Ration Card: ರಾಜ್ಯದಲ್ಲಿ ಪಡಿತರ ಚೀಟಿದಾರರು ಗಮನಿಲೇಬೇಕಾದ ಮಾಹಿತಿ
Ration Card: ಪ್ರಮುಖ ದಾಖಲೆಗಳಲ್ಲಿ ಪಡಿತರ ಚೀಟಿ ಕೂಡ ಒಂದಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಆಗಾಗ ಮಹತ್ವದ ಮಾಹಿತಿಯನ್ನು ನೀಡುತ್ತಲಿರುತ್ತದೆ. ಹಾಗೆಯೇ ಇದೀಗ ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸಲು ಕಾಲಾವಕಾಶ ನೀಡಿದೆ. ಒಂದು ವೇಳೆ ಇದನ್ನು ಮಾಡಿಸದಿದ್ದರೆ ಕಾರ್ಡ್ ಅನ್ನು ರದ್ದುಪಡಿಸಲಾಗುತ್ತದೆ ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಹಾಗಾದ್ರೆ ಎಷ್ಟು ದಿನ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಪಡಿತರ ಚೀಟಿ ಬರೀ ರೇಷನ್ ಪಡೆಯಲು ಅಷ್ಟೇ ಅಲ್ಲದೆ, ಯಾವುದೇ ಅರ್ಜಿ ಸಲ್ಲಿಸಲು ಬೇಕೇ ಬೇಕಾಗುತ್ತದೆ. ಆದರೆ, ಇದನ್ನು ದುರ್ಬಳಕೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹಾಕುವ ಕೆಲಸವನ್ನು ರಾಜ್ಯ ಸರ್ಕಾರ ಮಾಡುತ್ತಿದೆ. ಮತ್ತೊಂದೆಡೆ ನಕಲಿ ದಾಖಲೆ ಸೃಷ್ಟಿಸಿ ಪಡೆದಂತಹ ಬಿಪಿಎಲ್ ಕಾರ್ಡ್‌ಗಳನ್ನು ಸಹ ರದ್ದುಪಡಿಸಿ ಅಂತಹವರನ್ನು ಎಪಿಎಲ್‌ಗೆ ಸೇರಿಸುವ ಮಹತ್ವದ ಕಾರ್ಯವನ್ನು ಮಾಡಿದೆ.

ಇದಾದ ಬಳಿಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜನರು ಅರ್ಹರ ಬಳಿ ಇರುವ ಬಿಪಿಎಲ್ ಕಾರ್ಡ್‌ಗಳನ್ನು ಸಹ ಸರ್ಕಾರ ರದ್ದುಪಡಿಸಿದೆ ಎಂದು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದರು. ಆಗ ಎಚ್ಚೆತ್ತ ಸರ್ಕಾರ ಅರ್ಹರಿಗೆ ಮತ್ತೆ ಬಿಪಿಎಲ್ ಕಾರ್ಡ್‌ಗಳನ್ನು ಹಿಂದಿರುಗಿಸಿ ಅವರೊಗೆ ಸಿಗಬೇಕಾದ ಪಡಿತರವನ್ನು ಒದಗಿಸಲಾಗುತ್ತದೆ ಎಂದು ಭರವಸೆ ನೀಡಿತ್ತು. ಇನ್ನೂ ಇದೀಗ ಪಡಿತರ ಚೀಟಿಗೆ ಇ-ಕೆವೈಸಿ ಮಾಡಿಸಲು ಒಂದು ತಿಂಗಳು ಕಾಲಾವಕಾಶ ನೀಡಿದೆ.
