Ration: ರಾಜ್ಯದಲ್ಲಿ ಯಾಕ್‌ ಇನ್ನೂ ಅಕ್ಕಿ ಕೊಡ್ಲಿಲ್ಲ ಅನ್ನೋರಿಗೆ ಇಲ್ಲಿದೆ ಸಿಹಿ ಸುದ್ದಿ

Ration: ರಾಜ್ಯದ ರೇಷನ್ ಕಾರ್ಡುದಾರರಿಗೆ ಆಹಾರ ಇಲಾಖೆ ಸಿಹಿ ಸುದ್ದಿ ನೀಡಿದೆ. ಆಗಸ್ಟ್‌ನಲ್ಲೇ ಎರಡು ತಿಂಗಳ ಪಡಿತರ ವಿತರಣೆ ಮಾಡಲು ನಿರ್ಧಾರ ಮಾಡಿದೆ. ಹಾಗಾದ್ರೆ ಯಾಕೆ ಈ ನಿಲುವು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಸಾರ್ವಜನಿಕ ವಿತರಣೆ ವ್ಯವಸ್ಥೆಯಡಿ ಪಡಿತರ ಪಡೆಯುತ್ತಿರುವವವರಿಗೆ ಸರ್ಕಾರ ಮಹತ್ವದ ಮಾಹಿತಿಯೊಂದನ್ನ ನೀಡಿದೆ. ಕೇಂದ್ರ ಸರ್ಕಾರದ ಹೊಸ ನಿರ್ದೇಶನದಂತೆ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯಡಿ ಆಗಸ್ಟ್ ಮತ್ತು ಸೆಪ್ಟೆಂಬರ್-2026ರ ಎರಡು ತಿಂಗಳ ಪಡಿತರ ಆಹಾರ ಧಾನ್ಯಗಳನ್ನು ಆಗಸ್ಟ್ ತಿಂಗಳಿನಲ್ಲೇ ಒಟ್ಟಿಗೆ ವಿತರಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ.

Ration Card Karnataka Government to Distribute August And September Ration Together Know details

ಎರಡು ಬಾರಿ ಬಯೋಮೆಟ್ರಿಕ್‌..

ಇದರಿಂದಾಗಿ ಫಲಾನುಭವಿಗಳು ಮುಂದಿನ ತಿಂಗಳ ಪಡಿತರಕ್ಕಾಗಿ ಕಾಯುವ ಅಗತ್ಯ ಇರುವುದಿಲ್ಲ. ನ್ಯಾಯಬೆಲೆ ಅಂಗಡಿಗಳಲ್ಲಿ ಎರಡೂ ತಿಂಗಳ ಧಾನ್ಯ ವಿತರಣೆಗೆ ಅಗತ್ಯ ಸಿದ್ಧತೆಗಳನ್ನು ಪೂರ್ಣಗೊಳಿಸಲಾಗಿದ್ದು, ಈ ಸೌಲಭ್ಯ ಪಡೆಯಲು ಫಲಾನುಭವಿಗಳು ಎರಡೂ ತಿಂಗಳಿಗೆ ಪ್ರತ್ಯೇಕವಾಗಿ ಎರಡು ಬಾರಿ ಬಯೋಮೆಟ್ರಿಕ್‌ ದೃಢೀಕರಣ ನೀಡುವುದು ಕಡ್ಡಾಯವಾಗಿದೆ ಎಂದು ತಿಳಿದುಬಂದಿದೆ.

ಅಂತ್ಯೋದಯ ಕಾರ್ಡ್‌ದಾರರಿಗೆ ಮಾಹಿತಿ

ಅಂತ್ಯೋದಯ ಅನ್ನ ಯೋಜನೆಯಡಿ ಪಡಿತರ ಪಡೆಯುವ ಪ್ರತಿ ಕುಟುಂಬಕ್ಕೆ ಒಟ್ಟು 28 ಕೆ.ಜಿ. ಅಕ್ಕಿ ಹಾಗೂ 42 ಕೆ.ಜಿ. ರಾಗಿ ಉಚಿತವಾಗಿ ದೊರೆಯಲಿದೆ. (ಅಂದರೆ ಆಗಸ್ಟ್ ತಿಂಗಳಿಗೆ 14 ಕೆ.ಜಿ. ಅಕ್ಕಿ, 21 ಕೆ.ಜಿ. ರಾಗಿ ಹಾಗೂ ಸೆಪ್ಟೆಂಬರ್ ತಿಂಗಳಿಗೆ 14 ಕೆಜಿ ಅಕ್ಕಿ, 21 ಕೆಜಿ ರಾಗಿ ಸೇರಿ ಒಟ್ಟಿಗೆ ನೀಡಲಾಗುತ್ತದೆ).

