ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಪಿಸಿಸಿ ಸಾರಥ್ಯಕ್ಕೆ ಸಿದ್ಧ ಎಂದು ಘೋಷಿಸಿದ ಡಿ.ಕೆ.ಶಿವಕುಮಾರ್!

By Gururaj
|
Google Oneindia Kannada News

Recommended Video

ಡಿ ಕೆ ಶಿವಕುಮಾರ್ ಕೆಪಿಸಿಸಿ ಸಾರ್ಥ್ಯಕ್ಕೆ ಸಿದ್ದ ಎಂದು ಘೋಷಣೆ | Oneindia Kannada

ಬೆಂಗಳೂರು, ಜೂನ್ 04 : ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಎದ್ದಿರುವ ಪ್ರಶ್ನೆ ಡಿ.ಕೆ.ಶಿವಕುಮಾರ್ ಅವರಿಗೆ ಯಾವ ಹುದ್ದೆ?. ಕಾಂಗ್ರೆಸ್ ಪಕ್ಷದ ನಾಯಕರು ಈ ವಿಚಾರದಲ್ಲಿ ಇನ್ನೂ ಮೌನವಾಗಿದ್ದಾರೆ.

ಸೋಮವಾರ ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, 'ಕೆಪಿಸಿಸಿ ಸಾರಥ್ಯಕ್ಕೆ ನನ್ನನ್ನು ಆಯ್ಕೆ ಮಾಡಿದರೆ ನಿಭಾಯಿಸಲು ಸಿದ್ಧ. ನಾನು ಸಂಪುಟ ಸೇರುವ ಬಗ್ಗೆ ಪಕ್ಷ ತೀರ್ಮಾನ ಮಾಡಲಿದೆ' ಎಂದು ಹೇಳಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸ ಹೊಸ ಹೆಸರುಗಳು ಸೇರ್ಪಡೆ!ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸ ಹೊಸ ಹೆಸರುಗಳು ಸೇರ್ಪಡೆ!

'ಪಕ್ಷದ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ. ಹೈಕಮಾಂಡ್ ನನಗೆ ಪಕ್ಷ ಸಂಘಟನೆಯ ಜವಾಬ್ದಾರಿಯಾಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ ನಿಭಾಯಿಸಲು ಸಿದ್ಧ' ಎಂದರು.

DK Shivakumar

ಕರ್ನಾಟಕದಲ್ಲಿ ಕಾಂಗ್ರೆಸ್-ಜೆಡಿಎಸ್‌ ಸಮ್ಮಿಶ್ರ ಸರ್ಕಾರ ಅಸ್ತಿತ್ವಕ್ಕೆ ಬರಲು ಡಿ.ಕೆ.ಶಿವಕುಮಾರ್ ಅವರು ಪ್ರಮುಖ ಕಾರಣ. ಆದರೆ, ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗಲಿದೆಯೇ?, ಇಲ್ಲವೇ? ಎಂಬುದು ಇನ್ನೂ ಅಂತಿಮವಾಗಿಲ್ಲ.

ಮುಜರಾಯಿ ಕೊಡಿ, ಸುತ್ತಾಡಿಕೊಂಡಿರುತ್ತೇನೆ ಗುಡಿ : ಡಿಕೆಶಿ ಪ್ರಲಾಪಮುಜರಾಯಿ ಕೊಡಿ, ಸುತ್ತಾಡಿಕೊಂಡಿರುತ್ತೇನೆ ಗುಡಿ : ಡಿಕೆಶಿ ಪ್ರಲಾಪ

ಕೆಪಿಸಿಸಿ ಅಧ್ಯಕ್ಷರಾಗಿದ್ದ ಡಾ.ಜಿ.ಪರಮೇಶ್ವರ ಅವರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಅವರು ಉಪಮುಖ್ಯಮಂತ್ರಿಯಾಗಿದ್ದಾರೆ. ಆದ್ದರಿಂದ, ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಬಹುದು ಎಂಬ ಸುದ್ದಿ ಹಬ್ಬಿದೆ.

English summary
Former Minister D.K.Shivakumar said that, he is ready to work as Karnataka Pradesh Congress Committee (KPCC) president. On June 4, 2018 in Bengaluru He clarified that he will follow party directions.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X