ರಾಜ್ಯದಲ್ಲಿ ರೇಷನ್ ಅಕ್ಕಿ ಬದಲು ಪೌಷ್ಟಿಕ ಆಹಾರ ಧಾನ್ಯಗಳ ಕಿಟ್ ವಿತರಣೆ; ಸಚಿವ ರಿಜ್ವಾನ್ ಅರ್ಷದ್ ಮಹತ್ವದ ಘೋಷಣೆ

Ration: ರಾಜ್ಯದಲ್ಲಿ ಪಡಿತರ ಅಕ್ಕಿಯ ಬದಲು ಪೌಷ್ಟಿಕ ಆಹಾರ ಧಾನ್ಯಗಳ ಕಿಟ್ ವಿತರಣೆಯನ್ನು ಶೀಘ್ರದಲ್ಲೇ ಆರಂಭ ಮಾಡಲಾಗುವುದು ಎಂದು ಆಹಾರ ಸಚಿವ ರಿಜ್ವಾನ್ ಅರ್ಷದ್ ಅವರು ಹೇಳಿದ್ದಾರೆ. ಇದೇ ವೇಳೆ ಇನ್ನೂ ಹಲವು ವಿಚಾರಗಳನ್ನ ಬಿಚ್ಚಿಟ್ಟಿದ್ದಾರೆ.

ಸಾರ್ವಜನಿಕ ವಿತರಣಾ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸುವುದು ಹಾಗೂ ಅಕ್ರಮ ದಂಧೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ. ಇಲ್ಲಿದೆ ನೋಡಿ ಈ ಕುರಿತ ಸಂಪೂರ್ಣ ಮಾಹಿತಿ.

Ration Rice to Be Replaced With Nutritious Food Grain Kits Soon in Karnataka says food minister

ಆಹಾರ ಸಚಿವ ರಿಜ್ವಾನ್ ಅರ್ಷದ್ ಹೇಳಿದ್ದೇನು?

ರಾಯಚೂರಿನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ (ನವೆಂಬರ್ 28) ಆಹಾರ, ನಾಗರಿಕ ಸರಬರಾಜು, ಗ್ರಾಹಕರ ವ್ಯವಹಾರಗಳು, ಕಾನೂನು ಮಾಪನ ಶಾಸ್ತ್ರ ಇಲಾಖೆ ಮತ್ತು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ನಡೆಯಿತು. ಇದು ಮುಗಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರಾಯಚೂರು ಜಿಲ್ಲೆಯಲ್ಲಿ ಈವರೆಗೆ ಶೇಕಡ 80ರಷ್ಟು ಆಹಾರ ಧಾನ್ಯ ಮತ್ತು ಪಡಿತರ ವಿತರಣೆ ಪೂರ್ಣಗೊಂಡಿದೆ. ಇತ್ತೀಚಿನ ತಾಂತ್ರಿಕ ಅಡಚಣೆ ಹಾಗೂ ಆಧಾರ್ ವ್ಯವಸ್ಥೆಯಲ್ಲಿ ಭದ್ರತಾ ಉದ್ದೇಶಕ್ಕಾಗಿ ನಡೆದ ನವೀಕರಣದಿಂದ ಸರ್ವರ್‌ನಲ್ಲಿ ತಾತ್ಕಾಲಿಕ ವ್ಯತ್ಯಯ ಕಾಣಿಸಿಕೊಂಡಿತ್ತು. ಸದ್ಯ ಆ ಸಮಸ್ಯೆ ನಿವಾರಣೆಯಾಗಿದ್ದು, ವಿತರಣಾ ವ್ಯವಸ್ಥೆ ಸುಗಮವಾಗಿ ಸಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.

ಇ-ಕೆವೈಸಿ ಮತ್ತು 'ಅನ್ನ ಸೇವೆ' ಆ್ಯಪ್ ಸೌಲಭ್ಯ

ಜಿಲ್ಲೆಯಲ್ಲಿ ಶೇಕಡ 83ರಷ್ಟು ಇ-ಕೆವೈಸಿ ಪ್ರಕ್ರಿಯೆ ಯಶಸ್ವಿಯಾಗಿದೆ. ದುಡಿಮೆ ಹಾಗೂ ಇತರ ಉದ್ದೇಶಗಳಿಗಾಗಿ ಬೆಂಗಳೂರು ಸೇರಿದಂತೆ ವಿವಿಧ ನಗರಗಳು ಮತ್ತು ಹೊರರಾಜ್ಯಗಳಿಗೆ ಹೋಗಿರುವ ಜನರು, ಇ-ಕೆವೈಸಿಗಾಗಿ ಕೆಲಸ ಬಿಟ್ಟು ಸ್ವಂತ ಊರಿಗೆ ಬರುವ ತೊಂದರೆ ತಪ್ಪಿಸಲು 'ಅನ್ನ ಸೇವೆ' ಮೊಬೈಲ್ ಆ್ಯಪ್ ಮೂಲಕ ಇರುವ ಸ್ಥಳದಿಂದಲೇ ಪ್ರಕ್ರಿಯೆ ಪೂರ್ಣಗೊಳಿಸಲು ಅವಕಾಶ ಕಲ್ಪಿಸಲಾಗಿದೆ. ಲಕ್ಷಾಂತರ ಜನರು ಈ ಸೌಲಭ್ಯದ ಲಾಭ ಪಡೆದಿದ್ದಾರೆ ಎಂದು ತಿಳಿಸಿದರು.