ಕೇಂದ್ರ ಸರ್ಕಾರದ ಯೋಜನೆಯಡಿ ಪ್ರತಿ ಫಲಾನುಭವಿಗೆ ಒಟ್ಟು 4 ಕೆ.ಜಿ. ಅಕ್ಕಿ ಹಾಗೂ 6 ಕೆ.ಜಿ. ರಾಗಿ ಸಿಗಲಿದೆ. (ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಿಗೆ ತಲಾ 2 ಕೆಜಿ ಅಕ್ಕಿ ಮತ್ತು 3 ಕೆ.ಜಿ. ರಾಗಿ). ಜೊತೆಗೆ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಪ್ರತಿ ಫಲಾನುಭವಿಗೆ ನೀಡಲಾಗುವ 10 ಕೆ.ಜಿ. ಉಚಿತ ಅಕ್ಕಿ ವಿತರಣೆ ಮುಂದುವರೆಯಲಿದೆ.

ಈ ಯೋಜನೆಯಡಿ ದೇಶದ ಯಾವುದೇ ಭಾಗದ ಪಡಿತರ ಚೀಟಿದಾರರು ತಮ್ಮ ವಾಸಸ್ಥಳದ ಹತ್ತಿರದ ಯಾವುದೇ ನ್ಯಾಯಬೆಲೆ ಅಂಗಡಿಯಲ್ಲೂ ಪಡಿತರ ಪಡೆದುಕೊಳ್ಳಲು ಅವಕಾಶ ಇದೆ. ಉದ್ಯೋಗ, ಶಿಕ್ಷಣದ ನಿಮಿತ್ತ ಬೇರೆಡೆ ವಾಸಿಸುವವರಿಗೆ ಇದು ಹೆಚ್ಚು ಅನುಕೂಲಕರವಾಗಿದೆ. ಉಚಿತವಾಗಿ ನೀಡುವ ಪಡಿತರ ಧಾನ್ಯಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುವುದು, ಅಕ್ರಮ ಸಂಗ್ರಹಿಸುವುದು ಅಥವಾ ದುರುಪಯೋಗಪಡಿಸಿಕೊಳ್ಳುವುದು ಕಂಡುಬಂದಲ್ಲಿ ಅಂತಹ ಕಾರ್ಡ್‌ದಾರರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಪಡಿತರ ಚೀಟಿ ತಿದ್ದುಪಡಿ ಕುರಿತು ಮಹತ್ವದ ಮಾಹಿತಿ

ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಗಳನ್ನು ತಪ್ಪಿಸಲು ಸರ್ಕಾರವು ನಿರ್ದಿಷ್ಟ ಸಮಯವನ್ನು ನಿಗದಿಪಡಿಸಿರುತ್ತದೆ. ಆದ್ದರಿಂದ ಪಡಿತರ ಚೀಟಿದಾರರು ಕೊನೆಯ ಕ್ಷಣದ ಗಡಿಬಿಡಿ ತಪ್ಪಿಸಲು ಕೂಡಲೇ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ತಿದ್ದುಪಡಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳುವುದು ಉತ್ತಮ. ರೇಷನ್ ಕಾರ್ಡ್ ತಿದ್ದುಪಡಿಗೆ ಆನ್‌ಲೈನ್ ಹಾಗೂ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು ಮಾರ್ಚ್‌ 31ರ 2027ರ ವರೆಗೆ ಅವಕಾಶ ಕಲ್ಪಿಸಲಾಗಿದೆ.

ಏನೆಲ್ಲಾ ತಿದ್ದುಪಡಿ ಮಾಡಿಸಬಹುದು?

* ಹೊಸ ಸದಸ್ಯರ ಹೆಸರು ಸೇರ್ಪಡೆ
* ವಿಳಾಸ ಬದಲಾವಣೆ ಹಾಗೂ ಮೊಬೈಲ್ ಸಂಖ್ಯೆ ಜೋಡಣೆ
* ಹೆಸರು ತೆಗೆದುಹಾಕುವುದು
* ಕುಟುಂಬದ ಮುಖ್ಯಸ್ಥರ ಬದಲಾವಣೆ
* ಫೋಟೋ ಬದಲಾವಣೆ
* ಸದಸ್ಯರ ಜಾತಿ ಮತ್ತು ಆದಾಯ ಪ್ರಮಾಣಪತ್ರ 6 ವರ್ಷ ಮೆಲ್ಪಟ್ಟವರಿಗೆ
* ಜನನ ಪ್ರಮಾಣ ಪತ್ರ (6 ವರ್ಷದ ಒಳಗಿನ ಮಕ್ಕಳಿಗೆ)

ಪತ್ನಿ ಹೆಸರು ಸೇರ್ಪಡೆಗೆ ಬೇಕಾಗುವ ದಾಖಲೆಗಳು

* ಆಧಾರ್ ಕಾರ್ಡ್
* ಮದುವೆ ಪ್ರಮಾಣ ಪತ್ರ
* ಪೋಷಕರ ಪಡಿತರ ಚೀಟಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+