'ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗೆ ಸಿದ್ದ'

'ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ UPA 3 ಸರಕಾರವನ್ನು ಅಸ್ತಿತ್ವಕ್ಕೆ ತರುವುದು ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತನ ಧರ್ಮ. ಹಾಗಾಗಿ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ನಾನು ಉತ್ಸುಕನಾಗಿದ್ದೇನೆ. ಆದರೆ ನಾನು ಚುನಾವಣೆಯಲ್ಲಿ ಸ್ಪರ್ಧಿಸಲಿ/ಬಿಡಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪೂರ್ಣ ಪ್ರಮಾಣದಲ್ಲಿ ಸಕ್ರಿಯವಾಗಿ ಪ್ರಚಾರ ಕಾರ್ಯದಲ್ಲಿ ತೊಡಗುತ್ತೇನೆ' ಎಂದು ಮಾಜಿ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಹೇಳಿದ್ದಾರೆ.
ಚುನಾವಣೆಯಲ್ಲಿ ಸ್ಪರ್ಧಸಬೇಕು ಎಂಬುದು ನನ್ನ ಇಚ್ಛೆ. ಆದರೆ ನನ್ನ ಸ್ಪರ್ಧೆ ಬಗ್ಗೆ ಅಂತಿಮ ತೀರ್ಮಾನ ತೆಗೆದುಕೊಳ್ಳಬೇಕಿರುವುದು ಹೈಕಮಾಂಡ್ ಎಂದೂ ಕೃಷ್ಣ ಸ್ಪಷ್ಟಪಡಿಸಿದರು.
'ಕಾಂಗ್ರೆಸ್ ನನಗೆ ಎಲ್ಲ ರೀತಿಯ ಅಧಿಕಾರ ನೀಡಿದೆ. ಆ ಜವಾಬ್ದಾರಿಗಳನ್ನು ನಾನೂ ಯಶಸ್ವಿಯಾಗಿ ಪೂರೈಸಿರುವೆ. ಮುಂದೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುವುದು ಕಾಂಗ್ರೆಸ್ಸಿಗನಾಗಿ ನನ್ನ ಮೇಲೆ ಮಹತ್ತರ ಜವಾಬ್ದಾರಿ ಇದೆ' ಎಂದು ಅವರು ಪುನರುಚ್ಚರಿಸಿದರು.
ಇದೇ ವೇಳೆ, ಸಂಸದೆ ರಮ್ಯಾ ಅವರ ಕಾರ್ಯವೈಖರಿ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಕೃಷ್ಣ, ಸಂಸದೆಯಾಗಿ ಅವರು ಉತ್ತಮ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.












Click it and Unblock the Notifications