Ration Card: ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕ ಮತ್ತೆ ವಿಸ್ತರಣೆ: ಬೇಕಾಗುವ ದಾಖಲೆಗಳಿವು
Ration Card: ಪಡಿತರ ಚೀಟಿ ಪ್ರಮುಖ ದಾಖಲೆಗಳಲ್ಲಿ ಒಂದಾಗಿದೆ. ಈ ಕುರಿತು ಆಗಾಗ ಮಹತ್ವದ ಅಪ್ಡೇಟ್‌ಗಳು ಹೊರಬೀಳುತ್ತಲೇ ಇರುತ್ತವೆ. ಹಾಗೆಯೇ ಇದೀಗ ರೇಷನ್ ಕಾರ್ಡ್ ತಿದ್ದುಪಡಿ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಹಾಗಾದ್ರೆ ಎಲ್ಲಿಯವರೆಗೂ ಹಾಗೂ ಯಾವೆಲ್ಲಾ ದಾಖಲೆಗಳು ಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜ್ಯದಲ್ಲಿ ಸದ್ಯ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸಲಾಗುತ್ತಿದೆ. ಅಲ್ಲದೆ, ಆಹಾರ ಇಲಾಖೆ ಒಂದು ಹೆಜ್ಜೆಯನ್ನು ಮುಂದಿಟ್ಟಿದ್ದು, ಬಿಪಿಎಲ್ ಕಾರ್ಡ್ ಹೊಂದಿದ ಅನರ್ಹರಿಗೆ ದಂಡಾಸ್ತ್ರ ಪ್ರಯೋಗಿಸಲು ಸಗ ಮುಂದಾಗಿದೆ ಎನ್ನುವ ಮಾಹಿತಿ ಇದೆ. ಈ ನಡುವೆಯೇ ಪಡಿತರ ಚೀಟಿ ತಿದ್ದುಪಡಿ ನಿರೀಕ್ಷೆಯಲ್ಲಿ ಇದ್ದವರಿಗೆ ಗುಡ್‌ನ್ಯೂಸ್ ಸಿಕ್ಕಿದೆ.

ಹೌದು.. ಕಳೆದ ಕೆಲವು ದಿನಗಳ ಹಿಂದೆ ಪಡಿತರ ಚೀಟಿ ತಿದ್ದುಪಡಿ ಕಾರ್ಯವನ್ನು ನಿಲ್ಲಿಸಲಾಗಿತ್ತು. ಆದರೆ, ಇದೀಗ ಮತ್ತೆ ಅವಕಾಶ ಕಲ್ಪಿಸಿಕೊಡಲಾಗಿದೆ. ಫಲಾನುಭವಿಗಳು ಯಾವುದೇ ತಿದ್ದುಪಡಿ ಇದ್ದರೂ ಮಾಡಿಸಬಹುದಾಗಿದೆ. ಹಾಗಾದ್ರೆ ಏನೆಲ್ಲಾ ತಿದ್ದುಪಡಿ ಮಾಡಿಸಬಹುದು? ಯಾವೆಲ್ಲಾ ದಾಖಲೆಗಳು ಬೇಕು ಹಾಗೂ ಕೊನೇ ದಿನಾಂಕ ಯಾವಾಗ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿ ನೀಡಲಾಗಿದೆ ನೋಡಿ.
ಇದೀಗ ಪಡಿತರ ಚೀಟಿ ತಿದ್ದುಪಡಿ ಕಾರ್ಯ ಆರಂಭವಾಗಿದ್ದು, ಈ ಅವಕಾಶವನ್ನು 2025 ನವೆಂಬರ್ ತಿಂಗಳಾಂತ್ಯದವರೆಗೂ ಕಲ್ಪಿಸಲಾಗಿದೆ. ಇದು ವಿಸ್ತರಣೆ ಆದರೂ ಆಗಬಹುದು ಎನ್ನುವ ಮಾತಿ ಇದೆ. ಯಾರೆಲ್ಲಾ ತಮ್ಮ ಪಡಿತರ ಚೀಟಿ ತಿದ್ದುಪಡಿ ಮಾಡಿಸಿಕೊಳ್ಳಬೇಕೋ ಅಂತಹವರು ಹತ್ತಿತರ ನ್ಯಾಯಬೆಲೆ ಅಂಗಡಿ ಹಾಗೂ ಆನ್‌ಲೈನ್ (ಬೆಂಗಳೂರು ಒನ್, ಗ್ರಾಮ ಒನ್) ಸೈಬರ್ ಸೆಂಟರ್‌ಗಳಿಗೆ ಭೇಟಿ ನೀಡಬಹುದು ಎಂದು ತಿಳಿಸಲಾಗಿದೆ.
