Ration card: ಹೊಸ ಬಿಪಿಎಲ್, ಎಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ಸರ್ಕಾರದಿಂದ ಗುಡ್ ನ್ಯೂಸ್
ನವದೆಹಲಿ, ಡಿಸೆಂಬರ್, 19: ಹೊಸ ಎಪಿಎಲ್, ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. ಹಾಗಾದರೆ ಆ ಸಿಹಿಸುದ್ದಿ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಚುನಾವಣೆ ಅಂಗವಾಗಿ ಹೊಸ ಪಡಿತರ ಚೀಟಿ ವಿತರಣೆ ನಿಲ್ಲಿಸಲಾಗಿತ್ತು. ಇನ್ನು 15 ದಿನದೊಳಗೆ ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಡಿತರ ಚೀಟಿದಾರರಿಗೆ ಹಣದ ಬದಲು ಅಕ್ಕಿ ನೀಡಲು ಪ್ರಯತ್ನ ನಡೆಸಲಾಗುತ್ತಿದ್ದು, ಶೀಘ್ರವೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು… pic.twitter.com/JPmlylS2ie
— DIPR Karnataka (@KarnatakaVarthe) December 18, 2023
ಚುನಾವಣೆ ಅಂಗವಾಗಿ ಹೊಸ ಪಡಿತರ ಚೀಟಿ ವಿತರಣೆ ನಿಲ್ಲಿಸಲಾಗಿತ್ತು. ಇನ್ನು 15 ದಿನದೊಳಗೆ ಪರಿಶೀಲಿಸಿ ಹೊಸ ಪಡಿತರ ಚೀಟಿ ವಿತರಣೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಪಡಿತರ ಚೀಟಿದಾರರಿಗೆ ಹಣದ ಬದಲು ಅಕ್ಕಿ ನೀಡಲು ಪ್ರಯತ್ನ ನಡೆಸಲಾಗುತ್ತಿದ್ದು, ಶೀಘ್ರವೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೆ.ಎಚ್. ಮುನಿಯಪ್ಪ ಟ್ವೀಟ್ ಮೂಲಕ ತಿಳಿಸಿದ್ದಾರೆ.

6 ತಿಂಗಳಿನಿಂದ ರೇಷನ್ ಪಡೆಯದ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡುವ ಕುರಿತಂತೆ ಆಹಾರ ಇಲಾಖೆ ಚಿಂತನೆ ನಡೆಸಿದ್ದು, ಈ ಪೈಕಿ ಒಟ್ಟು 3.26 ಲಕ್ಷ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲು ಸರ್ಕಾರ ಮುಂದಾಗಿದೆ. ರಾಜ್ಯಾದ್ಯಂತ 3.26 ಲಕ್ಷ ಬಿಪಿಎಲ್ ಕಾರ್ಡುದಾರರು 6 ತಿಂಗಳಿಂದ ರೇಷನ್ ಪಡೆಯುತ್ತಿಲ್ಲ ಎಂದು ಇಲಾಖೆ ಹೇಳಿದೆ. ಇಂತಹ ಕಾರ್ಡ್‌ಗಳ ರದ್ದರ ಮಾಡಲಿ ಸರ್ಕಾರ ಸೂಚನೆ ಕೊಟ್ಟಿದೆ ಎನ್ನುವ ಮಾಹಿತಿಯನ್ನು ನೀಡಿದ್ದಾರೆ.
BPL: ಭಾರತದಲ್ಲಿ ಬಿಪಿಎಲ್ ಕುಟುಂಬಳಿಗೆ ಸಿಗುವ LPG ಸಿಲಿಂಡರ್ ಬೆಲೆ
ನವದೆಹಲಿ, ಡಿಸೆಂಬರ್, 12: ಬಿಪಿಎಲ್ ಕಾರ್ಡುದಾರರಿಗೆ ಆಗಾಗಾ ಸರ್ಕಾರ ಗುಡ್‌ನ್ಯೂಸ್ ಕೊಡುತ್ತಲೇ ಬಂದಿದೆ. ಹಾಗೆಯೇ ಉಜ್ವಲ ಯೋಜನೆಯಡಿ ಎಲ್.ಪಿ.ಜಿ. ಸಿಲಿಂಡರ್ ದರ ನೆರೆಯ ದೇಶಗಳಿಗಿಂತ ಕಡಿಮೆ ಇದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಅದರಲ್ಲೂ ಬಿಪಿಎಲ್ ಕುಟುಂಬಗಳಿಗೆ ನೀಡುತ್ತಿರುವ ಅಡುಗೆ ಅನಿಲ ಸಿಲಿಂಡರ್ ದರ ನೆರೆ ದೇಶಗಳಿಗೆ ಹೋಲಿಕೆ ಮಾಡಿದರೆ ಭಾರಿ ಕಡಿಮೆಯಿದೆ ಎಂದು ರಾಜ್ಯಸಭೆಯಲ್ಲಿ ಕೇಂದ್ರ ಸರ್ಕಾರ ತಿಳಿಸಿದೆ.
ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಈ ಬಗ್ಗೆ ಮಾತನಾಡಿದ್ದು, ಪಾಕಿಸ್ತಾನದಲ್ಲಿ ಪ್ರತಿ ಸಿಲಿಂಡರ್ ದರ 1,059 ರೂಪಾಯಿ, ಶ್ರೀಲಂಕಾದಲ್ಲಿ 1033 ರೂಪಾಯಿ, ನೇಪಾಳದಲ್ಲಿ 1,198 ರೂಪಾಯಿ ಇದ್ದು, ಇನ್ನು ನಮ್ಮ ಭಾರತದಲ್ಲಿ ಉಜ್ವಲ ಯೋಜನೆ ಅಡಿಯಲ್ಲಿ 14.2 ಕೆಜಿ ಸಿಲಿಂಡರ್ ಅನ್ನು ಕೇವಲ 603 ರೂಪಾಯಿಗೆ ನೀಡಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.












Click it and Unblock the Notifications