Ration: ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರು ಗಮನಿಸಲೇಬೇಕಾದ ಪ್ರಮುಖ ಮಾಹಿತಿ
Ration: ಸದ್ಯ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿ ಎಲ್ಪಿಎಲ್ಗೆ ವರ್ಗಾಹಿಸಲಾಗುತ್ತಿದೆ. ಈ ಮಹತ್ವದ ಕಾರ್ಯ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಮುಂದುವರೆದಿದೆ. ಈ ನಡುವೆಯೇ ಇದೀಗ ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಅನುಕೂಲವಾಗುವ ಗುಡ್ ನ್ಯೂಸ್ವೊಂದು ಇದೆ. ಹಾಗಾದ್ರೆ, ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಾಮಾನ್ಯವಾಗಿ ಬಿಪಿಎಲ್ ಪಡಿತರ ಚೀಟಿಯನ್ನು ಬಡತನ ರೇಖೆಗಿಂತ ಕೆಳಗಿರುವರರಿಗೆ ನೀಡಲಾಗುತ್ತದೆ. ಆದರೆ, ಇದನ್ನು ಶ್ರೀಮಂತರು ಕೂಡ ಪಡೆದುಕೊಂಡಿದ್ದ, ಇಂತಹರಿಗೆ ಕಡಿವಾಣ ಹಾಕುವ ಕಾರ್ಯಚರಣೆಯನ್ನಯ ಸರ್ಕಾರ ಮುಂದುವರೆಸಿದೆ. ಈ ನಡುವೆಯೆ ಪಡಿತರ ಚೀಟಿದಾರರು ಗಮನಿಸಲೇಬೇಕಾದ ಮಹತ್ವದ ಮಾಹಿಯೊಂದನ್ನು ಇಲ್ಲಿ ನೀಡಲಾಗಿದೆ.

ಯಾರಿಗೆ ಎಷ್ಟು ಕೆಜಿ ಅಕ್ಕಿ?: ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಡಿಸೆಂಬರ್-2025ರ ಮಾಹೆಗೆ ಪ್ರತಿ ಅಂತ್ಯೋದಯ ಪಡಿತರ ಚೀಟಿಗೆ 21 ಕೆ.ಜಿ ರಾಗಿ ಹಾಗೂ 14 ಕೆ.ಜಿ ಅಕ್ಕಿ ಹಾಗೂ ಬಿಪಿಎಲ್ ಪಡಿತರ ಚೀಟಿ ಪ್ರತಿ ಫಲಾನುಭವಿಗೆ 3 ಕೆ.ಜಿ ರಾಗಿ ಹಾಗೂ 2 ಕೆ.ಜಿ ಅಕ್ಕಿಯನ್ನು ಉಚಿತವಾಗಿ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಲಾಗಿತ್ತು. ಇದರ ಜೊತೆಗೆ ಕೆಲವೊಂದು ಮಹತ್ವದ ಅಪ್ಡೇಟ್ಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಇದರ ಜೊತೆಗೆ ಏಕ ಸದಸ್ಯ, ದ್ವಿಸದಸ್ಯ ಮತ್ತು ತ್ರಿಸದಸ್ಯ ಎಎವೈ ಪಡಿತರ ಚೀಟಿಗಳನ್ನು ಹೊರತುಪಡಿಸಿ ನಾಲ್ಕು ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರುಳ್ಳ ಎಎವೈ ಪಡಿತರ ಚೀಟಿಯ ಪ್ರತಿ ಫಲಾನುಭವಿಗೆ ಮತ್ತು ಪಿಎಚ್ಎಚ್ ಪಡಿತರ ಚೀಟಿಯ ಫ್ರತಿ ಫಲಾನುಭವಿಗೆ ಅನ್ನಭಾಗ್ಯ ಯೋಜನೆಯಡಿ ನೇರ ನಗದು ವರ್ಗಾವಣೆ ಬದಲಾಗಿ ಹೆಚ್ಚುವರಿ 5 ಕೆಜಿ ಅನ್ನಭಾಗ್ಯ ಅಕ್ಕಿಯನ್ನು ನೀಡಲಾಗುತ್ತದೆ.
ರಾಜ್ಯ ವ್ಯಾಪ್ತಿಯ ಪ್ರತಿ ಪಿ.ಎಚ್.ಎಚ್ ಫಲಾನುಭವಿಗೆ ತಲಾ 5 ಕೆ.ಜಿ ಅಕ್ಕಿಯಂತೆ ಹಂಚಿಕೆ ಪ್ರಮಾಣವನ್ನು ನಿಗದಿಪಡಿಸಿ ಹಂಚಿಕೆ ನೀಡಿದೆ. ಪ್ರಸ್ತುತ ಡಿಸೆಂಬರ್-2025ರ ಮಾಹೆಗೆ ಆದ್ಯತೇತರ ಪಡಿತರ ಚೀಟಿ (ಎಪಿಎಲ್) ಪಡಿತರ ಚೀಟಿದಾರರಿಗೆ ಯಾವುದೇ ಆಹಾರಧಾನ್ಯ ಹಂಚಿಕೆ ಆಗಿರುವುದಿಲ್ಲ ಎಂದು ಪಡಿತರ ಚೀಟಿದಾರರಿಗೆ ತಿಳಿಸಲಾಗಿದೆ.
