್ಯಾಯಬೆಲೆ ಅಂಗಡಿಗೆ ತೆರಳಿ ಬೆರಳಚ್ಚು ನೀಡುವ ಮೂಲಕ ಇ-ಕೆವೈಸಿ ಪೂರ್ಣಗೊಳಿಸಬಹುದು.

ಇ-ಕೆವೈಸಿಗೆ ಬೇಕಾಗುವ ದಾಖಲೆಗಳು

* ಪಡಿತರ ಚೀಟಿ
* ಕುಟುಂಬದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್
* ಆಧಾರ್ ಕಾರ್ಡ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ
* ಜಾತಿ ಪ್ರಮಾಣ ಪತ್ರ
* ಎಲ್‌ಪಿಜಿ ಗ್ಯಾಸ್ ಸಂಪರ್ಕದ ಪಾಸ್‌ಬುಕ್

ಸಂಪೂರ್ಣ ಉಚಿತ ಸೇವೆ

ಇ-ಕೆವೈಸಿ ನೋಂದಣಿಗೆ ಯಾವುದೇ ರೀತಿಯ ಶುಲ್ಕ ಪಾವತಿಸಬೇಕಿಲ್ಲ. ನ್ಯಾಯಬೆಲೆ ಅಂಗಡಿಗಳಲ್ಲಿ ಈ ಸೇವೆಯನ್ನು ಸಂಪೂರ್ಣ ಉಚಿತವಾಗಿ ಮಾಡಿಕೊಡಲಾಗುತ್ತದೆ. ಬೇರೆ ಯಾವುದೇ ಖಾಸಗಿ ಕೇಂದ್ರಗಳಲ್ಲಿ ಅಲ್ಲದೆ, ಕೇವಲ ನ್ಯಾಯಬೆಲೆ ಅಂಗಡಿಗಳಲ್ಲಿ ಮಾತ್ರ ಇ-ಕೆವೈಸಿ ಮಾಡಲು ಅವಕಾಶ ನೀಡಲಾಗಿದೆ.

ಒಂದು ವೇಳೆ ಫಿಂಗರ್ ಪ್ರಿಂಟ್ ಸ್ಕ್ಯಾನ್ ಆಗದಿದ್ದರೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ. ಮತ್ತೊಮ್ಮೆ ಪ್ರಯತ್ನಿಸಬಹುದು ಅಥವಾ ಹತ್ತಿರದ ಆಧಾರ್ ಸೇವಾ ಕೇಂದ್ರಕ್ಕೆ ತೆರಳಿ ಆಧಾರ್ ಕಾರ್ಡ್ ಅಪ್ಡೇಟ್‌ ಮಾಡಿಸಿಕೊಂಡು, 15 ದಿನಗಳ ನಂತರ ಪುನಃ ಇ-ಕೆವೈಸಿ ಮಾಡಿಸಬಹುದು.

ಇ-ಕೆವೈಸಿ ಉದ್ದೇಶ ಏನು?

* ಸರ್ಕಾರದ ಪಡಿತರ ಸೌಲಭ್ಯವು ಕೇವಲ ಅರ್ಹ ಮತ್ತು ನಿಜವಾದ ಫಲಾನುಭವಿಗಳಿಗೆ ಮಾತ್ರ ತಲುಪುವಂತೆ ಮಾಡುವುದು.

* ಮೃತಪಟ್ಟ ವ್ಯಕ್ತಿಗಳ ಹೆಸರುಗಳನ್ನು ಪಡಿತರ ಚೀಟಿಯಿಂದ ತೆರವುಗೊಳಿಸುವುದು ಹಾಗೂ ನಕಲಿ ಅಥವಾ ಸಂಶಯಾಸ್ಪದ ಹೆಸರಿರುವ ಕಾರ್ಡ್‌ಗಳನ್ನು ರದ್ದುಪಡಿಸುವುದು.

* ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ವಲಸೆ ಹೋಗಿರುವವರ ಕಾರ್ಡ್ ಸರಿಪಡಿಸುವುದು ಮತ್ತು ಅರ್ಹ ಹೊಸ ಸದಸ್ಯರ ಹೆಸರುಗಳನ್ನು ಪಡಿತರ ಚೀಟಿಗೆ ಸೇರ್ಪಡೆಗೊಳಿಸುವುದು.

* ಪಡಿತರ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆಯಾಗುವುದರಿಂದ ಸರ್ಕಾರದ ಇತರೆ ನೇರ ನಗದು ವರ್ಗಾವಣೆ (DBT) ಹಾಗೂ ಯೋಜನೆಗಳ ಲಾಭ ಪಡೆಯುವುದು ಸುಲಭವಾಗುತ್ತದೆ.

ಸಾರ್ವಜನಿಕರಿಗೆ ಮಹತ್ವದ ಸೂಚನೆ

ಇದೇ ವೇಳೆ ಅಧಿಕಾರಿಗಳು ಸಾರ್ವಜನಿಕರಿಗೆ ಪ್ರಮುಖ ಎಚ್ಚರಿಕೆಯೊಂದನ್ನು ನೀಡಿದ್ದಾರೆ. 'ನಾವು ಆಹಾರ ಇಲಾಖೆಯಿಂದ ಕರೆ ಮಾಡುತ್ತಿದ್ದು, ನಿಮ್ಮ ಪಡಿತರ ಚೀಟಿಯ ಇ-ಕೆವೈಸಿ ಮಾಡುತ್ತಿದ್ದೇವೆ,' ಎಂದು ಮೊಬೈಲ್‌ನಲ್ಲಿ ಕರೆ ಮಾಡಿ ಒಟಿಪಿ ಕೇಳುವ ವಂಚಕರ ಬಗ್ಗೆ ಎಚ್ಚರದಿಂದಿರಬೇಕು. ಆಹಾರ ಇಲಾಖೆಯ ಯಾವುದೇ ಅಧಿಕಾರಿಯೂ ದೂರವಾಣಿ ಕರೆ ಮಾಡಿ ಒಟಿಪಿ ಕೇಳುವುದಿಲ್ಲ. ಆದ್ದರಿಂದ ಅಂತಹ ಕರೆಗಳಿಗೆ ಯಾವುದೇ ರಹಸ್ಯ ಮಾಹಿತಿ ಅಥವಾ ಒಟಿಪಿ ಹಂಚಿಕೊಳ್ಳಬಾರದು ಎಂದು ಸಾರ್ವಜನಿಕರಲ್ಲಿ ಮನವಿ ಮಾಡಲಾಗಿದೆ. ಒಟ್ಟನಲ್ಲಿ ಇಕೆವೈಸಿ ಉದ್ದೇಶವೇ ನಕಲಿ ಪಡಿತರ ಚೀಟಿದಾರರನ್ನ ಪತ್ತೆಹಚ್ಚಿ, ಅರ್ಹ ಫಲಾನುಭವಿಗಳಿಗೆ ಪಡಿತರ ವಿತರಣೆ ಮಾಡುವುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+