ಇ-ಕೆವೈಸಿ ಮಾಡಿಸುವ ದಿನಾಂಕವನ್ನು ಮುಂದೂಡಿಕೆ ಮಾಡುತ್ತಲೇ ಬರಲಾಗುತ್ತಿದೆ. ಇನ್ನೂ ತುಂಬಾ ಜನ ಇದನ್ನು ಮಾಡಿಸಿಕೊಳ್ಳದ ಕಾರಣ ಇದೀಗ ಮತ್ತೆ ಒಂದು ತಿಂಗಳು ಕಾಲವಕಾಶವನ್ನು ಕಲ್ಪಿಸಲಾಗಿದ್ದು, ಇದರಿಂದ ಪಡಿತರ ಚೀಟಿದಾರರಿಗೆ ತುಂಬಾ ಅನುಕೂಲ ಆದಂತಾಗಿದೆ. ಇದನ್ನು ಪಡಿತರ ವಿತರಣೆಯಲ್ಲಿ ಆಗುವ ದುರ್ಬಳಕೆಯನ್ನು ತಪ್ಪಿಸುವುದೇ ಇದರ ಉದ್ದೇಶವಾಗಿದೆ.
ರಾಜ್ಯದಲ್ಲಿ ಪಡಿತರ ಚೀಟಿದಾರರು ಇ- ಕೆವೈಸಿಯನ್ನು ಆದಷ್ಟು ಬೇಗನೆ ಮಾಡಿಸಬೇಕು. ಮಾಡಿಸದಿದ್ದರೆ ಅಂತಹ ಸದಸ್ಯರ ಪಡಿತರ ಕಾರ್ಡ್ ರದ್ದು ಪಡಿಸಲಾಗುವುದು ಎಂದು ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಸೂಚನೆ ನೀಡಿದ್ದಾರೆ.
ಮೈಸೂರು ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಈ ಬಗ್ಗೆ ಮಾತನಾಡಿದರು.
ಪಡಿತರ ಚೀಟಿದಾರರಿಗೆ ಇ-ಕೆವೈಸಿ ಮಾಡಿಸಲು ಒಂದು ತಿಂಗಳು ಕಾಲಾವಕಾಶ ನೀಡಬೇಕು. ಒಂದೆ ವೇಳೆ ಈ ಅವಧಿಯೊಳಗೆ ಇ-ಕೆವೈಸಿ ಮಾಡಿಸದಿದ್ದರೆ, ಅಂತಹ ಸದಸ್ಯರ ಪಡಿತರ ಕಾರ್ಡ್ ರದ್ದು ಪಡಿಸುವ ಎಚ್ಚರಿಕೆ ನೀಡಿಬೇಕು. ಬಾಕಿ ಇರುವ ಇ-ಕೆವೈಸಿ ಪ್ರಕ್ರಿಯೆಗಳು ವಿಳಂಬ ಇಲ್ಲದೆ ಪೂರ್ಣಗೊಳ್ಳುವಂತೆ ತಕ್ಷಣ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅನಗತ್ಯವಾಗಿ ಕಾರ್ಡುಗಳು ವಿತರಣೆ ಆದರೆ, ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಜಿಲ್ಲಾ ಮಟ್ಟದಲ್ಲಿ ಜಾಗೃತಿ ಸಮಿತಿಗಳನ್ನು ರಚನೆ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೆ, ಕಾನೂನು ಮಾಪನ ಶಾಸ್ತ್ರ ಇಲಾಖೆಗೆ ಬೇಕಿರುವ ವಾಹನ ಸೌಲಭ್ಯ ಹಾಗೂ ಕಾನೂನು ಮಾಪನ ನಿರೀಕ್ಷಕರ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.
ಆಹಾರ ಧಾನ್ಯಗಳು ಗೋದಾಮುಗಳಲ್ಲಿ ಹಾಳಾಗದಂತೆ ನೋಡಿಕೊಳ್ಳಿ. ಕನಿಷ್ಠ ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿಸುವ ಆಹಾರ ಧಾನ್ಯಗಳನ್ನು ಸುರಕ್ಷಿತವಾಗಿ ಸಂರಕ್ಷಣೆ ಮಾಡಬೇಕು ಅಂತಲೂ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಸೂಚನೆ ನೀಡಿದರು.












Click it and Unblock the Notifications