ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಿಂದಾಲ್ ವಿವಾದ : ಚರ್ಚೆಗೆ ಸಿದ್ಧ ಎಂದ ಕುಮಾರಸ್ವಾಮಿ

|
Google Oneindia Kannada News

ಬೆಂಗಳೂರು, ಜೂನ್ 16 : 'ಬಿಜೆಪಿ ನಾಯಕರ ಅಹೋರಾತ್ರಿ ಪ್ರತಿಭಟನೆಯನ್ನು ಗಮನಿಸಿದ್ದೇನೆ. ಸಿಎಂ ಕಚೇರಿಗೆ ಮುತ್ತಿಗೆಯ ಅವಶ್ಯಕತೆಯಿಲ್ಲ' ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಜಿಂದಾಲ್ ವಿಚಾರದಲ್ಲಿ ಬಿಜೆಪಿ ನಾಯಕರು ಬೆಂಗಳೂರಿನಲ್ಲಿ ಆಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಕುರಿತು ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ. ಇಂದು ಬಿಜೆಪಿ ನಾಯಕರು ಮುಖ್ಯಮಂತ್ರಿಗಳ ಗೃಹ ಕಚೇರಿಗೆ ಮುತ್ತಿಗೆ ಹಾಕಲು ತೀರ್ಮಾನಿಸಿದ್ದಾರೆ.

ಜಿಂದಾಲ್ ವಿವಾದ : ಅಹೋರಾತ್ರಿ ಧರಣಿ ಆರಂಭಿಸಿದ ಬಿಜೆಪಿಜಿಂದಾಲ್ ವಿವಾದ : ಅಹೋರಾತ್ರಿ ಧರಣಿ ಆರಂಭಿಸಿದ ಬಿಜೆಪಿ

'ಜಿಂದಾಲ್, ಬರ, ರೈತರ ಸಾಲಮನ್ನಾ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಚರ್ಚೆಗೆ ಸಿದ್ದನಿದ್ದೇನೆ.
ಪ್ರಧಾನಿ ಸೇರಿದಂತೆ ಕೇಂದ್ರದ ಸಚಿವರೊಂದಿಗೆ ಹಲವು ಸಮಸ್ಯೆ ಕುರಿತು ಚರ್ಚಿಸಿದ್ದೇನೆ. ನಿಮ್ಮ ಸಮಯ ತಿಳಿಸಿ ಚರ್ಚೆಗೆ ನಾನು ಸಿದ್ದ' ಎಂದು ಕುಮಾರಸ್ವಾಮಿ ಟ್ವೀಟ್‌ ಮಾಡಿದ್ದಾರೆ.

ಜಿಂದಾಲ್ ವಿವಾದ : ಕರ್ನಾಟಕ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆಗಳುಜಿಂದಾಲ್ ವಿವಾದ : ಕರ್ನಾಟಕ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆಗಳು

ಶುಕ್ರವಾರದಿಂದ ಬೆಂಗಳೂರಿನ ಆನಂದ್ ರಾವ್ ವೃತ್ತದ ಬಳಿಯ ಮೌರ್ಯ ಸರ್ಕಲ್‌ನಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ನಾಯಕರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ....

ಜಿಂದಾಲ್ ವಿವಾದ : ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ಜಿಂದಾಲ್ ವಿವಾದ : ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್

ಏನಿದು ಜಿಂದಾಲ್ ವಿವಾದ?

ಏನಿದು ಜಿಂದಾಲ್ ವಿವಾದ?

