ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ರತ್ನಪ್ರಭಾ ನೇಮಕ

ಬೆಂಗಳೂರು, ಡಿಸೆಂಬರ್ 20 : ನಿವೃತ್ತ ಐಎಎಸ್ ಅಧಿಕಾರಿ ಕೆ. ರತ್ನಪ್ರಭಾರನ್ನು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸರ್ಕಾರ ನೇಮಿಸಿದೆ. 2019ರ ಏಪ್ರಿಲ್‌ನಲ್ಲಿ ರತ್ನಪ್ರಭಾ ಅವರು ಬಿಜೆಪಿ ಸೇರಿದ್ದರು.

ಕರ್ನಾಟಕ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಕೆ. ರತ್ನಪ್ರಭಾರನ್ನು ಅಧ್ಯಕ್ಷರಾಗಿ ನೇಮಿಸಿ ಮುಖ್ಯಮಂತ್ರಿಗಳು ಆದೇಶ ಹೊರಡಿಸಿದ್ದಾರೆ. ರತ್ನಪ್ರಭಾ ಅವರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಆಕಾಂಕ್ಷಿಯೂ ಆಗಿದ್ದರು.

ಕೆ. ರತ್ನಪ್ರಭಾ 1981ನೇ ಬ್ಯಾಚ್ ಐಎಎಸ್ ಅಧಿಕಾರಿ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ. 2017ರ ನವೆಂಬರ್‌ನಲ್ಲಿ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ರತ್ನಪ್ರಭಾ ಮುಖ್ಯ ಕಾರ್ಯದರ್ಶಿಯಾಗಿ ನೇಮಕವಾಗಿದ್ದರು.

Ratna Prabha Chairperson For Skill Development Authority

ಕರ್ನಾಟಕದಲ್ಲಿ 37 ವರ್ಷಗಳ ಕಾಲ ಸರ್ಕಾರಿ ಸೇವೆ ಸಲ್ಲಿಸಿರುವ ಕೆ.ರತ್ನಪ್ರಭಾ ಅವರು ಹೈದಬಾರಾದ್ ಮೂಲದವರು. ತಂದೆ ಸಿವಿಲ್ ಇಂಜಿನಿಯರ್, ತಾಯಿ ವೈದ್ಯೆ. ರತ್ನಪ್ರಭಾ ಸಹೋದರ ಕೂಡಾ ಸರ್ಕಾರಿ ಸೇವೆಯಲ್ಲಿದ್ದಾರೆ.

ಕೆ. ರತ್ನಪ್ರಭಾ 1981ರಲ್ಲಿ ಬೀದರ್‌ನಲ್ಲಿ ಅಸಿಸ್ಟೆಂಟ್ ಕಮೀಷನರ್ ಆಗಿ ಸರ್ಕಾರಿ ಸೇವೆಯನ್ನು ಆರಂಭಿಸಿದರು. ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದಾರೆ.

2019ರ ಲೋಕಸಭಾ ಚುನಾವಣೆಯಲ್ಲಿ ರತ್ನಪ್ರಭಾ ಕಲಬುರಗಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ಅವರಿಗೆ ಟಿಕೆಟ್ ಸಿಗಲಿಲ್ಲ. ಬಿಜೆಪಿ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಪರವಾಗಿ ಪ್ರಚಾರವನ್ನು ನಡೆಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+