Get Updates
Get notified of breaking news, exclusive insights, and must-see stories!

ಸುಪ್ರೀಂ ತೀರ್ಪು : ಅನಂತಮೂರ್ತಿ ಹೇಳಿದ್ದೇನು?

ಬೆಂಗಳೂರು, ಮೇ 6 : ಪ್ರಾಥಮಿಕ ಶಿಕ್ಷಣದಲ್ಲಿ ಕನ್ನಡ ಮಾಧ್ಯಮ ಕಡ್ಡಾಯವಿಲ್ಲ ಎಂದು ಸುಪ್ರೀಂಕೋರ್ಟ್ ಮಂಗಳವಾರ ಆದೇಶ ನೀಡಿದೆ. ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ತೀರ್ಪುನ್ನು ಎತ್ತಿ ಹಿಡಿಯುವ ಮೂಲಕ ರಾಜ್ಯ ಸರ್ಕಾರಕ್ಕೆ ಹಿನ್ನಡೆ ಉಂಟು ಮಾಡಿದೆ. ಕರ್ನಾಟಕದ ವಿವಿಧ ನಾಯಕರು ಸುಪ್ರೀಂ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.

ಈ ತೀರ್ಪನ್ನು ಒಪ್ಪಲು ಸಾಧ್ಯವಿಲ್ಲ, ಈ ಕುರಿತು ಕೇಂದ್ರ ಸರ್ಕಾರ ಮತ್ತು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಹೇಳಿದ್ದಾರೆ. ಕನ್ನಡ ಚಳವಳಿ ವಾಟಾಳ್ ಪಕ್ಷ ಅಧ್ಯಕ್ಷ ವಾಟಾಳ್ ನಾಗರಾಜ್, ಮಾಜಿ ಸಿಎಂ ಡಿವಿ ಸದಾನಂದ ಗೌಡ, ಸಾಹಿತಿ ಬಂಜೆಗೆರೆ ಜಯಪ್ರಕಾಶ್ ಮುಂತಾದವರು ಸುಪ್ರೀಂ ಕೋರ್ಟ್ ತೀರ್ಪನ್ನು ವಿರೋಧಿಸಿದ್ದಾರೆ. ಯಾರು ಏನು ಹೇಳಿದರು ಚಿತ್ರಗಳಲ್ಲಿ ನೋಡಿ [ಸುಪ್ರೀಂ ತೀರ್ಪು ಹೇಳಿದ್ದೇನು?]

ಮಗುವಿನ ಹಕ್ಕಿನ ಕುರಿತು ಯಾರು ಯೋಚಿಸಿದ್ದಾರೆ?

ಮಗುವಿನ ಹಕ್ಕಿನ ಕುರಿತು ಯಾರು ಯೋಚಿಸಿದ್ದಾರೆ?

ಸುಪ್ರೀಂಕೋರ್ಟ್ ತೀರ್ಪಿನ ಕುರಿತು ಪ್ರತಿಕ್ರಿಯೆ ನೀಡಿರುವ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಯುಆರ್ ಅನಂತಮೂರ್ತಿ, ಇದು ಅವೈಜ್ಞಾನಿಕ ತೀರ್ಪು. ಅಪ್ಪ-ಅಮ್ಮನ ಹಕ್ಕುಗಳ ಬಗ್ಗೆ ತೀರ್ಪುನಲ್ಲಿ ಹೇಳಲಾಗಿದೆ. ಮಗುವಿಗೂ ಕಲಿಯುವ ಸ್ವಾತಂತ್ರ್ಯವಿರುತ್ತದೆ. ಅದರ ಬಗ್ಗೆ ಏಕೆ ಪ್ರಸ್ತಾಪಿಲ್ಲ ಎಂದು ಪ್ರಶ್ನಿಸಿದ್ದಾರೆ. ಮಾತೃಭಾಷಯ ಕಲಿಕೆ ಎನ್ನುವ ಕಲ್ಪನೆಯೇ ತಪ್ಪು. ಅದನ್ನು ನಾನು 'ಆವರಣದ ಭಾಷೆ' ಅಂದರೆ ಬೆಳೆಯುವ ಪರಿಸರದ ಭಾಷೆ ಎಂದು ಕರೆಯಲು ಇಚ್ಛಿಸುತ್ತೇನೆ ಎಂದು ಹೇಳಿದ್ದಾರೆ.

ತಕ್ಷಣ ಸರ್ಕಾರ ಮೇಲ್ಮನವಿ ಸಲ್ಲಿಸಬೇಕು

ತಕ್ಷಣ ಸರ್ಕಾರ ಮೇಲ್ಮನವಿ ಸಲ್ಲಿಸಬೇಕು

ಸುಪ್ರೀಂ ತೀರ್ಪಿನ ಕುರಿತು ಪ್ರತಿಕ್ರಿಯೆ ನೀಡಿರುವ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು, ರಾಜ್ಯ ಸರ್ಕಾರ ತೀರ್ಪಿನ ಕುರಿತು ಕೂಡಲೇ ಮೇಲ್ಮನವಿ ಸಲ್ಲಿಸಬೇಕು. ಎಲ್ಲಾ ರಾಜ್ಯಗಳನ್ನು ಒಂದುಗೂಡಿಸಿ ರಾಷ್ಟ್ರೀಯ ಶಿಕ್ಷಣ ನೀತಿಯ ತಿದ್ದುಪಡಿಗೆ ಮುಂದಾಗಬೇಕು ಎಂದು ಒತ್ತಾಯಿಸಿದ್ದಾರೆ.

ಕಾನೂನು ತಜ್ಞರ ಜೊತೆ ಚರ್ಚಿಸಿ ತೀರ್ಮಾನ

ಕಾನೂನು ತಜ್ಞರ ಜೊತೆ ಚರ್ಚಿಸಿ ತೀರ್ಮಾನ

ಸುಪ್ರೀಂಕೋರ್ಟ್ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ತೀರ್ಪಿನ ಪ್ರತಿ ಇನ್ನೂ ಲಭ್ಯವಾಗಿಲ್ಲ, ಪ್ರತಿ ಲಭ್ಯವಾದ ನಂತರ ಸಾಹಿತಿಗಳ, ಸಂಘಟನೆಗಳ ಸಭೆ ಕರೆದು ಈ ವಿಚಾರದ ಕುರಿತು ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ. [ಕನ್ನಡದ ಭವಿಷ್ಯಕ್ಕೆ ಮಾರಕವಾದ ತೀರ್ಪು]

ಸರ್ಕಾರಕ್ಕೆ ಮುಖಭಂಗ ಆಗಿಲ್ಲ

ಸರ್ಕಾರಕ್ಕೆ ಮುಖಭಂಗ ಆಗಿಲ್ಲ

ಸುಪ್ರೀಂಕೋರ್ಟ್ ತೀರ್ಪಿನಿಂದ ಕರ್ನಾಟಕ ಸರ್ಕಾರಕ್ಕೆ ಮುಖಭಂಗವಾಗಿಲ್ಲ. ಸರ್ಕಾರದ ಮುಂದೆ ಹಲವಾರು ಮಾರ್ಗಗಳಿವೆ. ತೀರ್ಪಿನ ಪ್ರತಿ ದೊರಕಿದ ನಂತರ ಸಾಹಿತಿಗಳು, ಕನ್ನಡ ಪರ ಹೋರಾಟಗಾರರು, ಸಂಸದರು ಮುಂತಾದವರೊಂದಿಗೆ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಹೇಳಿದ್ದಾರೆ.

