Ration Card: ರದ್ದತಿ ಶಾಕಿಂಗ್ ಬೆನ್ನಲೇ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್
Ration Card: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ಈಗಾಗಲೇ ಅನರ್ಹರ ಬಳಿಯಿದ್ದ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ ಅಂತಹವರಿಗೆ ಎಪಿಎಲ್ ಕಾರ್ಡ್‌ಗಳನ್ನು ನೀಡುವ ಕೆಲಸವನ್ನು ಆಹಾರ ಇಲಾಖೆ ಮಾಡುತ್ತಿದೆ. ಇದರ ಬೆನ್ನಲ್ಲೇ ಇದೀಗ ಪಡಿತರ ಚೀಟಿದಾರರಿಗೆ ಆಹಾರ ಇಲಾಖೆ ಗುಡ್‌ನ್ಯೂಸ್‌ವೊಂದನ್ನು ನೀಡಿದ್ದು, ಹೆಸರು ಸೇರ್ಪಡೆ ಅಥವಾ ತಿದ್ದುಪಡಿಗೆ ರಾಜ್ಯಾದ್ಯಂತ ಮತ್ತೆ ಅವಕಾಶ ಕಲ್ಪಿಸಿದೆ.
ಪಡಿತರ ಚೀಟಿದಾರರು ಹೆಸರು ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆದು ಹಾಕುವುದಕ್ಕೆ ಅವಕಾಶ ಕಲ್ಪಿಸಿದೆ.ಬೆಳಗ್ಗೆ 10ರಿಂದ ಸಂಜೆ 5ರ ವರೆಗೆ ತಿದ್ದುಪಡಿಗೆ ಮಾಡಿಸಬಹುದಾಗಿದೆ. ಬೆಂಗಳೂರು ಒನ್, ಸೈಬರ್ ಸೆಂಟರ್‌ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.

ಹೊಸ ಪಡಿತರ ಚೀಟಿ ಪಡೆಯಲು ಬಯಸುವವರು ಸ್ವಯಂ ಆಗಿ ಅರ್ಜಿ ಸಲ್ಲಿಕೆ ಮಾಡಬಹುದು. ಎಪಿಎಲ್ ಕಾರ್ಡ್ ಪಡೆಯುವವರು ಸಹ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕಾಗಿದೆ. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ http://ahara.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.
ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರದ ಜೊತೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಅನ್ನು ಹೊಂದಿರಬೇಗುತ್ತದೆ. ಪತ್ನಿ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ಕೊಡಬೇಕಾಗುತ್ತದೆ. ಈ ಎರಡು ದಾಖಲೆಗಳಿದ್ದರೆ ನೀವು ಆನ್‌ಲೈನ್‌ನಲ್ಲಿ ಪಡಿತರ ಚೀಟಿಯಲ್ಲಿನ ನಿಮ್ಮ ಹೆಸರನ್ನು ಸೇರ್ಪಡೆ ಮಾಡಬಹುದು.
ಪಡಿತರ ಚೀಟಿ ತಿದ್ದುಪಡಿ ವಿಧಾನಗಳು
* ಅಧಿಕೃತ ವೆಬ್‌ಸೈಟ್ https://ahara.kar.nic.in/home ಗೆ ಭೇಟಿ ನೀಡಿ
* ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ.
* ತಿದ್ದುಪಡಿ ಅಥವಾ ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ.
* ಹೊಸ ಪೇಜ್‌ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿ.
* ಬಳಿಕ ಅಲ್ಲಿ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ.
* ಅಪ್ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮಿಟ್ ಮಾಡಿ.
* ಅರ್ಜಿ ಸಲ್ಲಿಕೆಯ ವೇಳೆ ನೀವು ನೀಡಿರುವಂತಹ ಎಲ್ಲಾ ದಾಖಲಾತಿಗಳು ಸರಿಯಾಗಿದ್ದರೆ ಮಾತ್ರ ನಿಮಗೆ ಅಪ್ಡೇಟ್ ಆಗಿರುವ ಹೊಸ ರೇಷನ್ ಕಾರ್ಡ್ ನೀಡಲಾಗುತ್ತದೆ.












Click it and Unblock the Notifications