Get Updates
Get notified of breaking news, exclusive insights, and must-see stories!

Ration: ರಾಜ್ಯದ ಎಲ್ಲಾ ಪಡಿತರ ಚೀಟಿದಾರರಿಗೆ ಬಿಗ್ ಶಾಕ್‌: ಪಡಿತರ ಸ್ಥಗಿತ

Ration: ರಾಜ್ಯದಲ್ಲಿ ಸದ್ಯ ನಕಲಿ ದಾಖಲೆ ಸೃಷ್ಟಿಸಿ ಪಡೆದ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸಲಾಗುತ್ತಿದೆ. ಈ ನಡುವೆಯೇ ಇದೀಗ ಎಲ್ಲಾ ಪಡಿತರ ಚೀಟಿದಾರರಿಗೆ ಪಡಿತರ ವಿತರಣೆ ಸ್ಥಗಿತದ ಬಿಗ್‌ ಶಾಕ್‌ವೊಂದು ಎದುರಾಗಿದೆ. ಹಾಗಾದ್ರೆ, ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಸಾಮಾನ್ಯವಾಗಿ ಬಿಪಿಎಲ್‌ ಪಡಿತರ ಚೀಟಿಯನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡಲಾಗುತ್ತದೆ. ಆದರೆ ಅನರ್ಹರು ಸಹ ಬಿಪಿಎಲ್‌ ಕಾರ್ಡ್‌ ಪಡೆದು ಬಡವರಿಗೆ ಸಿಗಬೇಕಾದ ಪಡಿತರ ಹಾಗೂ ಸರ್ಕಾರಿ ಸೌಲಭ್ಯಗಳನ್ನು ಕಿತ್ತುಕೊಳ್ಳುತ್ತಿದ್ದರು. ಈ ಬಗ್ಗೆ ಹಿಂದಿನಿಂದಲೂ ಆರೋಪ ಕೇಳಿಬಂದಿದ್ದು, ಕಳೆದ ಕೆಲ ತಿಂಗಳುಗಳಿಂದ ಇಂತಹ ಕಳ್ಳಾಟಗಳಿಗೆ ಸರ್ಕಾರ ಬ್ರೇಕ್ ಹಾಕಲು ಮುಂದಾಗಿದೆ. ಈಗಾಗಲೇ ಹಲವು ಜಿಲ್ಲೆಗಳಲ್ಲಿ ಅನರ್ಹರ ಬಳಿಯ ಬಿಪಿಎಲ್ ರದ್ದುಪಡಿಸಿ ಅಂತಹವರನ್ನು ಎಪಿಎಲ್‌ಗೆ ವರ್ಗಾಹಿಸಲಾಗುತ್ತಿದೆ.

Ration Dealers Decide to Halt November Distribution Due to Unpaid Commission from State Government

ಈ ಮಹತ್ವದ ಕಾರ್ಯದ ನಡುವೆಯೇ ಇದೀಗ ಪಡಿತರ ಚೀಟಿದಾರರಿಗೆ ಬಿಗ್ ಶಾಕ್‌ವೊಂದು ಎದುರಾಗಿದೆ. ಹೌದು ರಾಜ್ಯದ ಪಡಿತರ ಚೀಟಿದಾರರಿಗೆ ನವೆಂಬರ್ ತಿಂಗಳ ಪಡಿತರ ಸಿಗುವುದು ಅನುಮಾನ ಎನ್ನಲಾಗುತ್ತಿದೆ. ಇದೆಕ್ಕೆ ಕಾರಣವೂ ಇದೆ. ರಾಜ್ಯ ಸರ್ಕಾರದಿಂದ ಕಮಿಷನ್ ಬರದ ಕಾರಣ ನವೆಂಬರ್ ತಿಂಗಳ ಪಡಿತರ ವಿತರಣೆ ಮಾಡದಿರಲಯ ಪಡಿತರ ವಿತರಕರ ಸಂಘ ನಿರ್ಧಾರ ಮಾಡಿದೆ ಎನ್ನುವ ಮಾಹಿತಿ ಇದೆ.

ರಾಜ್ಯದಲ್ಲಿ ಕಳೆದ 6 ತಿಂಗಳುಗಳಿಂದ ಪಡಿತರ ವಿತರಕರಿಗೆ ರಾಜ್ಯ ಸರ್ಕಾರದಿಂದ ಸಿಗಬೇಕಾದ ಕಮಿಷನ್ ಬಂದಿಲ್ಲ. ಆದ್ದರಿಂದ ಸಗಟು ಮಳಿಗೆಗಳಿಂದ ನವೆಂಬರ್ ತಿಂಗಳ ಪಡಿತರ ಸ್ವೀಕರಿಸದೆ, ರಾಜ್ಯಾದ್ಯಂತ ಪಡಿತರ ವಿತರಣೆ ಮಾಡದಿರಲು ಪಡಿತರ ವಿತರಕರ ಸಂಘ ನಿರ್ಧಾರ ಮಾಡಿದೆ ಎಂದು ತಿಳಿದುಬಂದಿದೆ.

ಕಲ್ಯಾಣ ಕರ್ನಾಟಕ ಸರ್ಕಾರಿ ಪಡಿತರ ವಿತರಕರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ನಿರ್ದೇಶಕ ಆರ್.ಮಹಾದೇವಪ್ಪ ಈ ಬಗ್ಗೆ ಮಾತನಾಡಿದ್ದು, ರಾಜ್ಯಾದ್ಯಂತ ಪಡಿತರ ವಿತರಕರಿಗೆ ಕಮಿಷನ್ ಬರದೆ ಇರುವುದರಿಂದ ತುಂಬಾ ತೊಂದರೆಯಾಗಿದೆ ಎಂದು ಹೇಳಿದ್ದಾರೆ.

ಸಮಸ್ಯೆ ಬಗ್ಗೆ ಸಂಘದ ರಾಜ್ಯಾಧ್ಯಕ್ಷ ಕೃಷ್ಣಪ್ಪ ಅವರು ಸಿಎಂ, ಡಿಸಿಎಂ, ಆಹಾರ ಇಲಾಖೆ ಪ್ರಧಾನ ಕಾರ್ಯದರ್ಶಿ, ಆಯುಕ್ತರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ. ಆದ್ದರಿಂದ ನವೆಂಬರ್ ತಿಂಗಳ ಪಡಿತರ ವಿತರಿಸದಿರಲು ಸಂಘ ನಿರ್ಧರಿಸಿದೆ ಎಂದು ಹೇಳಿದ್ದಾರೆ. ಇನ್ನೂ ಪಡಿತರ ವಿತರಕರಿಗೆ ಕಮಿಷನ್‌ ನೀಡದ ಆರೋಪ ಬಂದಿದ್ದು, ಇದಕ್ಕೆ ಭಾರೀ ಆಕ್ರೋಶಗಳು ಭುಗಿಲೆದ್ದವೆ. ವಿಪಕ್ಷಗಳು ಹಾಗೂ ನೆಟ್ಟಿಗರು ಸರ್ಕಾರದ ವಿರುದ್ಧ ಕೆಂಡಕಾರುತ್ತಿದ್ಧಾರೆ.

ಸಾಮಾನ್ಯವಗಿ ರಾಜ್ಯದಲ್ಲಿ ಪಡಿತರ ವಿತರಕರಿಗೆ ಸರ್ಕಾರದಿಂದ ಕಮಿಷನ್‌ ನೀಡಬೇಕಾಗುತ್ತದೆ. ಆದರೆ, ಈ ಕೆಲಸವನ್ನು ಸರ್ಕಾರ ಮಾಡಿಲ್ಲ ಎನ್ನುವ ಆರೋಪ ಕೇಳಿಬಂದಿದೆ. ಅಲ್ಲದೆ, ಈ ತಿಂಗಳು ಪಡಿತರ ನೀಡದಿರಲು ಪಡಿತರ ವಿತರಕರ ಸಂಘ ನಿರ್ಧಾರ ಮಾಡಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹೀಗೆ ರಾಜ್ಯದಲ್ಲಿ ಒಂದು ಸಮಸ್ಯೆ ನಿವಾರಣೆ ಆದ್ರೆ, ಮತ್ತೊಂದು ಸಮಸ್ಯೆ ಉದ್ಭವವಾಗುತ್ತಿದೆ. ಈ ಸಮಸ್ಯೆಗಳನ್ನು ನಿಭಾಹಿಸುವ ಜವಾಬ್ದಾರಿ ಸರ್ಕಾರದ ಕೈಯಲ್ಲಿದೆ. ಇದಕ್ಕೆ ಯಾವಾಗ ತೆರೆ ಎಳೆದು ಸಮಸ್ಯೆ ನಿವಾರಣೆ ಮಾಡುತ್ತದೆಯೋ ಎಂದು ಕಾದುನೋಡಬೇಕಿದೆ.

ಈಗಾಗಲೇ ರಾಜ್ಯದಲ್ಲಿ ಅನರ್ಹರ ಬಳಿಯ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಪಡಿಸಿ ಎಪಿಎಲ್‌ಗೆ ವರ್ಗಾಹಿಸುವ ಕೆಸಲವನ್ನು ಸರ್ಕಾರ ನಿರ್ಧರಿಸಿದೆ. ಈ ವೇಳೆ ಅರ್ಹರ ಬಳಿಯ ಬಿಪಿಎಲ್‌ ಕಾರ್ಡ್‌ಗಳನ್ನು ಕೂಡ ರದ್ದುಪಡಿಸಿಲಾಗಿದೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಇದನ್ನು ಪರಿಹರಿಸುವಲ್ಲಿ ಸರ್ಕಾರ ಯಶಸ್ವಿಯಾಗಿತ್ತು. ಯಾರೆಲ್ಲಾ ಅರ್ಹರ ಬಳಿಯ ಬಿಪಿಎಲ್‌ ಕಾರ್ಡ್‌ ರದ್ದಾಗಿವೆಯೋ ಅಂತಹರು ನಿಮ್ಮ ತಾಲ್ಲೂಕಿನ ತಹಶೀಲ್ದಾರರ ಕಚೇರಿಗೆ ಭೇಟಿ ನೀಡಿ ಈ ಬಗ್ಗೆ ಅರ್ಜಿ ಸಲ್ಲಿಸಬಹುದು. ಬಳಿಕ ನಿಮಗೆ ಬಿಪಿಎಲ್‌ ಕಾರ್ಡ್‌ ನೀಡಬೇಕೋ ಅಥವಾ ಬೇಡವೋ ಎಂದು ಪರಿಶೀಲನೆ ನಂತರ ಬಂದ ಫಲಿತಾಂಶದ ಮೇಲೆ ನಿರ್ಧಾರ ಆಗುತ್ತದೆ ಎಂದು ತಿಳಿಸಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+