ಎಂಎಲ್‌ಸಿ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ನಿಂದ ಟಿಕೆಟ್ ಬೇಡಿಕೆ ಇಟ್ಟ ಆಯನೂರು ಮಂಜುನಾಥ್
ಶಿವಮೊಗ್ಗ, ಆಗಸ್ಟ್ 18: ಕಾಂಗ್ರೆಸ್ ಟಿಕೆಟ್ ನೀಡಿದರೆ ನೈರುತ್ಯ ಪದವೀಧರ ಕ್ಷೇತ್ರದಿಂದ ವಿಧಾನಪರಿಷತ್ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್ ಹೇಳಿದ್ದಾರೆ.
ಮಂಜುನಾಥ್ ಅವರನ್ನು ಪಕ್ಷಕ್ಕೆ ತೆಗೆದುಕೊಳ್ಳಬೇಡಿ ಎಂದು ಶಿವಮೊಗ್ಗದ ಕಾಂಗ್ರೆಸ್ ಮುಖಂಡ ಯೋಗೀಶ್ ಅವರು ಪಕ್ಷದ ಹಿರಿಯ ಮುಖಂಡರಿಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಾನು ಯಾವುದೇ ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿಲ್ಲ. ನಾನು ಸದನದಲ್ಲಿ ಇರಲು ಉತ್ಸುಕನಾಗಿರುವುದರಿಂದ ಚುನಾವಣೆಗೆ ಸ್ಪರ್ಧಿಸುವುದು ಸ್ಪಷ್ಟವಾಗಿದೆ. ಆದರೆ ಯಾವ ಪಕ್ಷದಿಂದ ಸ್ಪರ್ಧಿಸಬೇಕು ಎಂದು ಇನ್ನೂ ನಿರ್ಧರಿಸಿಲ್ಲ ಎಂದು ತಿಳಿಸಿದರು.

ನೈರುತ್ಯ ಪದವೀಧರ ಕ್ಷೇತ್ರದಿಂದ ಕಳೆದ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಪಡೆದಿದ್ದ ನಾನು ಈ ಬಾರಿಯೂ ಕಣಕ್ಕೆ ಇಳಿಯಲು ಈಗಾಗಲೇ ಸಿದ್ಧತೆ ನಡೆಸಿದ್ದೇನೆ. ಆದರೆ, ಟಿಕೆಟ್ ಬಯಸಿ ಕಾಂಗ್ರೆಸ್‌ನ ಮುಖಂಡರನ್ನು ಭೇಟಿ ಮಾಡಿಲ್ಲ. ಯೋಗೇಶ್ ಅವರ ಪತ್ರ ಆಶ್ಚರ್ಯ ತಂದಿದೆ ಎಂದರು.
ವಿಧಾನ ಪರಿಷತ್‌ನ ಬಿಜೆಪಿ ಸದಸ್ದಯರಾಗಿದ್ದ ಆಯನೂರು ಮಂಜುನಾಥ್ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿದ್ದರು. ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಸೋತಿದ್ದರು. ಕಾಂಗ್ರೆಸ್‌ನಿಂದ ಗೆದ್ದು ಬಿಜೆಪಿಗೆ ಪಕ್ಷಾಂತರ ಮಾಡಿದ್ದ ಶಾಸಕರು ಈಗ ಮತ್ತೆ ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿ ಬೆನ್ನಲ್ಲೇ ಕಳೆದ ಚುನಾವಣೆಯಲ್ಲಿ ಬಿಜೆಪಿ ತೊರೆದು ಜೆಡಿಎಸ್ ಸೇರಿದ್ದ ಮಾಜಿ ವಿಧಾನ ಪರಿಷತ್ತು ಸದಸ್ಯ ಆಯನೂರು ಮಂಜುನಾಥ್ ಸೇರಿದಂತೆ ಹಲವರು ಕಾಂಗ್ರೆಸ್ ಪಕ್ಷ ಸೇರ್ಪಡೆಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಶಿವಮೊಗ್ಗದಲ್ಲಿ ಬಿಜೆಪಿಯ ಆಯನೂರು ಮಂಜುನಾಥ್, ಕಾಂಗ್ರೆಸ್‌ನ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಮತ್ತವರ ಬೆಂಬಲಿಗರು ತಮ್ಮ ಮಾತೃಪಕ್ಷವನ್ನು ತೊರೆದು ಜೆಡಿಎಸ್ ಸೇರಿದ್ದರು. ಜೆಡಿಎಸ್‌ಗೆ ಪಕ್ಷಾಂತರ ಮಾಡಿ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಪಡೆದು ಸ್ಪರ್ಧಿಸಿದ್ದು, ಭಾರಿ ಹವಾ ಸೃಷ್ಟಿಸಿದ್ದರು.
