Ration Card: ರಾಜ್ಯದಲ್ಲಿ ಹೊಸ ಪಡಿತರ ಚೀಟಿ ವಿತರಣೆ, ಅರ್ಜಿ ಸಲ್ಲಿಕೆ ಬಗ್ಗೆ ಮಹತ್ವದ ಅಪ್ಡೇಟ್ ಕೊಟ್ಟ ಕೆ.ಎಚ್.ಮುನಿಯಪ್ಪ
Ration Card: ರಾಜ್ಯದಲ್ಲಿ ಸದ್ಯ ಇದೀಗ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾವಣೆ ಮಾಡಲಾಗುತ್ತಿದೆ. ಈ ನಡುವೆಯೇ ಇದೀಗ ಹೊಸ ಪಡಿತರ ಚೀಟಿ ವಿತರಣೆ ಹಾಗೂ ಅರ್ಜಿ ಸಲ್ಲಿಕೆ ಬಗ್ಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ಮಹತ್ವದ ಅಪ್ಡೇಟ್‌ವೊಂದನ್ನು ಕೊಟ್ಟಿದ್ದಾರೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಪಡಿತರ ಚೀಟಿ ವಿತರಣೆ ಯಾವಾಗ?: ರಾಜ್ಯದಲ್ಲಿ ಕಳೆದ ಎರಡೂವರೆ ವರ್ಷದಿಂದ ಹೊಸ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಕೆ ಮಾಡಿದವರಿಗೆ ಮುಂದಿನ ಒಂದೆರಡು ತಿಂಗಳಲ್ಲಿ ಪಡಿತರ ಚೀಟಿ ವಿತರಣೆ ಮಾಡಲಾಗುವುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಕೆ.ಎಚ್.ಮುನಿಯಪ್ಪ ಅವರು ಕಲಬುರಗಿಯಲ್ಲಿ ಹೇಳಿದರು. ಇದೇ ವೇಳೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಯಾವಾಗ ಆರಂಭ ಆಗಲಿದೆ ಎನ್ನುವ ಮಾಹಿತಿಯನ್ನು ಸಹ ನೀಡಿದ್ದಾರೆ.

ನಗರದ ಐವಾನ್‌ಎ ಶಾಹಿ ಅತಿಥಿಗೃಹದಲ್ಲಿ ಮಾತನಾಡಿದ ಅವರು, ಪರಿಷ್ಕರಣೆ ಸೇರಿ ಹಲವಯ ಕಾರಣಗಳಿಂದ ಕಳೆದ ಎರಡೂವರೆ ವರ್ಷದಿಂದ ಹೊಸ ಪಡಿತರ ಚೀಟಿ ನೀಡಲು ಸಾಧ್ಯ ಆಗಿಲ್ಲ. ಸುಮಾರು 2.5 ಲಕ್ಷದಿಂದ 3ಲಕ್ಷ ಅರ್ಜಿಗಳು ಸದ್ಯ ಬಾಕಿ ಇರುವ ಬಗ್ಗೆ ಮಾಹಿತಿಯಿದೆ. ಎಲ್ಲವೂ ಪರಿಶೀಲನೆ ಮಾಡಿ ಹೊಸ ಪಡಿತರ ಚೀಟಿಗಳನ್ನು ಶೀಘ್ರದಲ್ಲೇ ವಿತರಣೆ ಮಾಡಲಾಗುವುದು ಎಂದು ಹೇಳಿದರು.
ಅರ್ಜಿ ಸಲ್ಲಿಕೆ ಪ್ರಕ್ರಿಯೆ ಯಾವಾಗ ಆರಂಭ?: ಇದೇ ವೇಳೆ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆಗೆ ಯಾವಾಗ ಅವಕಾಶ ಕಲ್ಪಿಸಲಾಗುತ್ತದೆ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮೊದಲು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಕೆ ಮಾಡಿದವರಿಗೆ ಪಡಿತ ವಿತರಣೆ ಮಾಡಲಾಗುತ್ತದೆ. ಇದು ಪ್ರಕ್ರಿಯೆ ಜನವರಿ ಅಂತ್ಯದೊಳಗೆ ಮುಗಿಯಲಿದ್ದು, ಮುಂದಿನ ತಿಂಗಳು ಫೆಭ್ರವರಿಯಿಂದ ಹೊಸ ಪಡಿತರ ಚೀಟಿ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ತಿಳಿಸಿದರು.
