Ration Card Cancellation: ಗೃಹಲಕ್ಷ್ಮೀ ಯೋಜನೆಯ 2 ಸಾವಿರ ಬರಲ್ವಾ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು ?
Gruha Lakshmi scheme: ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್‌ಗಳ ರದ್ದು ವಿಚಾರ ಭಾರೀ ಸಂಚಲನವನ್ನೇ ಸೃಷ್ಟಿ ಮಾಡಿದೆ. ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಿ ಅವುಗಳಲ್ಲಿ ಅರ್ಹ ಕಾರ್ಡ್‌ಗಳನ್ನು ಎಪಿಎಲ್‌ಗೆ ಸೇರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ರಾಜ್ಯ ಸರ್ಕಾರದ ಈ ನಿರ್ಧಾರಕ್ಕೆ ಈಗಾಗಲೇ ವಿರೋಧ ಪಕ್ಷಗಳು ಸೇರಿದಂತೆ ರಾಜ್ಯದ ಜನರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಇದೇ ವಿಷಯವನ್ನು ಇರಿಸಿಕೊಂಡು ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಜಂಟಿಯಾಗಿ ಪ್ರತಿಭಟನೆ ನಡೆಸುತ್ತಿವೆ. ಇದೀಗ ಬಿಪಿಎಲ್ ಕಾರ್ಡ್‌ಗಳು ರದ್ದಾದರೆ, ಮುಂದೆ ಗೃಹಲಕ್ಷ್ಮೀ ಯೋಜನೆಯ ಹಣ ಕೂಡ ರದ್ದಾಗಲಿದೆಯೇ ಎನ್ನುವ ಆತಂಕ ಎದುರಾಗಿದ್ದು, ಈ ಬಗ್ಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಮಾನತಾಡಿದ್ದಾರೆ.
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್‌ಗಳ ರದ್ದತಿ ವಿಚಾರ ಭಾರೀ ಸಂಚಲವನ್ನೇ ಸೃಷ್ಟಿ ಮಾಡಿದೆ. ರಾಜ್ಯದಲ್ಲಿ ಅಂದಾಜು 22 ಲಕ್ಷಕ್ಕೂ ಹೆಚ್ಚು ಅನರ್ಹ ಬಿಪಿಎಲ್ ಕಾರ್ಡ್‌ಗಳು ಇವೆ. ಈ ಕಾರ್ಡ್‌ಗಳನ್ನು ರದ್ದು ಮಾಡುವುದಾಗಿಯೂ ಅಲ್ಲದೇ ಅರ್ಹ ಕಾರ್ಡ್‌ಗಳನ್ನು ಎಪಿಎಲ್‌ಗೆ ಬದಲಾಯಿಸುವುದಾಗಿ (ವರ್ಗಾವಣೆ) ರಾಜ್ಯ ಕಾಂಗ್ರೆಸ್ ಸರ್ಕಾರ ಹೇಳಿರುವುದು ವರದಿಯಾಗಿದೆ.

ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವವರನ್ನು ಬಿಪಿಎಲ್ ಕಾರ್ಡ್‌ಗೆ ಸೇರಿಸಲಾಗುತ್ತದೆ. ಆದರೆ, ರಾಜ್ಯದಲ್ಲಿ ಬಿಪಿಎಲ್ ರೇಷನ್ ಕಾರ್ಡ್‌ಗೆ ಅರ್ಹರಲ್ಲದ ಲಕ್ಷಾಂತರ ಜನ ಬಿಪಿಎಲ್ ಕಾರ್ಡ್‌ಗಳನ್ನು ಪಡೆದುಕೊಂಡಿದ್ದಾರೆ. ಅರ್ಹರಿಗೆ ಈ ಯೋಜನೆಯನ್ನು ತಲುಪಿಸುವ ಉದ್ದೇಶದಿಂದ ಅನರ್ಹರ ಕಾರ್ಡ್‌ಗಳನ್ನು ರದ್ದು ಪಡಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಆದರೆ, ಈ ರೀತಿ ಕಾರ್ಡ್‌ಗಳನ್ನು ರದ್ದು ಮಾಡುವುದರಿಂದ ರೇಷನ್‌ನೊಂದಿಗೆ ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಪ್ರತಿ ತಿಂಗಳೂ ಮನೆಯ ಯಜಮಾನಿಗೆ ನೀಡುವ 2,000 ಸಾವಿರ ರೂಪಾಯಿ ತಪ್ಪಲಿದೆಯೇ ಎನ್ನುವ ಆತಂಕ ಶುರುವಾಗಿದೆ.
ಯಾಕೆಂದರೆ ಗೃಹಲಕ್ಷ್ಮೀ ಯೋಜನೆಯಲ್ಲೂ ರೇಷನ್ ಕಾರ್ಡ್‌ಗಳೇ ಪ್ರಧಾನ ಆಧಾರ ಅಥವಾ ದಾಖಲೆಗಳಾಗಿವೆ. ಒಂದೊಮ್ಮೆ ಬಿಪಿಎಲ್ ಕಾರ್ಡ್‌ಗಳ ಮಾನದಂಡವನ್ನೇ ಈ ಯೋಜನೆಯಲ್ಲೂ ಅನುಸರಿಸಿದರೆ, ಲಕ್ಷಾಂತರ ಜನರು ಪ್ರತಿ ತಿಂಗಳು ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ ಸಿಗುವ 2,000 ಸಾವಿರ ರೂಪಾಯಿ ಹಣ ಮಿಸ್ ಆಗಲಿದೆ ಎನ್ನಲಾಗಿದೆ.
ಗೃಹಲಕ್ಷ್ಮೀ ಹಣ ಬಿಡುಗಡೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು ?
ಇನ್ನು ಕರ್ನಾಟಕದಲ್ಲಿ ಬಿಪಿಎಲ್ ಕಾರ್ಡ್ ರದ್ದಾದರೆ, ಗೃಹಲಕ್ಷ್ಮೀ ಹಣವೂ ರದ್ದಾಗಲಿದೆಯೇ ಎನ್ನುವ ಪ್ರಶ್ನೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಉತ್ತರಿಸಿದ್ದಾರೆ. ರಾಜ್ಯದಲ್ಲಿ ಯಾವುದೇ ರೇಷನ್ ಕಾರ್ಡ್‌ಗಳು ಬಿಪಿಎಲ್ ಕಾರ್ಡ್ನಿಂದ ಎಪಿಎಲ್ ಕಾರ್ಡ್‌ಗೆ ವರ್ಗಾವಣೆಯಾದರೂ ಗೃಹ ಲಕ್ಷ್ಮೀ ಹಣ ಬರುವುದು ನಿಲ್ಲುವುದಿಲ್ಲ. ಬಿಪಿಎಲ್ನೊಂದಿಗೆ ಎಪಿಎಲ್ ಕಾರ್ಡ್ ಇರುವವರಿಗೂ ಗೃಹಲಕ್ಷ್ಮೀ ಹಣ ಬರಲಿದೆ ಎಂದು ಅವರ ಸ್ಪಷ್ಟನೆ ನೀಡಿದ್ದಾರೆ. ಇದರಿಂದ ಗೃಹಲಕ್ಷ್ಮೀ ಹಣದ ಫಲಾನುಭವಿಗಳು ನಿಟ್ಟುಸಿರು ಬಿಡುವಂತಾಗಿದೆ.
ವಿರೋಧ ಪಕ್ಷಗಳಿಂದ ಪ್ರತಿಭಟನೆ: ರಾಜ್ಯದಲ್ಲಿ ವಿವಿಧ ಭಾಗದಲ್ಲಿ ಈಗಾಗಲೇ ಬಿಪಿಎಲ್ ಕಾರ್ಡ್‌ಗಳ ರದ್ದು ವಿಚಾರವಾಗಿ ಸರಣಿ ಪ್ರತಿಭಟನೆಗಳು ನಡೆಯುತ್ತಿವೆ. ರಾಜ್ಯ ಸರ್ಕಾರವು ಆರ್ಥಿಕವಾಗಿ ದಿವಾಳಿಯಾಗಿದ್ದು, ಇದನ್ನು ಮರೆಮಾಚುವ ಉದ್ದೇಶದಿಂದಲೇ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಲಾಗುತ್ತಿದೆ ಎಂದು ವಿರೋಧ ಪಕ್ಷಗಳು ದೂರಿವೆ. ಅಲ್ಲದೇ, ಈ ಬಗ್ಗೆ ಆಡಳಿತ ಪಕ್ಷವೂ ಸಹ ಸಮರ್ಥನೆ ಮಾಡಿಕೊಂಡಿದೆ. ಅರ್ಹರಿಗೆ ಸೌಲಭ್ಯ ತಲುಪಬೇಕು ಎನ್ನುವ ಉದ್ದೇಶದಿಂದ ನಾವು ಈ ಕ್ರಮ ತೆಗೆದುಕೊಂಡಿದ್ದೇವೆ. ಸರ್ಕಾರಿ ನೌಕರರಿಗೂ ಬಿಪಿಎಲ್ ಕಾರ್ಡ್ ಯಾಕೆ ಬೇಕು ಎಂದು ಪ್ರಶ್ನೆ ಮಾಡಿದೆ.












Click it and Unblock the Notifications