ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೋವಾದ ಸಂತ್ರಸ್ತ ಕನ್ನಡಿಗರಿಗೆ ಪುನರ್ ವಸತಿ ಕಲ್ಪಿಸಲು ಸಿದ್ಧ: ಸಿಎಂ

By Sachhidananda Acharya
|
Google Oneindia Kannada News

ಬೆಂಗಳೂರು, ಅಕ್ಟೋಬರ್ 4: ಗೋವಾ ಸರ್ಕಾರದ ದೌರ್ಜನ್ಯಕ್ಕೆ ತುತ್ತಾಗಿ ಮನೆ ಕಳೆದುಕೊಂಡ ಕನ್ನಡಿಗರಿಗೆ ಪುನರ್ ವಸತಿ ಕಲ್ಪಿಸಲು ಆರ್ಥಿಕ ನೆರವು ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

<span class=ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸುವಂತೆ ಗೋವಾ ಸಿಎಂಗೆ ಸಿದ್ದರಾಮಯ್ಯ ಪತ್ರ" title="ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸುವಂತೆ ಗೋವಾ ಸಿಎಂಗೆ ಸಿದ್ದರಾಮಯ್ಯ ಪತ್ರ" />ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸುವಂತೆ ಗೋವಾ ಸಿಎಂಗೆ ಸಿದ್ದರಾಮಯ್ಯ ಪತ್ರ

ಗೋವಾ ಸರ್ಕಾರ ಜಾಗ ಕೊಟ್ಟರೆ ಸಂತ್ರಸ್ತ ಕನ್ನಡಿಗರಿಗೆ ಮನೆ ಕಟ್ಟಿ ಕೊಡಲು ಆರ್ಥಿಕ ಸಹಕಾರ ನೀಡಲು ಸಿದ್ದವಿದ್ದು, ಈ ಕುರಿತು ಸಚಿವರ ನಿಯೋಗವನ್ನು ಗೋವಾ ರಾಜ್ಯಕ್ಕೆ ಕಳುಹಿಸಿ ಕೊಡುವುದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ.

Ready to rehabilitate Goa's Kannadiga victims : Siddaramaiah

ಇತ್ತೀಚೆಗೆ ಗೋವಾ ಸರ್ಕಾರ ಒತ್ತುವರಿ ತೆರವು ನೆಪದಲ್ಲಿ ಕನ್ನಡಿಗರ ಮನೆಗಳನ್ನು ನೆಲ ಸಮಗೊಳಿಸಿತ್ತು.

ಮನೆ ಕಳೆದುಕೊಂಡು ಗೋವಾ ಬೀದಿಗಳಲ್ಲಿ ಅಲೆದಾಡುತ್ತಿರುವ ಕನ್ನಡಿಗರುಮನೆ ಕಳೆದುಕೊಂಡು ಗೋವಾ ಬೀದಿಗಳಲ್ಲಿ ಅಲೆದಾಡುತ್ತಿರುವ ಕನ್ನಡಿಗರು

ಈ ಕುರಿತು ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಗಡಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಬಾಬುರಾವ್ ಚಿಂಚನಸೂರ್ ಗೋವಾ ರಾಜ್ಯಕ್ಕೆ ತೆರಳಿ ಕನ್ನಡಿಗರ ಪರಿಸ್ಥಿತಿ ಬಗ್ಗೆ ಅಧ್ಯಯನ ಮಾಡಿ ಬಂದಿದ್ದರು. ಈ ಸಂಬಂಧ ಮಂಗಳವಾರ ಮುಖ್ಯಮಂತ್ರಿಗಳನ್ನು ಅಧಿಕೃತ ನಿವಾಸ ಕಾವೇರಿಯಲ್ಲಿ ಭೇಟಿಯಾದ ಚಿಂಚನಸೂರ್ ಗೋವಾ ಕನ್ನಡಿಗರ ಸ್ಥಿತಿಗತಿ ಕುರಿತು ವರದಿ ನೀಡಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ಭರವಸೆ ನೀಡಿದ್ದಾರೆ.

English summary
Chief Minister Siddaramaiah has promised to provide financial assistance to rehabilitate Kannadigas who lost their homes in Goa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X