ಹಾಸನ ಜಿಲ್ಲೆಯ ಆಲೂರು, ಬೇಲೂರು, ಅರಕಲಗೂಡು ಮತ್ತು ಸಕಲೇಶಪುರ ತಾಲ್ಲೂಕಿನ ಸೀಮೆಎಣ್ಣೆ ಪಡೆಯಲು ಒಪ್ಪಿಗೆ ನೀಡಿರುವ ಗ್ರಾಮಾಂತರ ಪ್ರದೇಶದ ಎಎವೈ ಮತ್ತು ಪಿಎಚ್ಎಚ್ ಪಡಿತರ ಚೀಟಿದಾರರಿಗೆ ಪ್ರತಿ ಕಾರ್ಡಿಗೆ ಎರಡು ಲೀಟರ್ನಂತೆ ಪ್ರತಿ ಲೀಟರ್ಗೆ 35 ರೂಪಾಯಿನಂತೆ ಹಣ ಬಿಡುಗಡೆ ಮಾಡಲಾಗಿದೆ.
ಮಹತ್ವದ ಮಾಹಿತಿ: ಒಂದು ರಾಷ್ಟ್ರ, ಒಂದು ಪಡಿತರ ಚೀಟಿ ಅಡಿಯಲ್ಲಿ ಯಾವುದೇ ರಾಜ್ಯದ ಪಡಿತರ ಚೀಟಿದಾರರು, ಯಾವುದೇ ವರ್ಗದ ಪಡಿತರ ಚೀಟಿದಾರರು, ಯಾವ ನ್ಯಾಯಬೆಲೆ ಅಂಗಡಿಯಲ್ಲಾದರೂ ಪಡಿತರ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ನ್ಯಾಯಬೆಲೆ ಅಂಗಡಿದಾರರು ಕಡಿಮೆ ಪ್ರಮಾಣದ ಪಡಿತರವನ್ನು ವಿತರಣೆ ಮಾಡಿದ್ದಲ್ಲಿ, ಹಣ ಕೇಳಿದ್ದಲ್ಲಿ ಮತ್ತು ಇತರೆ ದೂರುಗಳಿಗೆ ಇಲ್ಲಿ ನೀಡಲಾಗಿರುವ ಸಂಖ್ಯೆಗೆ ಕರೆ ಮಾಡಬಹುದು.
ದೂರವಾಣಿ ಸಂಖ್ಯೆಗಳ ವಿವರ: ದೂರವಾಣಿ ಸಂಖ್ಯೆ 1967 ಹಾಗೂ 1800-425-9339 ಮತ್ತು 14445ಕ್ಕೆ ಹಾಗೂ ಆಯಾ ತಾಲ್ಲೂಕಿನಲ್ಲಿ ಇರುವ ತಹಶೀಲ್ದಾರರ ಕಚೇರಿಗೆ ಅಥವಾ ಜಿಲ್ಲೆಯ ಜಂಟಿ ನಿದೇರ್ಶಕರ ಕಚೇರಿಗೆ ದೂರನ್ನು ಸಲ್ಲಿಕೆ ಮಾಡಬಹುದಾಗಿದೆ. ಸದರಿ ಯೋಜನೆಯಡಿ ವಿತರಣೆ ಮಾಡಲಾದ ಆಹಾರ ಧಾನ್ಯಗಳನ್ನು ಹಣಕ್ಕಾಗಿ ಪಡಿತರ ಚೀಟಿದಾರರು ಮಾರಾಟ ಮಾಡುವುದಾಗಲಿ ಅಥವಾ ಸಂಗ್ರಹಣೆ ಮಾಡುವುದು ಕಂಡುಬಂದಲ್ಲಿ ಅಂತಹವರಿಗೆ ವಿತರಿಸಲಾದ ಆಹಾರ ಧಾನ್ಯಗಳಿಗೆ ಮುಕ್ತ ಮಾರುಕಟ್ಟೆ ದರಕ್ಕೆ ದಂಡ ವಿಧಿಸಲಾಗುವುದು. ಸದರಿ ಪಡಿತರ ಚೀಟಿಯನ್ನು 6 ತಿಂಗಳ ಅವಧಿಗೆ ಅಮಾನತ್ತು ಮಾಡಲಾಗುವುದು ಎಂದು ಹಾಸನ ಜಿಲ್ಲಾಧಿಕಾರಿ ಲತಾ ಕುಮಾರಿ ಅವರು ತಿಳಿಸಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications