Ration: ರಾಜ್ಯದ ಬಿಪಿಎಲ್ ಕಾರ್ಡ್ದಾರರಿಗೆ ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಮಹತ್ವದ ಮಾಹಿತಿ
Ration: ರಾಜ್ಯದಲ್ಲಿ ನಕಲಿ ದಾಖಲೆ ಸೃಷ್ಟಿಸಿ ಪಡೆದ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿ ಎಪಿಎಲ್ಗೆ ವರ್ಗಾಯಿಸುವ ಕೆಲಸವನ್ನು ಸರ್ಕಾರ ಮುಂದುವರೆಸಿದೆ. ಈ ನಡುವೆಯೇ ಇದೀಗ ಇಂದಿರಾ ಕಿಟ್ ವಿತರಣೆ ಯಾವಾಗಿನಿಂದ ಆರಂಭ ಮಾಡಲಾಗಿತ್ತದೆ ಎನ್ನುವ ಅಪ್ಡೇಟ್ ಮಾಹಿತಿಯನ್ನು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ನೀಡಿದ್ದಾರೆ. ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸಾಮಾನ್ಯವಾಗಿ ಬಿಪಿಎಲ್ ಪಡಿತರ ಚೀಟಿಯನ್ನು ಬಡತನ ರೇಖೆಗಿಂತ ಕೆಳಗಿರುವವರಿಗೆ ನೀಡಲಾಗುತ್ತದೆ. ಆದರೆ, ಇದನ್ನು ಅನರ್ಹರು ಕೂಡ ಪಡೆದುಕೊಂಡು ಬಡವರಿಗೆ ಸಿಗಬೇಕಾದ ಅಕ್ಕಿ ಹಾಗೂ ಸರ್ಕಾರಿ ಸೌಲಭ್ಯಗಳನ್ನು ಕಿತ್ತುಕೊಳ್ಳುತ್ತಿದ್ದರು. ಇದೀಗ ರಾಜ್ಯ ಸರ್ಕಾರ ಇದಕ್ಕೆ ಕಡಿವಾಣ ಹಾಕುವ ಕೆಲಸ ಮುಂದುವರೆದಿದೆ. ಈ ನಡುವೆಯೇ ಇಂದಿರಾ ಕಿಟ್ ವಿತರಣೆ ಯಾವಾಗ ಎನ್ನುವ ಮಾಹಿತಿಯನ್ನು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ರಿವೀಲ್ ಮಾಡಿದ್ದಾರೆ.

ಇಂದಿರಾ ಕಿಟ್ ವಿತರಣೆ ಆರಂಭ ಯಾವಾಗ?: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಈ ಹಿಂದೆ ಪಡಿತರ ಚೀಟಿದಾರರಿಗೆ ಇಂದಿರಾ ಕಿಟ್ ವಿತರಣೆ ಮಾಡುವುದಾಗಿ ಹೇಳಿತ್ತು. ಫಲಾನುಭವಿಗಳು ಇದು ಯಾವಾಗ ಜಾರಿಯಾಗಲಿದೆ ಎನ್ನುವ ಕಾತರದಲ್ಲಿದ್ದರು. ಇದಕ್ಕೆ ಇದೀಗ ಉತ್ತರ ಸಿಕ್ಕಿದೆ. ಬಿಪಿಎಲ್ ಕಾರ್ಡುದಾರರಿಗೆ ಮುಂಬರುವ 2026ರ ಜನವರಿ ಅಥವಾ ಫೆಬ್ರವರಿಯ ತಿಂಗಳಿನಿಂದ ಇಂದಿರಾ ಕಿಟ್ ವಿತರಣೆ ಮಾಡಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಅವರು ಮಾಹಿತಿ ನೀಡಿದ್ದಾರೆ.
ಕಿಟ್ನಲ್ಲಿ ಏನೆಲ್ಲಾ ಇರುತ್ತದೆ?: ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅಕ್ಕಿ ವಿತರಣೆಯ ಪ್ರಮಾಣ ಹೆಚ್ಚಾಗಿದೆ. ಅಷ್ಟು ಪ್ರಮಾಣದಲ್ಲಿ ಅಕ್ಕಿ ಬಳಸುವುದಿಲ್ಲ ಎಂಬ ಕಾರಣದಿಂದ ಇಂದಿರಾ ಕಿಟ್ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. ಇದರಲ್ಲಿ ಬೇಳೆ, ಸಕ್ಕರೆ, ಉಪ್ಪು ಇರಲಿದೆ ಎಂದು ಎಂದು ತಿಳಿಸಿದ್ದಾರೆ.
