Ration Card: ರಾಜ್ಯದಲ್ಲಿ ಇ-ಶ್ರಮ ನೋಂದಾಹಿತ ಕಾರ್ಮಿಕರಿಗೆ ಗುಡ್ ನ್ಯೂಸ್
ಬೆಂಗಳೂರು, ನವೆಂಬರ್, 06: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ಅದರಲ್ಲೂ ಅರ್ಹ ಇ-ಶ್ರಮ ನೋಂದಾಹಿತ ಕಾರ್ಮಿಕರಿಗೆ ಆದ್ಯತಾ ಪಡಿತರ ಚೀಟಿ ವಿತರಣೆ ಕಾರ್ಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಆರಂಭ ಆಗಿದೆ. ಹಾಗಾದರೆ ಅರ್ಜಿ ಸಲ್ಲಿಸುವ ವಿಧಾನಗಳನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಅರ್ಹ ಕಾರ್ಮಿಕರು ಆದ್ಯಾತಾ ಪಡಿತರ ಚೀಟಿ ಪಡೆಯಲು ನಿಮ್ಮ ಹತ್ತಿರದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸಬಹುದಾಗಿದೆ. ಇನ್ನು ಅರ್ಹರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 1800 425 9339 ಅಥವಾ ಸಹಾಯವಾಣಿ 1969ಕ್ಕೆ ಸಂಪರ್ಕಿಸಬಹುದಾಗಿದೆ.

ನಿರ್ಧಾರ ಬದಲಿಸಿದ ಸರ್ಕಾರ: ರಾಜ್ಯದಲ್ಲಿ ನಕಲಿ ದಾಖಲೆಗಳನ್ನು ನೀಡಿ ಪಡದ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಿ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಮುದಾಗಿತ್ತು. ಆದರೆ ಇದೀಗ ಸರ್ಕಾರ ಈ ನಿರ್ಧಾರವನ್ನು ಬದಲಿಸಿ ಒಂದು ಅವಕಾಶ ನೀಡಿದೆ.
ರಾಜ್ಯದಲ್ಲಿ ಅರ್ಹರಲ್ಲದವರೂ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಅವರ ಕಾರ್ಡ್ ರದ್ದುಗೊಳ್ಳುವ ಆತಂಕ ಕೂಡ ಎದುರಾಗಿತ್ತು. ಆದರೇ ಇಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಬಿಪಿಎಲ್ ಕಾರ್ಡ್ ರದ್ದಾದರೂ, ಅವರನ್ನು ಎಪಿಎಲ್ ಕಾರ್ಡ್‌ಗೆ ವರ್ಗಾವಣೆ ಮಾಡುವುದಾಗಿ ಆಹಾರ ಸಚಿವ ವಿ.ಮುನಿಯಪ್ಪ ತಿಳಿಸುವ ಮೂಲಕ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಕೋಲಾರದ ಕಾಂಗ್ರೆಸ್ ನಗರಾಧ್ಯಕ್ಷ ಪ್ರಸಾದ್ ಬಾಬು ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಅನ್ನಭಾಗ್ಯ ಯೋಜನೆಯ ಹಣ ಈವರೆಗೆ ಬಿಡುಗಡೆ ಆಗಿಲ್ಲ. ಈ ಹಣವನ್ನು ಪ್ರತಿ ತಿಂಗಳು 10ರಂದು ಬಿಡುಗಡೆ ಮಾಡಲಾಗುತ್ತಿತ್ತು. ಸರ್ವರ್ ಸಮಸ್ಯೆಯಿಂದ ಈಗ ಬಿಡುಗಡೆ ಮಾಡಲಾಗಿಲ್ಲ. ಮುಂದಿನ ವಾರ ಬಿಡುಗಡೆ ಆಗಲಿದೆ ಎಂದುಬ ಭರವಸೆ ನೀಡಿದರು.
ಅದರಲ್ಲೂ ದಕ್ಷಿಣ ಭಾರತದಲ್ಲಿ ನಮ್ಮ ಕರ್ನಾಟಕದಲ್ಲೇ ಶೇಕಡ 80ರಷ್ಟು ಬಡತನ ಇದೆ. ಬಡತನ ರೇಖೆಗಿಂತ ಕಡಿಮೆ ಇರುವವರಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಅರ್ಹರಲ್ಲದವರೂ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಅವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ, ಎಪಿಎಲ್ ಕಾರ್ಡ್‌ಗೆ ವರ್ಗಾವಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.












Click it and Unblock the Notifications