ಗೋವಾದ ಸಂತ್ರಸ್ತ ಕನ್ನಡಿಗರಿಗೆ ಪುನರ್ ವಸತಿ ಕಲ್ಪಿಸಲು ಸಿದ್ಧ: ಸಿಎಂ

ಬೆಂಗಳೂರು, ಅಕ್ಟೋಬರ್ 4: ಗೋವಾ ಸರ್ಕಾರದ ದೌರ್ಜನ್ಯಕ್ಕೆ ತುತ್ತಾಗಿ ಮನೆ ಕಳೆದುಕೊಂಡ ಕನ್ನಡಿಗರಿಗೆ ಪುನರ್ ವಸತಿ ಕಲ್ಪಿಸಲು ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಗೋವಾ ಸರ್ಕಾರ ಜಾಗ ಕೊಟ್ಟರೆ ಸಂತ್ರಸ್ತ ಕನ್ನಡಿಗರಿಗೆ ಮನೆ ಕಟ್ಟಿ ಕೊಡಲು ಆರ್ಥಿಕ ಸಹಕಾರ ನೀಡಲು ಸಿದ್ದವಿದ್ದು, ಈ ಕುರಿತು ಸಚಿವರ ನಿಯೋಗವನ್ನು ಗೋವಾ ರಾಜ್ಯಕ್ಕೆ ಕಳುಹಿಸಿ ಕೊಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ.

Ready to rehabilitate Goa's Kannadiga victims : Siddaramaiah

ಇತ್ತೀಚೆಗೆ ಗೋವಾ ಸರ್ಕಾರ ಒತ್ತುವರಿ ತೆರವು ನೆಪದಲ್ಲಿ ಕನ್ನಡಿಗರ ಮನೆಗಳನ್ನು ನೆಲ ಸಮಗೊಳಿಸಿತ್ತು.

ಈ ಕುರಿತು ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗಡಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಗೋವಾ ರಾಜ್ಯಕ್ಕೆ ತೆರಳಿ ಕನ್ನಡಿಗರ ಪರಿಸ್ಥಿತಿ ಬಗ್ಗೆ ಅಧ್ಯಯನ ಮಾಡಿ ಬಂದಿದ್ದರು. ಈ ಸಂಬಂಧ ಮಂಗಳವಾರ ಮುಖ್ಯಮಂತ್ರಿಗಳನ್ನು ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾದ ಚಿಂಚನಸೂರ್ ಗೋವಾ ಕನ್ನಡಿಗರ ಸ್ಥಿತಿಗತಿ ಕುರಿತು ವರದಿ ನೀಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಭರವಸೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+