• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಮರು ಪರೀಕ್ಷೆ

|

ಬೆಂಗಳೂರು, ಡಿ. 5 : ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ನಡೆದ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಬಹಿರಂಗಗೊಂಡ ಹಿನ್ನಲೆಯಲ್ಲಿ ಪರೀಕ್ಷೆಯನ್ನು ರದ್ದುಪಡಿಸಿ ಹೊಸದಾಗಿ ಪರೀಕ್ಷೆ ನಡೆಸಲು ಸರ್ಕಾರ ನಿರ್ಧರಿಸಿದೆ. ಜನವರಿಯಲ್ಲಿ ಪರೀಕ್ಷೆ ನಡೆಯಲಿದ್ದು, ಶೀಘ್ರದಲ್ಲೇ ಈ ಕುರಿತ ಆದೇಶ ಹೊರಬೀಳಲಿದೆ.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎನ್.ಎಸ್.ಮೆಘರಿಕ್ ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದು, ನ.16ರಂದು ನಡೆದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆಯ ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳು ಕಲಬುರಗಿಯಲ್ಲಿ ಬಹಿರಂಗಗೊಂಡಿತ್ತು ಎಂದು ಹೇಳಿದರು.

ಒಂದು ಕೇಂದ್ರದಲ್ಲಿ ಮಾತ್ರ ಇಂತಹ ಅಕ್ರಮ ನಡೆದಿದೆ ಎಂದು ಭಾವಿಸಲಾಗಿತ್ತು. ಆದರೆ, ಸುಮಾರು 300 ಜನ ಅಭ್ಯರ್ಥಿಗಳು ಈ ಪ್ರಶ್ನೆ ಪತ್ರಿಕೆ ಲಾಭ ಪಡೆದುಕೊಂಡಿದ್ದರು. ಈ 300 ಜನರನ್ನು ಮತ್ತೆಂದೂ ಪೊಲೀಸ್ ನೇಮಕಾತಿ ಪರೀಕ್ಷೆಗೆ ಕೂರದಂತೆ ಅನರ್ಹಗೊಳಿಸಲಾಗುವುದು ಎಂದು ತಿಳಿಸಿದರು. [ಕೆಪಿಸಿಎಲ್ ನಲ್ಲಿ 359 ಹುದ್ದೆಗಳು ಖಾಲಿ ಇವೆ]

1.90 ಲಕ್ಷ ಅಭ್ಯರ್ಥಿಗಳಿದ್ದರು : ನವೆಂಬರ್‌ನಲ್ಲಿ ರಾಜ್ಯಾದ್ಯಂತ ನಡೆದ ಪರೀಕ್ಷೆಯನ್ನು ಒಟ್ಟು 1.90 ಲಕ್ಷ ಅಭ್ಯರ್ಥಿಗಳು ಬರೆದಿದ್ದರು. ಬೆಂಗಳೂರು ನಗರದಲ್ಲಿ 2,798 ಹುದ್ದೆಗಳಿಗಾಗಿ 31,592 ಜನ ಪರೀಕ್ಷೆ ಬರೆದಿದ್ದರು. ರಾಜ್ಯದಲ್ಲಿ ಒಟ್ಟು 6,600 ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಕರೆಯಲಾಗಿತ್ತು ಎಂದು ಮಾಹಿತಿ ನೀಡಿದರು. [81 ವಲಯ ಅರಣ್ಯಾಧಿಕಾರಿ ಹುದ್ದೆಗಳು ಖಾಲಿ ಇವೆ]

ಮೊದಲು ಬೆರಳಣಿಕೆಯಷ್ಟು ಅಭ್ಯರ್ಥಿಗಳು ಮಾತ್ರ ಪ್ರಶ್ನೆಪತ್ರಿಕೆ ಬಹಿರಂಗದ ಲಾಭ ಪಡೆದಿರಬಹುದು ಎಂದು ಭಾವಿಸಲಾಗಿತ್ತು. ಆದರೆ, ತನಿಖೆಯ ನಂತರ ಸುಮಾರು 300ಕ್ಕೂ ಹೆಚ್ಚು ಅಭ್ಯರ್ಥಿಗಳು ಇದರ ಲಾಭ ಪಡೆದಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನೇ ರದ್ದುಗೊಳಿಸಿ, ಹೊಸದಾಗಿ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದರು.

ನವೆಂಬರ್‌ನಲ್ಲಿ ಪರೀಕ್ಷೆ ಬರೆದ ಅಭ್ಯರ್ಥಿಗಳು ಮತ್ತೆ ಜನವರಿಯಲ್ಲಿ ಪರೀಕ್ಷೆ ಬರೆಯುವುದು ಅನಿವಾರ್ಯವಾಗಿದೆ. ಇದರಿಂದ ಸಾವಿರಾರು ಅಭ್ಯರ್ಥಿಗಳಿಗೆ ತೊಂದರೆಯಾಗಲಿದೆ. ಆದರೆ, ಈ ಕ್ರಮ ಅನಿವಾರ್ಯವಾಗಿದೆ ಎಂದು ತಿಳಿಸಿದರು. ಪರೀಕ್ಷೆಯ ದಿನಾಂಕ ಶೀಘ್ರದಲ್ಲೇ ಪ್ರಕಟವಾಗಲಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Director General of Police(recruitment) N.S. Megharikh said, We will conduct re exam for recruit civil police constables. In November exam question paper leaked at Kalaburagi district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more