Ration Card: ರಾಜ್ಯದಲ್ಲಿ ಬಿಪಿಎಲ್, ಎಪಿಎಲ್ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ತಿದ್ದುಪಡಿ ದಿನಾಂಕ ವಿಸ್ತರಣೆ
Ration Card: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ಈಗಾಗಲೇ ರಾಜ್ಯದಲ್ಲಿ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಯನ್ನು ನಿಲ್ಲಿಸಲಾಗಿದೆ. ಆದರೆ, ಕಾರ್ಡ್ ತಿದ್ದುಪಡಿ ದಿನಾಂಕವನ್ನು ಮಾತ್ರ ವಿಸ್ತರಣೆ ಮಾಡಲಾಗಿದೆ. ಹಾಗಾದ್ರೆ ಎಲ್ಲಿವರೆಗೂ ಹಾಗೂ ಯಾವೆಲ್ಲಾ ದಾಖಲೆಗಳು ಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯದಲ್ಲಿ ಪಡಿತರ ಚೀಟಿದಾರರು, ತಮ್ಮ ಕಾರರ್ಡ್‌ಗೆ ಹೊಸದಾಗಿ ಸದಸ್ಯರ ಹೆಸರು ಸೇರ್ಪಡೆ, ತೆಗೆದು ಹಾಕುವುದಕ್ಕೆ, ಹೆಸರು ತಿದ್ದುಪಡಿ ಮಾಡುವುದಕ್ಕೆ ಆಹಾರ ಇಲಾಖೆಯಿಂದ ಮಾರ್ಚ್ 31ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಹಾಗಾದ್ರೆ ತಿದ್ದುಪಡಿಗೆ ಯಾವೆಲ್ಲಾ ಪ್ರಮುಖ ದಾಖಲೆಗಳು ಬೇಕು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ತಿದ್ದುಪಡಿ ಸಮಯಗಳ ವಿವರ: ಪಡಿತರ ಚೀಟಿಗೆ ಹೊಸ ಹೆಸರು ಸೇರ್ಪಡೆ ಅಥವಾ ತಿದ್ದುಪಡಿಗೆ ಮಾರ್ಚ್ 31ರ ವರೆಗೆ ಬೆಳಗ್ಗೆ 10ರಿಂದ ಸಂಜೆ 5 ರವರೆಗೆ ತಿದ್ದುಪಡಿಗೆ ಅವಕಾಶವಿದೆ. ಪಡಿತರ ಚೀಟಿದಾರರು ಹೊಸ ಸದಸ್ಯರ ಸೇರ್ಪಡೆ, ವಿಳಾಸ ಬದಲಾವಣೆ, ಹೆಸರು ತೆಗೆಯುವುದಕ್ಕೆ ಅವಕಾಶ ನೀಡಲಾಗಿದೆ.
ತಿದ್ದುಪಡಿಗೆ ಎಲ್ಲೆಲ್ಲಿ ಅವಕಾಶ?: ಬೆಂಗಳೂರು ಒನ್, ಸೈಬರ್ ಸೆಂಟರ್‌ಗಳಲ್ಲಿ ಹೊಸ ಕಾರ್ಡ್ ಅಥವಾ ಹೆಸರು ಸೇರ್ಪಡೆಗೆ ಅರ್ಜಿ ಸಲ್ಲಿಕೆ ಮಾಡಬಹುದು. ಒಟ್ಟಿನಲ್ಲಿ ಸ್ವಯಂ ಆಗಿ ಅರ್ಜಿ ಸಲ್ಲಿಸಬಹುದು. ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರೆ ಸದಸ್ಯರ ಸೇರ್ಪಡೆಗೆ ಅವಕಾಶ ನೀಡಲಾಗುವುದು. http://ahara.kar.nic.in ವೆಬ್ ಸೈಟ್‌ಗೆ ಭೇಡಿ ನೀಡಬಹುದಾಗಿದೆ.
ಹೊಸ ಹೆಸರು ಸೇರ್ಪಡೆ ವಿಧಾನಗಳು: ನಿಮ್ಮ ಮಗುವಿನ ಹೆಸರು ಪಡಿತರ ಚೀಟಿಯಲ್ಲಿ ಇಲ್ಲದಿದ್ದರೆ, ನೀವು ಅದನ್ನು ಸೇರಿಸಬಹುದು. ಇದರ ಪ್ರಕ್ರಿಯೆಯು ತುಂಬಾ ಸುಲಭವಾಗಿದೆ. ಮೊದಲು ನಿಮ್ಮ ರಾಜ್ಯದ ಆಹಾರ ಪೂರೈಕೆ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಹೋಗಬೇಕು. ನಂತರ ಈ ಅಧಿಕೃತ ವೆಬ್‌ಸೈಟ್ http://ahara.kar.nic.in/ಗೆ ಭೇಟಿ ನೀಡಬೇಕು.
ಯಾವೆಲ್ಲಾ ದಾಖಲೆಗಳು ಬೇಕು?
* ಮಗುವಿನ ಹೆಸರನ್ನು ಪಡಿತರ ಚೀಟಿಯಲ್ಲಿ ಸೇರಿಸಲು ಬಯಸಿದರೆ, ಇದಕ್ಕಾಗಿ ನಿಮಗೆ ಕೆಲವು ದಾಖಲೆಗಳು ಬೇಕಾಗುತ್ತವೆ. ಅದರಲ್ಲಿ ಮೊದಲ ದಾಖಲೆ ಮಗುವಿನ ಜನನ ಪ್ರಮಾಣಪತ್ರ ಆಗಿದೆ. ನೀವು ಮಹಾನಗರ ಪಾಲಿಕೆ, ಪುರಸಭೆ ಅಥವಾ ಗ್ರಾಮ ಪಂಚಾಯತ್‌ನಿಂದ ಜನನ ಪ್ರಮಾಣಪತ್ರವನ್ನು ಪಡೆಯಬಹುದು.
* ಕುಟುಂಬದ ಮುಖ್ಯಸ್ಥರ ಫೋಟೋ, ಅದು ಪಾಸ್‌ಪೋರ್ಟ್ ಆಗಿರಬೇಕು. ಪಡಿತರ ಚೀಟಿಗೆ ಮಗುವಿನ ಹೆಸರನ್ನು ಸೇರಿಸುವಾಗ ಅವರ ಆಧಾರ್ ಕಾರ್ಡ್ ಕೂಡ ಬೇಕಾಗುತ್ತದೆ.
* ಆನ್‌ಲೈನ್‌ನಲ್ಲಿ ಪಡಿತರ ಚೀಟಿಗೆ ನಿಮ್ಮ ಕುಟುಂಬದ ಯಾವುದೇ ಸದಸ್ಯರ ಹೆಸರನ್ನು ಸೇರಿಸಲು, ನೀವು ನಿಮ್ಮ ರಾಜ್ಯದ ಆಹಾರ ಸರಬರಾಜು ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.
* ID ಅನ್ನು ರಚಿಸಬೇಕಾಗುತ್ತದೆ. ನಿಮ್ಮ ಐಡಿಯನ್ನು ಈಗಾಗಲೇ ರಚಿಸಿದ್ದರೆ ಲಾಗಿನ್ ಆಗಬೇಕು. ನಂತರ ನಿಮ್ಮ ಪಡಿತರ ಚೀಟಿಯ ವಿವರಗಳನ್ನು ಗಮನಿಸಬಹುದು. ಅದರಲ್ಲಿ ಹೊಸ ಸದಸ್ಯರನ್ನು ಸೇರಿಸುವ ಆಯ್ಕೆಯನ್ನು ಪಡೆಯುತ್ತೀರಿ. ಅದರ ಮೇಲೆ ಕ್ಲಿಕ್ ಮಾಡಬೇಕಾಗುತ್ತದೆ, ನಂತರ ನೀವು ಹೊಸ ಸದಸ್ಯರನ್ನು ಸೇರಿಸಲು ಫಾರ್ಮ್ ಅನ್ನು ಭರ್ತಿ ಮಾಡಬೇಕಾಗುತ್ತದೆ.
