ಪಿಎಸ್ಐ ನೇಮಕಾತಿ ರದ್ದು: ಗೃಹ ಸಚಿವರ ಹೇಳಿಕೆಗೆ ವಿರೋಧ

ಬೆಂಗಳೂರು, ಏ. 29: ಪಿಎಸ್ಐ ನೇಮಕಾತಿಯಲ್ಲಿ ಭಾರಿ ಅಕ್ರಮ ಕಂಡು ಬಂದ ಬೆನ್ನಲ್ಲೇ ನೇಮಕಾತಿ ಆದೇಶವನ್ನು ರದ್ದು ಪಡಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಆದೇಶಕ್ಕೆ ಪ್ರಾಮಾಣಿಕ ಅಭ್ಯರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ಮಾತ್ರವಲ್ಲ, ಸರ್ಕಾರದ ಈ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಲು ತಯಾರಿ ನಡೆಸಿದ್ದಾರೆ.

ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಅಕ್ರಮ ಕಂಡು ಬಂದ ಬೆನ್ನಲ್ಲೇ ಪರೀಕ್ಷೆಯನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಮಹತ್ವದ ತೀರ್ಮಾನ ಪ್ರಕಟಿಸಿದೆ. ಮರು ಪರೀಕ್ಷೆ ದಿನಾಂಕವನ್ನು ಪ್ರಕಟಿಸಿ ಪರೀಕ್ಷೆ ಬರೆದಿದ್ದ ಎಲ್ಲಾ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸಿಕೊಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟನೆ ನೀಡಿದ್ದಾರೆ. ಅಕ್ರಮದಲ್ಲಿ ಭಾಗಿಯಾದವರನ್ನು ಬಿಟ್ಟು ಉಳಿದವರಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವುದಾಗಿ ಸ್ಪಷ್ಟ ಪಡಿಸಿದ್ದಾರೆ.

ಸರ್ಕಾರದ ಈ ಆದೇಶ ಹಾಗೂ ಗೃಹ ಸಚಿವರ ಈ ಹೇಳಿಕೆ ಹೊರ ಬೀಳುತ್ತಿದ್ದಂತೆ ವರ್ಷಗಳಿಂದ ಜೀವನ ತ್ಯಜಿಸಿ ಪರೀಕ್ಷೆ ಬರೆದು ಪಾಸಾಗಿದ್ದ ಅಭ್ಯರ್ಥಿಗಳು ಕಣ್ಣೀರು ಹಾಕುತ್ತಿದ್ದಾರೆ. ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಸಿಐಡಿ ತನಿಖೆ ನಡೆಸುತ್ತಿದೆ. ತಪ್ಪಿತಸ್ಥರನ್ನು ಬಂಧಿಸಲಿ. ವರ್ಷಗಳಿಂದ ಕಷ್ಟ ಪಟ್ಟು ಪರೀಕ್ಷೆ ಬರೆದಿದ್ದೇವೆ. ಮತ್ತೊಮ್ಮೆ ಮರು ಪರೀಕ್ಷೆ ನಡೆಸುವುದರಿಂದ ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾದವರಿಗೆ ಅನ್ಯಾಯವಾಗುತ್ತಿದೆ. ಯಾರೋ ಅಕ್ರಮ ಎಸಗಿದರೆ, ಏನೂ ತಪ್ಪು ಮಾಡದ ನಮಗೆ ಯಾಕೆ ಶಿಕ್ಷೆ ಎಂದು ಪ್ರಶ್ನೆ ಮಾಡಿದ್ದಾರೆ.

Re exam for PSI Posts: Candidates to Go Court to Challenging Govt Decision

ಇದರ ನಡುವೆ ಹಿಂದಿನ ಪರೀಕ್ಷೆ ರದ್ದು ಮಾಡು ಮರು ಪರೀಕ್ಷೆ ಮಾಡುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಪಿಎಸ್ಐ ಆಯ್ಕೆಯಾದ ಅಭ್ಯರ್ಥಿಗಳು ಚಿಂತನೆ ನಡೆಸಿದ್ದಾರೆ. ಈಗಾಗಲೇ ಸಿಐಡಿ ವಿಚಾರಣೆ ಎದುರಿಸಿ ಯಾವುದೇ ಅಕ್ರಮ ಕಂಡು ಬಾರದ ಅಭ್ಯರ್ಥಿಗಳು ಒಗ್ಗೂಡಿ ಕಾನೂನು ತಜ್ಞರ ಅಭಿಪ್ರಾಯ ಪಡೆಯುತ್ತಿದ್ದಾರೆ.

Re exam for PSI Posts: Candidates to Go Court to Challenging Govt Decision

ಅಕ್ರಮದ ಬಗ್ಗೆ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರನ್ನು ಬಂಧಿಸಲಿ. ಮರು ಪರೀಕ್ಷೆ ಮಾಡುವುದರಿಂದ ಪ್ರಾಮಾಣಿಕವಾಗಿ ಪರೀಕ್ಷೆ ಬರೆದವರಿಗೆ ಅನ್ಯಾಯವಾಗಲಿದ್ದು, ಮರು ಪರೀಕ್ಷೆ ಮಾಡುವ ಸರ್ಕಾರದ ನಿರ್ಧಾರವನ್ನು ರದ್ದು ಪಡಿಸಿ ಎಂದು ಕೋರಿ ಹೈಕೋರ್ಟ್‌ನಲ್ಲಿ ದಾವೆ ಸಲ್ಲಿಸಲು ಮುಂದಾಗಿದ್ದಾರೆ. ಪರೀಕ್ಷೆ ರದ್ದು ನಿರ್ಣಯ ಅಂತಿಮವಾಗಿ ನ್ಯಾಯಾಲಯದ ತೀರ್ಪಿನ್ನು ಅವಲಂಭಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+