ಕನ್ನಡಕ್ಕೆ ಕೊಡಲಿ ಪೆಟ್ಟು

ಕನ್ನಡಕ್ಕೆ ಕೊಡಲಿ ಪೆಟ್ಟು

ಸುಪ್ರೀಂಕೋರ್ಟ್ ತೀರ್ಪು ಆಘಾತಕಾರಿಯಾಗಿದ್ದು ಇದರಿಂದ ಕನ್ನಡಕ್ಕೆ ಕೊಡಲಿ ಪೆಟ್ಟು ಬಿದ್ದಿದೆ ಎಂದು ಮಾಜಿ ಸಿಎಂ ಡಿವಿ ಸದಾನಂದ ಗೌಡ ಹೇಳಿದ್ದಾರೆ. ಸರ್ಕಾರ ಸಂಘಟನೆ, ಕಾನೂನು ತಜ್ಞರ ಸಭೆ ಕರೆದು ಮುಂದಿನ ಕ್ರಮದ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕನ್ನಡಕ್ಕೆ ಮಾರಕವಾದ ತೀರ್ಪು

ಕನ್ನಡಕ್ಕೆ ಮಾರಕವಾದ ತೀರ್ಪು

ಸುಪ್ರೀಂಕೋರ್ಟ್ ತೀರ್ಪು ಕನ್ನಡದ ನೆಲದಲ್ಲಿ ಕನ್ನಡ ಭಾಷೆಯ ಉಳಿವಿಗೆ ಮಾರಕವಾಗಿಗೆ ಎಂದು ಸಾಹಿತಿ ಡಾ.ಬಂಜೆಗೆರೆ ಜಯಪ್ರಕಾಶ್ ಹೇಳಿದ್ದಾರೆ. ಸದ್ಯ ಅನೇಕ ಅನಿವಾರ್ಯ ಕಾರಣಗಳಿಗಾಗಿ ಕನ್ನಡಿಗರು ಇಂಗ್ಲಿಷ್ ಮೊರೆ ಹೋಗುತ್ತಿದ್ದಾರೆ. ಸುಪ್ರೀಂ ಆದೇಶ ಒಪ್ಪಿಕೊಂಡಲ್ಲಿ. ಕನ್ನಡ ಭಾಷೆಯ ಅವನತಿ ಆರಂಭವಾಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಮೇಲ್ಮನವಿ ಸಲ್ಲಿಸೋಣ

ಮೇಲ್ಮನವಿ ಸಲ್ಲಿಸೋಣ

ಸುಪ್ರೀಂಕೋರ್ಟ್ ಈ ತೀರ್ಪನ್ನು ಕನ್ನಡಿಗರು ಒಪ್ಪಲು ಸಾಧ್ಯವಿಲ್ಲ ಈ ಕುರಿತು ಕೇಂದ್ರ ಸರ್ಕಾರ ಮತ್ತು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಪ್ರತಿಕ್ರಿಯೆ ನೀಡಿದ್ದಾರೆ. ಕನ್ನಡ ಮಾಧ್ಯಮ ಕಡ್ಡಾಯವಲ್ಲ ಎಂದರೆ, ಭಾಷಾವಾರು ಪ್ರಾಂತ್ಯಗಳ ರಚನೆಯ ಅಗತ್ಯವೇನಿತ್ತು ಎಂದು ಅವರು ಪ್ರಶ್ನಿಸಿದ್ದಾರೆ. ಸರ್ಕಾರ ಕೂಡಲೇ ಸಾಹಿತಿಗಳ ಸಭೆ ಕರೆಯಬೇಕು ಎಂದು ಒತ್ತಾಯಿಸಿದ್ದಾರೆ.

ಒಪ್ಪಲು ಸಾಧ್ಯವಿಲ್ಲ

ಒಪ್ಪಲು ಸಾಧ್ಯವಿಲ್ಲ

ಸುಪ್ರೀಂಕೋರ್ಟ್ ತೀರ್ಪು ಕನ್ನಡಕ್ಕೆ ಮಾರಕವಾಗಿದ್ದು ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಹೇಳಿದ್ದಾರೆ. ಸರ್ಕಾರ ಈ ಕುರಿತು ಸುಪ್ರೀಂಗೆ ಮೇಲ್ಮನವಿ ಸಲ್ಲಿಸಬೇಕು ಮತ್ತು ಸಮರ್ಥ ವಕೀಲರನ್ನು ನೇಮಿಸಬೇಕು ಎಂದು ಒತ್ತಾಯಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+