* ಜೊತೆಗೆ ಹೊಸ ಸದಸ್ಯರ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಬೇಕು.
* ನಂತರ ನಿಮ್ಮ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ.
* ವಿವರಗಳು ಮತ್ತು ದಾಖಲೆಗಳನ್ನು ಭರ್ತಿ ಮಾಡಿದ ನಂತರ, ನೀವು ಫಾರ್ಮ್ ಅನ್ನು ಸಲ್ಲಿಸಬೇಕು.
* ಫಾರ್ಮ್ ಸಲ್ಲಿಸಿದ ನಂತರ, ನಿಮ್ಮ ನೋಂದಣಿ ಸಂಖ್ಯೆಯನ್ನು ನೀವು ಪಡೆಯುತ್ತೀರಿ.
* ನೋಂದಣಿ ಸಂಖ್ಯೆಯೊಂದಿಗೆ ನಿಮ್ಮ ವಿನಂತಿಯನ್ನು ಟ್ರ್ಯಾಕ್ ಮಾಡಬಹುದು.
* ನಿಮ್ಮ ಫಾರ್ಮ್ ಮತ್ತು ನಿಮ್ಮ ದಾಖಲೆಗಳನ್ನು ಪರಿಶೀಲಿಸಲಾಗುತ್ತದೆ.
* ಎಲ್ಲವೂ ಸರಿಯಾಗಿದ್ದರೆ ಹೊಸ ಸದಸ್ಯರ ಹೆಸರನ್ನು ಪಡಿತರ ಚೀಟಿಗೆ ಸೇರಿಸಲಾಗುವುದು.
* ಹತ್ತಿರದ ಪಡಿತರ ಅಂಗಡಿಗೆ ಹೋಗಿ ಮೂಲಕ ನಿಮ್ಮ ಪಡಿತರ ಚೀಟಿಯಲ್ಲಿ ನಿಮ್ಮ ಹೆಸರನ್ನು ನವೀಕರಿಸಬಹುದು.
ಹೊಸ ಸದಸ್ಯರ ಸೇರ್ಪಡೆ ಹೇಗೆ?
* ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿ ತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.
* ಅಧಿಕೃತ ವೆಬ್ ಸೈಟ್ ಗೆ https://ahara.kar.nic.in/home ಭೇಟಿ ನೀಡಿ
* ಮುಖ್ಯ ಪುಟದಲ್ಲಿ ಇ-ಸೇವೆಗಳನ್ನು ಆಯ್ಕೆ ಮಾಡಿ
* ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ
* ಹೊಸ ಪೇಜ್‌ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನು ಭರ್ತಿ ಮಾಡಿದ ನಂತರ ತಿಳಿಸಲಾದ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಯನ್ನು ಅನಲೋಡ್ ಮಾಡಿ.
* ಅಪ್‌ಲೋಡ್ ಮಾಡಿದ ನಂತರ ಫಾರ್ಮ್ ಅನ್ನು ಸಬ್ಮೀಟ್ ಮಾಡಿ.
* ಅರ್ಜಿ ಸಲ್ಲಿಸುವ ವೇಳೆ ನೀವು ನೀಡಿರುವಂತಹ ಎಲ್ಲ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ
* ಅಪ್ಡೇಟ್ ಆಗಿರುವ ಹೊಸ ಪಡಿತರ ಚೀಟಿ ನೀಡಲಾಗುತ್ತದೆ.












Click it and Unblock the Notifications