ಇಂದಿರಾ ಕಿಟ್‌ನಲ್ಲಿ ಏನೆಲ್ಲಾ ಇರುತ್ತದೆ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ಇಂದಿರಾ ಕಿಟ್ ಅನ್ನು ವಿತರಣೆ ಶೀಘ್ರದಲ್ಲೇ ವಿತರಣೆ ಮಾಡಲಾಗಯತ್ತದೆ. ಜನವರಿ ಅಂತ್ಯ ಅಥವಾ ಮುಂದಿನ ತಿಂಗಳಿನಿಂದ ವಿತರಣೆ ಮಾಡಲಾಗುತ್ತದೆ. ಇದರಲ್ಲಿ ತೊಗರಿ ಬೇಳೆ, ಸಕ್ಕರೆ, ಎಣ್ಣೆ ಮತ್ತು ಉಪ್ಪು ಇರಲಿದೆ. ಅಕ್ಕಿ ಸದುಪಯೋಗ ಆಗುತ್ತಿಲ್ಲ ಎಂದು ತಿಳಿದಾಗ ನಾವು ಈ ನಿರ್ಧಾರ ತೆಗೆದುಕೊಂಡೆವು ಎಂದು ಹೇಳಿದರು.
ಕಿಟ್‌ನಲ್ಲಿ ಏನೆಲ್ಲಾ ಇರುತ್ತದೆ?
* ತೊಗರಿ ಬೇಳೆ
* ಅಡುಗೆ ಎಣ್ಣೆ
* ಸಕ್ಕರೆ
* ಉಪ್ಪು
ಸಿಎಂ ಬದಲಾವಣೆ ಕುರಿತು ಮುನಿಯಪ್ಪ ಹೇಳಿದ್ದೇನು?: ಸಿಎಂ ಬದಲಾವಣೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ನಮಗೊಂದು ಹೈಕಮಾಂಡ್ ಇದೆ. ಯಾರು ಮುಖ್ಯಮಂತ್ರಿ ಆಗಿ ಮುಂದುವರಿಯಬೇಕು ಅಥವಾ ಯಾರು ಇಳಿಯಬೇಕು ಎಂಬ ನಿರ್ಧಾರವನ್ನು ಹೈಕಮಾಂಡ್ ತೆಗೆದುಕೊಳ್ಳುತ್ತದೆ. ಹೈಕಮಾಂಡ್ ನಮಗೆ ಈಗಾಗಲೇ ಸ್ಪಷ್ಟವಾಗಿ ತಿಳಿಸಿದೆ. ಆದ್ದರಿಂದ ನಾವೆಲ್ಲರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದೇವೆ. ಸಿದ್ದರಾಮಯ್ಯ ಅವರು ಸಹ ಹೈಕಮಾಂಡ್ ಸೂಚನೆಯನ್ನು ಮೀರದಂತೆ ಕೆಲಸ ಮಾಡುತ್ತಿದ್ದಾರೆ. ಸದ್ಯ ರಾಜ್ಯ ರಾಜಕಾರಣದಲ್ಲಿ ಯಾವುದೇ ಅಸ್ಥಿರತೆ ಇಲ್ಲ. ಸರ್ಕಾರದ ಗಮನ ಕೇವಲ ಜನಪರ ಕೆಲಸಗಳ ಕಡೆಗೆ ಇದೆ ಎಂದು ಮುನಿಯಪ್ಪ ಅವರು ಹೇಳಿದರು. ಅಲ್ಲದೆ, ಸಂಕ್ರಾಂತಿ ಬಳಿಕ ಯಾವುದೇ ಕ್ರಾಂತಿ ಆಗುವುದಿಲ್ಲ. ಅವೆಲ್ಲವೂ ಊಹಾಪೋಹಗಳು. ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಸುಭದ್ರ ಆಗಿದೆ. ಯಾವುದೇ ಕಾರಣಕ್ಕೂ ಬದಲಾವಣೆ ಆಗುವುದಿಲ್ಲ ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ಅವರು ಸ್ಪಷ್ಟಪಡಿಸಿದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications