Karnataka By Election Results: ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ವಿಜಯೇಂದ್ರ ಕಾರಣ: ರವಿ ಕುಮಾರ್ ಹೇಳಿದ್ದೇನು?
ಬೆಂಗಳೂರು, ನವೆಂಬರ್ 25: ರಾಜ್ಯದ ಮೂರು ಕ್ಷೇತ್ರಗಳಾದ ಚನ್ನಪಟ್ಟಣ,ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದ್ದು, ಮೂರು ಕ್ಷೇತ್ರದ ಸೋಲಿಗೆ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರೇ ಕಾರಣ ಎಂಬ ಮಾತುಗಳು ಕಮಲ ಪಾಳಯದಲ್ಲಿ ಕೇಳಿ ಬರುತ್ತಿದೆ. ಉಪಚುನಾವಣೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಯಾರು ಎಂಬ ಬಗ್ಗೆ ರವಿ ಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಮಾತನಾಡಿ, ರಾಜ್ಯದಲ್ಲಿ ನಡೆದ ಮೂರು ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ಸೋತಿರುವುದಕ್ಕೆ ಕೇವಲ ರಾಜ್ಯಾಧ್ಯಕ್ಷರೊಬ್ಬರೇ ಹೊಣೆಯಲ್ಲ ಎಂದು ತಿಳಿಸಿದರು. ಈ ಸೋಲಿಗೆ ಪಕ್ಷವೇ ಜವಾಬ್ದಾರಿ ಹೊರಲಿದೆ. ಪಕ್ಷವು ಇದನ್ನು ಸವಾಲಾಗಿ ತೆಗೆದುಕೊಳ್ಳಲಿದೆ. ಮುಂದಿನ ದಿನಗಳಲ್ಲಿ ಬಿಜೆಪಿಯನ್ನು ಬೂತ್ ಮಟ್ಟದಿಂದ ಸಂಘಟಿಸಿ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ತರಲಿದ್ದೇವೆ ಎಂದು ವಿಶ್ವಾಸವನ್ನ ವ್ಯಕ್ತಪಡಿಸಿದರು.

ಕಾಂಗ್ರೆಸ್ಸಿಗರು ವಾಮ ಮಾರ್ಗದ ಮೂಲಕ, ವಕ್ರ ಮಾರ್ಗದ ಮೂಲಕ, ಹಣವನ್ನು ಹರಿಸುವ ಮೂಲಕ, ಜಾತಿ ವಿಷಬೀಜವನ್ನು ಬಿತ್ತಿ, ಅಲ್ಪಸಂಖ್ಯಾತರನ್ನು ಸಂಪೂರ್ಣವಾಗಿ ಒಗ್ಗಟ್ಟು ಮಾಡಿ, ಮುಖ್ಯಮಂತ್ರಿಗಳು ತಾನು ಸಿಎಂ ಆಗಿ ಐದು ವರ್ಷ ಇರಬೇಕೋ ಬೇಡವೋ ಎಂದು ಮಂತ್ರಿಗಳಿಗೆ, ಶಾಸಕರಿಗೆ ಕೇಳಿ, ಭಯವನ್ನುಂಟು ಮಾಡಿ ಒಗ್ಗಟ್ಟಾಗಿ ಚುನಾವಣೆಯನ್ನು ಎದುರಿಸಿ ಗೆದ್ದಿದ್ದಾರೆ. ಎನ್‍ಡಿಎ 3 ಸೀಟುಗಳನ್ನು ಸೋತಿದೆ. ಸೋಲಿನ ಅವಲೋಕನ ಮಾಡಿ ಬಿಜೆಪಿಯನ್ನು ಒಂದು ಬಲಿಷ್ಠ ಸಂಘಟನೆಯನ್ನಾಗಿ ರೂಪಿಸಿ ನಾವು ಮುಂದೆ ಅಧಿಕಾರಕ್ಕೆ ಬರುತ್ತೇವೆ ಎಂದು ರವಿ ಕುಮಾರ್ ತಿಳಿಸಿದರು.
ಶಿಗ್ಗಾಂವಿಯಲ್ಲಿ ಅಲ್ಪಸಂಖ್ಯಾತರ ಮತಗಳೂ ಬಹಳ ದೊಡ್ಡ ಪ್ರಮಾಣದಲ್ಲಿ ಇದೆ. ನಮಗೆ ಬರುವ ಮತಗಳು ಸ್ವಲ್ಪ ಮಟ್ಟಿಗೆ ವಿಭಜನೆಯಾಗಿವೆ. ಅದರಲ್ಲಿ ಹಣವನ್ನು ಹರಿಸಿದ್ದಾರೆ, ವಾಮಮಾರ್ಗವಾಗಿ ಕೆಲಸ ಮಾಡಿದ್ದಾರೆ ಸಚಿವರು ಬೀಡು ಬಿಟ್ಟಿದ್ದಾರೆ; ಪ್ರತಿ ಗ್ರಾಮ ಪಂಚಾಯಿತಿಗೆ ಒಬ್ಬ ಶಾಸಕರನ್ನು ನೇಮಿಸಿದ್ದರು ಎಂದು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದರು. ಪಕ್ಷ ಎಂದ ಮೇಲೆ ಸಣ್ಣಪುಟ್ಟ ಗೊಂದಲಗಳಿರುತ್ತವೆ. ಇವನ್ನು ನಾವು ಸರಿಪಡಿಸಿ ಬಿಜೆಪಿಯನ್ನು ಕರ್ನಾಟಕದಲ್ಲಿ ಮತ್ತೆ ಪುನಃ ಒಳ್ಳೆಯ ರೀತಿಯಲ್ಲಿ ಕಟ್ಟುತ್ತೇವೆ ಎಂದು ಹೇಳಿದರು.
ಅಧಿವೇಶನದಲ್ಲಿ ಈ ಸರಕಾರದ ಅಕ್ರಮಗಳು, ಭ್ರಷ್ಟಾಚಾರ, ವಕ್ಫ್ ರಾಕ್ಷಸಿ ಅವತಾರ ತಾಳಿ ರೈತರ ಜಮೀನುಗಳನ್ನು ವಶಪಡಿಸಿಕೊಳ್ಳುವ ಕೆಲಸ ಮಾಡಿದ್ದನ್ನು ಬಯಲಿಗೆಳೆಯುತ್ತೇವೆ; ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಗಳು, ರೈತರಿಗೆ ಪ್ರೋತ್ಸಾಹಧನ ನೀಡದೆ ಇರುವುದು, ಸರಕಾರಿ ನೌಕರರ ಆತ್ಮಹತ್ಯೆ, ರೈತರ ಆತ್ಮಹತ್ಯೆ ಮೊದಲಾದ ಅನೇಕ ವಿಷಯಗಳನ್ನು ಪ್ರಸ್ತಾಪಿಸಿ ಸರಕಾರವನ್ನು ಕಟ್ಟಿ ಹಾಕುವ ಕೆಲಸ ಮಾಡುತ್ತೇವೆ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ನವೆಂಬರ್ 13 ರಂದು ನಡೆದ ಮೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋಲು ಕಂಡಿದ್ದು, ಚುನಾವಣಾ ಸೋಲಿನ ನೈತಿಕ ಹೊಣೆ ಯಾರ ಮೇಲೆ ಎಂಬ ಪ್ರಶ್ನೆ ಬಿಜೆಪಿ ಪಾಳಯದಲ್ಲಿ ಉದ್ಭವಿಸಿದ್ದು, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರ ರಾಜೀನಾಮೆಯ ಕೂಗು ಕಮಲ ಪಾಳಯದಲ್ಲಿಯೋ ಕೇಳಿ ಬರುತ್ತಿದೆ. ಈ ನಿಟ್ಟಿನಲ್ಲಿ ಹೈಕಮಾಂಡ್ ಯಾವ ನಿರ್ಧಾರವನ್ನ ತೆಗೆದುಕೊಳ್ಳಲಿದೆ ಎಂಬುದನ್ನ ಕಾದುನೋಡ್ಬೇಕಾಗಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications