ವಿಶ್ವಾಸಮತ ಯಾಚನೆಗೆ ನಾವು ಸಿದ್ಧ : ದಿನೇಶ್ ಗುಂಡೂರಾವ್
Recommended Video
ಬೆಂಗಳೂರು, ಜುಲೈ 11 : 'ಅಧಿವೇಶನದಲ್ಲಿ ನಾವು ಶಕ್ತಿ ಪ್ರದರ್ಶನ ಮಾಡುತ್ತೇವೆ. ನಾವು ವಿಶ್ವಾಸಮತ ಯಾಚನೆ ಮಾಡಲು ಸಿದ್ಧರಿದ್ದೇವೆ. ಅವಿಶ್ವಾಸ ನಿರ್ಣಯ ಮಂಡನೆ ಮಾಡುವುದರ ಬಗ್ಗೆ ಬಿಜೆಪಿ ಮಾತನಾಡುತ್ತಿಲ್ಲ' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ಗುರುವಾರ ವಿಧಾನಸೌಧದಲ್ಲಿ ಮಾತನಾಡಿದ ಅವರು, 'ಅಧಿವೇಶನದಲ್ಲಿ ನಮ್ಮ ಶಕ್ತಿ ಪ್ರದರ್ಶನ ಮಾಡುತ್ತೇವೆ. ನಾವೇ ಬಹುಮತ ಸಾಬೀತು ಪಡಿಸುತ್ತೇವೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.
'ಇಬ್ಬರು ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ರಮೇಶ್ ಕುಮಾರ್ ಅವರಿಗೆ ಮನವಿ ಮಾಡಿದ್ದೇವೆ. ಉಳಿದ ವಿಚಾರದ ಬಗ್ಗೆ ನಾನು ಏನೂ ಹೇಳುವುದಿಲ್ಲ. ಸ್ಪೀಕರ್ ತಮ್ಮ ತೀರ್ಮಾನವನ್ನು ತೆಗೆದುಕೊಳ್ಳಲಿದ್ದಾರೆ' ಎಂದರು.

'ದೇಶದಲ್ಲಿ ಸರ್ವಾಧಿಕಾರಿ ಆಡಳಿತ ನಡೆಯುತ್ತಿದೆ. ಕುದುರೆ ವ್ಯಾಪಾರ ತೆಡೆಯುವುದು ಮಾತ್ರ ನಮ್ಮ ಕೆಲಸ. ಪಕ್ಷಕ್ಕೆ ದ್ರೋಹ ಬಗೆಯುವ ಶಾಸಕರಿಗೆ ಬುದ್ಧಿ ಕಲಿಸಬೇಕು. ರಾಜ್ಯದ ಜನರು ಶಿಕ್ಷೆ ಕೊಡಬೇಕು ಎಂದು ಬಯಸುತ್ತಿದ್ದಾರೆ' ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.
ಅತೃಪ್ತ ಶಾಸಕರ ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ. ಆದ್ದರಿಂದ, ಶುಕ್ರವಾರ ಅಧಿವೇಶನದಲ್ಲಿ ಪಾಲ್ಗೊಳ್ಳಿ ಎಂದು ಕಾಂಗ್ರೆಸ್ ಶಾಸಕರಿಗೆ ವಿಪ್ ಜಾರಿಗೊಳಿಸಿದೆ. ಒಂದು ವೇಳೆ ಸದನದಲ್ಲಿ ವಿಶ್ವಾಸ ಮತ ಯಾಚನೆ ನಡೆದರೆ ಶಾಸಕರು ಕಾಂಗ್ರೆಸ್ ಪರವಾಗಿ ಮತ ಚಲಾಯಿಸಬೇಕಿದೆ.












Click it and Unblock the Notifications