ಕರ್ನಾಟಕ ಸರ್ಕಾರ ಜಿಂದಾಲ್ ಕಂಪನಿಗೆ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಮತ್ತು ಕರೆಕುಪ್ಪ ಗ್ರಾಮಗಳಲ್ಲಿ 2001 ಎಕರೆ, ಸಂಡೂರು ತಾಲೂಕಿನ ಮುಸೇನಾಯಕನಹಳ್ಳಿ, ಯರಬನಹಳ್ಳಿ ಗ್ರಾಮಗಳಲ್ಲಿ 1,666 ಎಕರೆ ಸೇರಿ ಒಟ್ಟು 3,667 ಎಕರೆ ಭೂಮಿಯನ್ನು ಮಾರುಕಟ್ಟೆ ದರಕ್ಕಿಂತ ಕಡಿಮೆ ದರದಲ್ಲಿ ನೀಡಲು ಕ್ರಯ ಪತ್ರ ಮಾಡಿಕೊಡಲು ತೀರ್ಮಾನ ಕೈಗೊಂಡಿದೆ. ಈ ತೀರ್ಮಾನ ವಿವಾದಕ್ಕೆ ಕಾರಣವಾಗಿದೆ.

ಸಂಪುಟ ಉಪ ಸಮಿತಿ ರಚನೆ

ಸಂಪುಟ ಉಪ ಸಮಿತಿ ರಚನೆ

ಜಿಂದಾಲ್‌ಗೆ ಭೂಮಿ ನೀಡುವ ವಿಚಾರ ವಿವಾದಕ್ಕೆ ಕಾರಣವಾಗುತ್ತಿದ್ದಂತೆ ಸರ್ಕಾರ ತೀರ್ಮಾನವನ್ನು ಪುನರ್ ಪರಿಶೀಲನೆ ಮಾಡಲು ಮುಂದಾಗಿದೆ. 'ಜಿಂದಾಲ್ ಸಂಸ್ಥೆಗೆ ಭೂಮಿ ನೀಡುವ ವಿಚಾರದ ಬಗ್ಗೆ ಸಾರ್ವಜನಿಕ ವಲಯದಲ್ಲಿ ಅಪಸ್ವರ ಕೇಳಿಬಂದ ಹಿನ್ನಲೆಯಲ್ಲಿ ಸಂಪುಟ ಉಪ ಸಮಿತಿ ರಚಿಸಲಾಗುತ್ತದೆ. ಸಮಿತಿ ವರದಿ ನೀಡಿದ ಬಳಿಕ ಸರ್ಕಾರ ಮುಂದಿನ ತೀರ್ಮಾನ ತೆಗೆದುಕೊಳ್ಳಲಿದೆ' ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು.

ಅಹೋರಾತ್ರಿ ಧರಣಿ

ಅಹೋರಾತ್ರಿ ಧರಣಿ

ಜಿಂದಾಲ್‌ಗೆ ಮಾರುಕಟ್ಟೆ ದರಕ್ಕಿಂತ ಕಡಿಮೆ ದರದಲ್ಲಿ ಭೂಮಿ ನೀಡಲು ಹೊರಟಿರುವ ಕರ್ನಾಟಕ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ಅಹೋರಾತ್ರಿ ಧರಣಿ ನಡೆಸುತ್ತಿದೆ. ಭಾನುವಾರ ಮುಖ್ಯಮಂತ್ರಿಗಳ ಗೃಹ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ನಾಯಕರು ತೀರ್ಮಾನಿಸಿದ್ದಾರೆ.

ಚರ್ಚೆಗೆ ಸಿದ್ಧ ಎಂದರು ಸಿಎಂ

ಚರ್ಚೆಗೆ ಸಿದ್ಧ ಎಂದರು ಸಿಎಂ

'ಬಿಜೆಪಿ ನಾಯಕರ ಅಹೋರಾತ್ರಿ ಪ್ರತಿಭಟನೆಯನ್ನು ಗಮನಿಸಿದ್ದೇನೆ. ಸಿಎಂ ಕಚೇರಿಗೆ ಮುತ್ತಿಗೆಯ ಅವಶ್ಯಕತೆಯಿಲ್ಲ. ಜಿಂದಾಲ್ ಸೇರಿದಂತೆ ಎಲ್ಲ ವಿಷಯಗಳ ಬಗ್ಗೆ ಚರ್ಚೆಗೆ ಸಿದ್ದನಿದ್ದೇನೆ' ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

English summary
Karnataka Chief Minister H.D.Kumaraswamy tweeted that ready for discuss in Jindal row with opposition party BJP protesting against Karnataka government decision to handover 3,667 acres land to the JSW Steel in Ballari district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X