Ration Card: ನಕಲಿ ದಾಖಲೆ ನೀಡಿ ಬಿಪಿಎಲ್ ಕಾರ್ಡ್ ಪಡೆದು ಶಾಕ್‌ನಲ್ಲಿದ್ದವರಿಗೆ ಸರ್ಕಾರದಿಂದ ಶುಭ ಸುದ್ದಿ
Ration Card: ರಾಜ್ಯದಲ್ಲಿ ನಕಲಿ ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಪಡೆದ ಅನರ್ಹರ ವಿರುದ್ಧ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗಿತ್ತು. ಆದರೆ, ಇದೀಗ ಈ ನಿರ್ಧಾರವನ್ನು ಬದಲಿಸಿ ಅಂತಹವರಿಗೆ ಗುಡ್ ನ್ಯೂಸ್‌ವೊಂದನ್ನು ನೀಡಿದೆ. ಹಾಗಾದರೆ ಆ ಶುಭ ಸುದ್ದಿ ಏನು ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜ್ಯದಲ್ಲಿ ನಕಲಿ ದಾಖಲೆಗಳನ್ನು ನೀಡಿ ಪಡದ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಮಾಡಿ ಅಂತಹವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸರ್ಕಾರ ಮುದಾಗಿತ್ತು. ಆದರೆ ಇದೀಗ ಸರ್ಕಾರ ಈ ನಿರ್ಧಾರವನ್ನು ಬದಲಿಸಿ ಒಂದು ಅವಕಾಶ ನೀಡಿದೆ.

ರಾಜ್ಯದಲ್ಲಿ ಅರ್ಹರಲ್ಲದವರೂ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ಅವರ ಕಾರ್ಡ್ ರದ್ದುಗೊಳ್ಳುವ ಆತಂಕ ಕೂಡ ಎದುರಾಗಿತ್ತು. ಆದರೇ ಇಂತವರಿಗೆ ಗುಡ್ ನ್ಯೂಸ್ ಎನ್ನುವಂತೆ ಬಿಪಿಎಲ್ ಕಾರ್ಡ್ ರದ್ದಾದರೂ, ಅವರನ್ನು ಎಪಿಎಲ್ ಕಾರ್ಡ್‌ಗೆ ವರ್ಗಾವಣೆ ಮಾಡುವುದಾಗಿ ಆಹಾರ ಸಚಿವ ವಿ.ಮುನಿಯಪ್ಪ ತಿಳಿಸುವ ಮೂಲಕ ಗುಡ್ ನ್ಯೂಸ್ ಕೊಟ್ಟಿದ್ದಾರೆ.
ಕೋಲಾರದ ಕಾಂಗ್ರೆಸ್ ನಗರಾಧ್ಯಕ್ಷ ಪ್ರಸಾದ್ ಬಾಬು ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಅನ್ನಭಾಗ್ಯ ಯೋಜನೆಯ ಹಣ ಈವರೆಗೆ ಬಿಡುಗಡೆ ಆಗಿಲ್ಲ. ಈ ಹಣವನ್ನು ಪ್ರತಿ ತಿಂಗಳು 10ರಂದು ಬಿಡುಗಡೆ ಮಾಡಲಾಗುತ್ತಿತ್ತು. ಸರ್ವರ್ ಸಮಸ್ಯೆಯಿಂದ ಈಗ ಬಿಡುಗಡೆ ಮಾಡಲಾಗಿಲ್ಲ. ಮುಂದಿನ ವಾರ ಬಿಡುಗಡೆ ಆಗಲಿದೆ ಎಂದುಬ ಭರವಸೆ ನೀಡಿದರು.
ಅದರಲ್ಲೂ ದಕ್ಷಿಣ ಭಾರತದಲ್ಲಿ ನಮ್ಮ ಕರ್ನಾಟಕದಲ್ಲೇ ಶೇಕಡ 80ರಷ್ಟು ಬಡತನ ಇದೆ. ಬಡತನ ರೇಖೆಗಿಂತ ಕಡಿಮೆ ಇರುವವರಿಗೆ ಬಿಪಿಎಲ್ ಕಾರ್ಡ್ ವಿತರಣೆ ಮಾಡಲಾಗುತ್ತಿದೆ. ಅರ್ಹರಲ್ಲದವರೂ ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ಅವರ ಬಿಪಿಎಲ್ ಕಾರ್ಡ್ ರದ್ದುಗೊಳಿಸಿ, ಎಪಿಎಲ್ ಕಾರ್ಡ್‌ಗೆ ವರ್ಗಾವಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.
ಮನೆ ನಿರ್ಮಾಣಕ್ಕೆ ಅನುದಾನ: ಸಾಮಾನ್ಯವಾಗಿ ರೇಷನ್ ಕಾರ್ಡ್ ಹೊಂದಿರುವವರು ಹಲವು ಸೌಲಭ್ಯಗಳನ್ನು ಪಡೆಯಬಹುದಾಗಿದೆ. ಹಾಗೆಯೇ ಇದೀಗ ದಾವಣಗೆರೆ ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿರುವ ಶಿಥಿಲಗೊಂಡಿರುವ ಮನೆಗಳು ಹಾಗೂ ಖಾಲಿ ನಿವೇಶನ ಹೊಂದಿರುವವರು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ವಾಜಪೇಯಿ ವಸತಿ ಯೋಜನೆಯಡಿ 177 ಮನೆಗಳು ಲಭ್ಯವಿದ್ದು, ಸಹಾಯಧನವಾಗಿ 2.70 ಲಕ್ಷ ರೂಪಾಯಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಪರಿಶಿಷ್ಟ ಪಂಗಡದ 18 ಮನೆಗಳು ಲಭ್ಯವಿದ್ದು, ಈ ಯೋಜನೆಯಡಿ 3.50 ಲಕ್ಷ ರೂಪಾಯಿ ಸಹಾಯಧನ ನೀಡಲಾಗುತ್ತದೆ.
ಆಸಕ್ತರು ಗಂಡ, ಹೆಂಡತಿ ಇಬ್ಬರ ಆಧಾರ್, ಪಡಿತರ ಚೀಟಿ, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪತ್ರ, ಬ್ಯಾಂಕ್ ಪಾಸ್ ಬುಕ್, ಚಾಲ್ತಿ ಇ-ಸ್ವತ್ತು, ಇಸಿ ನಕಲು, 2 ಭಾವಚಿತ್ರ ಪ್ರತಿಯೊಂದಿಗೆ ಪಾಲಿಕೆಯಲ್ಲಿ ಅರ್ಜಿ ಸಲ್ಲಿಸಲು ಆಯುಕ್ತರು ತಿಳಿಸಿದ್ದಾರೆ. ಒಟ್ಟಿನಲ್ಲಿ ಹೇಳುವುದಾದರೆ, ಪಡಿತರ ಚೀಟಿ ಹೊಂದಿರುವವರು ಸರ್ಕಾರದಿಂದ ತುಂಬಾ ಸೌಲಭ್ಯಗಳನ್ನು ಪಡೆಯಬಹುದಾಗಿದೆ.












Click it and Unblock the Notifications