ಕಾಳಸಂತೆ ವಿರುದ್ಧ ಬೃಹತ್ ಕಾರ್ಯಾಚರಣೆ

ಅರ್ಹ ಫಲಾನುಭವಿಗಳಿಗೆ ತಲುಪಬೇಕಾದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಗೆ ಸಾಗಿಸುವ ಜಾಲದ ವಿರುದ್ಧ ಕಠಿಣ ಕ್ರಮ ಮುಂದುವರೆದಿದೆ. ಕಳೆದ ಎರಡು ತಿಂಗಳಿನಿಂದ ನಡೆಯುತ್ತಿರುವ ಕಾರ್ಯಾಚರಣೆಯಲ್ಲಿ 5,000 ಟನ್ ಅಕ್ಕಿಯನ್ನು ಜಪ್ತಿ ಮಾಡಲಾಗಿದ್ದು, 415 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿ, 285 ಆರೋಪಿಗಳನ್ನು ಬಂಧಿಸಲಾಗಿದೆ. ಪಡಿತರ ಅಕ್ಕಿಯ ಅಕ್ರಮ ಮಾರಾಟಕ್ಕೆ ಯಾವುದೇ ಅವಕಾಶ ನೀಡುವುದಿಲ್ಲ. ಗಡಿ ಭಾಗದಲ್ಲಿ ಇಂತಹ ಚಟುವಟಿಕೆ ನಡೆಸುವವರು ತಕ್ಷಣ ನಿಲ್ಲಿಸಬೇಕು ಹಾಗೂ ಈ ಕಾರ್ಯಾಚರಣೆ ನಿರಂತರವಾಗಿರಲಿದೆ ಎಂದು ಎಚ್ಚರಿಕೆ ನೀಡಿದರು.

ಅಕ್ಕಿ ಬದಲು ಆಹಾರ ಧಾನ್ಯ ಕಿಟ್..

ರಾಯಚೂರು ಸೇರಿದಂತೆ ಭತ್ತ ಬೆಳೆಯುವ ಪ್ರದೇಶಗಳಲ್ಲಿ ಪಡಿತರ ಅಕ್ಕಿಯ ಬಳಕೆ ಕಡಿಮೆ ಇರುವುದನ್ನು ಗಮನಿಸಿ, ಜನರ ಆರೋಗ್ಯ ಮತ್ತು ಪೌಷ್ಟಿಕತೆಯ ದೃಷ್ಟಿಯಿಂದ ಅಕ್ಕಿಯ ಬದಲಿಗೆ ವಿವಿಧ ಆಹಾರ ಧಾನ್ಯಗಳ ಕಿಟ್ ವಿತರಿಸುವ ಯೋಜನೆಯನ್ನು ಶೀಘ್ರದಲ್ಲೇ ಜಾರಿಗೆ ತರಲಾಗುವುದು ಎಂದು ಹೇಳಿದರು.

ಪಡಿತರ ಚೀಟಿ ತಿದ್ದುಪಡಿಗೆ ಅವಕಾಶ

ರಾಜ್ಯ ಸರ್ಕಾರವು ಪಡಿತರ ಚೀಟಿದಾರರೊಗೆ ಆಗಾಗ ಶುಭ ಸುದ್ದಿಯನ್ನು ನೀಡುತ್ತಲಿರುತ್ತದೆ. ಹಾಗೆಯೇ ಇದೀಗ ರೇಷನ್ ಕಾರ್ಡ್‌ಗೆ ಸಂಬಂಧಿಸಿದ ತಿದ್ದುಪಡಿ ಕಾರ್ಯಗಳು ಆರಂಭಗೊಂಡಿದ್ದು, ಅರ್ಹರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸಮಯ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೂ ಇದೆ. ಆದರೆ ಹೊಸ ಕಾರ್ಡ್‌ಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಮಾತ್ರ ಇನ್ನೂ ಶುರುವಾಗಿಲ್ಲ.

ಏನೆಲ್ಲಾ ತಿದ್ದುಪಡಿ ಮಾಡಿಸಬಹುದು?

* ಹೆಸರು ತಿದ್ದುಪಡಿ
* ಹೆಸರು ಸೇರ್ಪಡೆ
* ಹೆಸರು ತೆಗೆದುಹಾಕುವಿಕೆ
* ವಿಳಾಸ ಬದಲಾವಣೆ
* ಫೋಟೋ ಬದಲಾವಣೆ
* ಕುಟುಂಬ ಮುಖ್ಯಸ್ಥರ ಬದಲಾವಣೆ
* ನ್ಯಾಯಬೆಲೆ ಅಂಗಡಿ ಬದಲಾವಣೆ
* ಫೋಟೋ ಬದಲಾವಣೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+