ಎಲ್ಲಿ ಅರ್ಜಿ ಸಲ್ಲಿಸಬಹುದು?: ಈಗಾಗಲೇ ಪಡಿತರ ಚೀಟಿ ಹೊಂದಿದವರು ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಇತರ ಸದಸ್ಯರ ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ http://ahara.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು. ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೂ ಅರ್ಜಿ ಸಲ್ಲಿಕೆ ಮಾಡಬಹುದು.
ಏನೆಲ್ಲಾ ತಿದ್ದುಪಡಿ ಮಾಡಿಸಬಹುದು?
* ಹೆಸರು ತಿದ್ದುಪಡಿ
* ಹೆಸರು ಸೇರ್ಪಡೆ
* ಹೆಸರು ತೆಗೆದುಹಾಕುವಿಕೆ
* ವಿಳಾಸ ಬದಲಾವಣೆ
* ಫೋಟೋ ಬದಲಾವಣೆ
* ಕುಟುಂಬ ಮುಖ್ಯಸ್ಥರ ಬದಲಾವಣೆ
* ನ್ಯಾಯಬೆಲೆ ಅಂಗಡಿ ಬದಲಾವಣೆ
* ಫೋಟೋ ಬದಲಾವಣೆ
ಯಾವೆಲ್ಲಾ ದಾಖಲೆಗಳು ಬೇಕು?
* ಎಲ್ಲಾ ಸದಸ್ಯರ ಆಧಾರ ಕಾರ್ಡ್
* ಸದಸ್ಯರ ಜಾತಿ ಮತ್ತು ಆದಾಯ 6 ವರ್ಷ ಮೆಲ್ಪಟ್ಟವರಿಗೆ
* ಜನನ ಪ್ರಮಾಣ ಪತ್ರ 6 ವರ್ಷದ ಒಳಗಿನ ಮಕ್ಕಳಿದ್ದರೆ
ಪತ್ನಿ ಹೆಸರು ಸೇರ್ಪಡೆಗೆ ಬೇಕಾಗುವ ದಾಖಲೆಗಳು
* ಆಧಾರ್ ಕಾರ್ಡ್
* ಮದುವೆ ಪ್ರಮಾಣ ಪತ್ರ
* ಪೋಷಕರ ಪಡಿತರ ಚೀಟಿ
ಮಗುವಿನ ಹೆಸರು ಸೇರ್ಪಡೆ: ಬೇಕಾಗುವ ದಾಖಲೆಗಳು
* ಮಗುವಿನ ಜನನ ಪ್ರಮಾಣಪತ್ರ
* ಪೋಷಕರ ಆಧಾರ್ ಕಾರ್ಡ್
ಅರ್ಜಿ ಸಲ್ಲಿಸುವ ವಿಧಾನಗಳು
* ಅಧಿಕೃತ ವೆಬ್ ಸೈಟ್ https://ahara.kar.nic.in/homeಗೆ ಭೇಟಿ ನೀಡಿ
* ಮುಖ್ಯ ಪುಟದಲ್ಲಿ ಇ-ಸೇವೆಗಳ ಮೇಲೆ ಕ್ಲಿಕ್ ಮಾಡಿ
* ತಿದ್ದುಪಡಿ/ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಿ
* ಹೊಸ ಪೇಜ್‌ನಲ್ಲಿ ಫಾರ್ಮ್‌ನಲ್ಲಿ ಅಗತ್ಯ ಮಾಹಿತಿಯನ್ನ ಭರ್ತಿ ಮಾಡಿ
* ಅಗತ್ಯ ದಾಖಲೆಗಳ ಸ್ಕ್ಯಾನ್ ಪ್ರತಿಯನ್ನು ಅಪ್ಲೋಡ್ ಮಾಡಿ ಫಾರ್ಮ್ ಸಲ್ಲಿಸಿ (ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ)
* ಅರ್ಜಿ ಸಲ್ಲಿಕೆ ವೇಳೆ ಎಲ್ಲಾ ದಾಖಲಾತಿಗಳು ಸರಿಯಾಗಿದ್ದರೆ, ನಿಮ್ಮ ಮನಗೆ ಅಪ್ಡೇಟ್ ಆಗಿರುವ ಹೊಸ ಪಡಿತರ ಚೀಟಿ ಬರುತ್ತದೆ. ಇಲ್ಲದಿದ್ದರೆ ಬರುವುದಿಲ್ಲ. ಆದ್ದರಿಂದ ಎಲ್ಲಾ ದಾಖಲೆಗಳನ್ನು ಮುಂಚಿತವಾಗಿ ರೆಡಿ ಮಾಡಿಟ್ಟುಕೊಳ್ಳುವುದು ಒಳಿತು.












Click it and Unblock the Notifications