ಅರ್ಹರ ಬಿಪಿಎಲ್ ಕಾರ್ಡ್ ರದ್ದು ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಕೆ.ಎಚ್.ಮುನಿಯಪ್ಪ ಅವರು, ಕಾರ್ಡ್ ರದ್ದಾಗಿದ್ದರೇ ತಕ್ಷಣವೇ ನಿಮ್ಮ ತಾಲ್ಲೂಕಿನ ತಹಶೀಲ್ದಾರ್ ಅನ್ನು ಭೇಟಿ ಮಾಡಿ ಅರ್ಜಿ ಸಲ್ಲಿಸಿ. 15 ದಿನಗಳ ಒಳಗೆ ಪಡಿತರ ಕಾರ್ಡ್ ವಿತರಣೆ ಮಾಡಲಾಗುತ್ತದೆ. ಅನರ್ಹರ ಬಳಿಯ ಬಿಪಿಎಲ್ ಕಾರ್ಡ್ಗಳನ್ನು ಪತ್ತೆಹಚ್ಚುವ ಕೆಲಸ ಆಗುತ್ತಿದೆ ಎಂದು ಹೇಳದರು.
ಅಕ್ರಮ ಪಡಿತರ ಸಾಗಾಟಕ್ಕೆ ಬ್ರೇಕ್: ಹೊರ ರಾಜ್ಯಗಳಿಗೆ ಪಡಿತರ ಅಕ್ರಮ ಸಾಗಾಟ ವಿಚಾರ ಕುರಿತು ಮಾತನಾಡಿದ ಅವರು, ಈ ಸಂಬಂಧ ಈಗಾಗಲೇ ವಿವಿಧೆಡೆ 574 ಜನರನ್ನು ಬಂಧಿಸಲಾಗಿದೆ. ಅವರ ವಿರುದ್ಧ ಕಠಿಣ ಕ್ರಮವನ್ನೂ ಸಹ ತೆಗೆದುಕೊಂಡಿದ್ದೇವೆ. ಇನ್ಮುಂದೆ ಇಂತಹ ಅಕ್ರಮಗಳು ನಡೆಯುದಿಲ್ಲ ಎಂದು ತಿಳಿಸಿದರು.
ಮೊದಲಿನಿಂದಲೂ ಸಹ ರಾಜ್ಯದಲ್ಲಿ ಶ್ರೀಮಂತರು ಅಂದರೆ, ಅನರ್ಹರು ಸಹ ಬಿಪಿಎಲ್ ಕಾರ್ಡ್ಗಳನ್ನು ಹೊಂದಿದ್ದಾರೆ ಎನ್ನುವ ಆರೋಪಗಳು ಕೇಳಿಬಂದಿದ್ದವು. ಇದಕ್ಕೆ ಕಾಂಗ್ರೆಸ್ ಸರ್ಕಾರವು ಕಡಿವಾಣ ಹಾಕಲು ಮುಂದಾಗಿತ್ತು. ಆದರೆ, ಆ ವೇಳೆ ವಿರೋಧ ವ್ಯಕ್ತವಾಗಿದ್ದರಿಂದ ಈ ಕಾರ್ಯವನ್ನು ನಿಲ್ಲಿಸಿತ್ತು.
ಅರ್ಹರ ಬಳಿಯ ಬಿಪಿಎಲ್ ಕಾರ್ಡ್ಗಳನ್ನಯ ಸಹ ರಾಜ್ಯ ಸರ್ಕಾರ ರದ್ದುಪಡಿಸಿದೆ ಎಂದು ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸುವ ಮೂಲಕ ಜನರು ಆಕ್ರೋಶ ವ್ಯಕ್ತಪಡಿಸಿದ್ದರು. ಆಗಲೇ ರಾಜ್ಯ ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಿತು. ಆದರೆ, ಇದೀಗ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಪರಿಶೀಲನೆ ನಡೆಸಿ ಅನರ್ಹರು ಎಂದು ಗೊತ್ತಾದಲ್ಲಿ ಅಂತಹವರ ಬಳಿಯ ಬಿಪಿಎಲ್ ಕಾರ್ಡ್ಗಳನ್ನು ರದ್ದುಪಡಿಸಿ ಎಪಿಎಲ್ಗೆ ವರ್ಗಾಹಿಸಲಾಗುತ್ತಿದೆ. ಒಂದು ವೇಳೆ ಅರ್ಹರ ಬಳಿಯ ಬಿಪಿಎಲ್ ಕಾರ್ಡ್ಗಳು ರದ್ದಾದರೆ, ಅವರು ತಾಲ್ಲೂಕು ತಹಶೀಲ್ದಾರ್ ಕಚೇರಿಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದು. ಈ ಹಂತದಲ್ಲಿ ಅವರು ಅರ್ಹರು ಎಂದು ಸಾಬೀತಾದರೆ ಮಾತ್ರ ಮತ್ತೆ ಬಿಪಿಎಲ್ ಕಾರ್ಡ್ಗೆ ಪರಿವರ್ತಿಸಲಾಗುವುದು ಅಂತಲೂ ಸರ್ಕಾರ ತಿಳಿಸಿದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ












Click it and Unblock the Notifications