ಆದರೆ, ಎಲ್ಲ ಲೆಕ್ಕಾಚಾರ ತಲೆಕೆಳಗಾಗಿ ಅತ್ಯಂತ ಕಡಿಮೆ ಮತ ಪಡೆದಿದ್ದರು. ಇನ್ನೊಂದೆಡೆ ಇವರ ಬೆನ್ನಿಗೆ ಕಾಂಗ್ರೆಸ್ ಪಕ್ಷದಿಂದ ಟಿಕೆಟ್ ನೀಡಲಿಲ್ಲ ಎಂದು ಬೇಸರಿಸಿಕೊಂಡು ಜೆಡಿಎಸ್ ಸೇರಿದ್ದ ಕೆ.ಬಿ. ಪ್ರಸನ್ನಕುಮಾರ್ ಅವರು ಕೂಡ ಸರ್ಕಾರ ರಚನೆಯಲ್ಲಿ ಜೆಡಿಎಸ್ ನಿರ್ಣಾಯಕ ಪಾತ್ರ ವಹಿಸುವ ಮೂಲಕ ತಮ್ಮ ರಾಜಕೀಯ ಭವಿಷ್ಯಕ್ಕೆ ಅಡಿಪಾಯ ಆಗುತ್ತದೆ ಎಂದು ಭಾವಿಸಿದ್ದರು. ಅವರ ಲೆಕ್ಕಾಚಾರ ಕೂಡ ಉಲ್ಟಾಆಯಿತು.
ಕಳೆದ ಬಾರಿಯೂ ಆಯನೂರು ಮಂಜುನಾಥ್ ಜೆಡಿಎಸ್‌ಗೆ ಹೋಗುವ ಮುನ್ನ ಕಾಂಗ್ರೆಸ್‌ಗೆ ಸೇರಲು ಬಯಸಿದ್ದರು. ಆದರೆ ಆಗ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದ ಎಲ್ಲ 12 ಮಂದಿ ಒಟ್ಟುಗೂಡಿ ಆಯನೂರು ಪ್ರವೇಶವನ್ನು ವಿರೋಧಿಸಿದ್ದರು. ಹೀಗಾಗಿ, ಕೊನೆಗಳಿಗೆವರೆಗೂ ಆಯನೂರ್‌ಗೆ ಕಾಂಗ್ರೆಸ್ ಪ್ರವೇಶ ಸಿಗಲೇ ಇಲ್ಲ. ಇದೀಗ ಪುನಃ ಕಾಂಗ್ರೆಸ್ ಕದ ತಟ್ಟತೊಡಗಿದ್ದಾರೆ.
ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಬಂದಿರುವ ಆಯನೂರು ಮಂಜುನಾಥ್ ಅವರು ತೀವ್ರ ಪ್ರಯತ್ನ ಮುಂದುವರಿಸಿದ್ದಾರೆ. ಸಿದ್ದರಾಮಯ್ಯ ಅವರ ಭೇಟಿಯ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಇಲ್ಲಿ ಹಸಿರು ಸಿಗ್ನಲ್ ಸಿಕ್ಕರೆ ಸೇರ್ಪಡೆ ಖಚಿತವಾಗಬಹುದು ಎನ್ನಲಾಗಿದೆ.
-
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications