Lok Sabha Election 2024: ಲೋಕಸಭಾ ಚುನಾವಣೆಯಲ್ಲಿ ʼಕೈʼ ಸೋಲಿನ ಕಾರಣ ಬಹಿರಂಗ: ಸತ್ಯ ಬಿಚ್ಚಿಟ್ಟ ಸಿದ್ದರಾಮಯ್ಯ
ಬೆಂಗಳೂರು, ಜುಲೈ 25: ಕರ್ನಾಟಕದಲ್ಲಿ ನಡೆದಿರುವ ಕಳೆದ ಲೋಕಸಭಾ ಚುನಾವಣೆಯ ಫಲಿತಾಂಶ ನಮಗೆ ಆಶ್ಚರ್ಯವನ್ನು ಉಂಟುಮಾಡಿದ್ದು ಮಾತ್ರವಲ್ಲ, ಹಲವಾರು ಬಗೆಯ ಅನುಮಾನಗಳನ್ನು ಕೂಡಾ ಹುಟ್ಟುಹಾಕಿತ್ತು. ಆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಚುನಾವಣಾ ಆಯೋಗವನ್ನು ದುರ್ಬಳಕೆ ಮಾಡಿಕೊಂಡು ನಡೆಸಿರುವ ಅಕ್ರಮವೇ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.
ಈ ಕುರಿತು ಟ್ವೀಟ್ ಮೂಲಕ ಉತ್ತರಿಸಿದ ಸಿದ್ದರಾಮಯ್ಯ ಅವರು, ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗ ನಡೆಸಿರುವ ಅಕ್ರಮಗಳ ದಾಸ್ತಾನನ್ನು ಒಂದೊಂದಾಗಿ ಬಯಲಿಗೆಳೆಯುತ್ತಿದ್ದು, ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆಯೂ ವಿವರಗಳನ್ನು ನೀಡಿದ್ದಾರೆ.

ಕರ್ನಾಟಕದಲ್ಲಿ ಚುನಾವಣಾ ಆಯೋಗ ಅಕ್ರಮಗಳನ್ನು ನಡೆಸಿರುವುದಕ್ಕೆ ನೂರಕ್ಕೆ ನೂರರಷ್ಟು ಸಾಕ್ಷ್ಯಗಳಿವೆ ಎಂದು ರಾಹುಲ್ ಗಾಂಧಿ ಹೇಳಿರುವುದನ್ನು ನಾನು ಸಂಪೂರ್ಣವಾಗಿ ಅನುಮೋದಿಸುತ್ತೇನೆ. ರಾಜ್ಯದ ಹಲವಾರು ಕ್ಷೇತ್ರಗಳಲ್ಲಿ ಇದ್ದಕ್ಕಿದ್ದಂತೆಯೇ ಹೊಸ ಮತದಾರರ ಸೇರ್ಪಡೆಯಾಗಿರುವುದು ಮತ್ತು ಹಳೆಯ ಮತದಾರರ ಹೆಸರುಗಳು ರದ್ದಾಗಿರುವುದರ ಬಗ್ಗೆ ನಮ್ಮ ಅನೇಕ ಕಾರ್ಯಕರ್ತರು ದೂರುಗಳನ್ನು ನೀಡಿದ್ದರು.
ನರೇಂದ್ರ ಮೋದಿ ಅವರ ಚುನಾವಣಾ ಗೆಲುವುಗಳಿಗೆ ಅವರ ಜನಪ್ರಿಯತೆಯಾಗಲಿ, ಬಿಜೆಪಿ ಸರ್ಕಾರದ ಸಾಧನೆಗಳಾಗಲಿ ಕಾರಣ ಅಲ್ಲ. ಅದು ಚುನಾವಣಾ ಆಯೋಗದ ಮೂಲಕ ನಡೆಸಿದ ''ಮತಗಳ್ಳತನ'' ಕಾರಣ ಎನ್ನುವ ಸತ್ಯ ಈಗ ಬಯಲಾಗುತ್ತಿದೆ. ಕರ್ನಾಟಕದಲ್ಲಿ ನಡೆದಿರುವ ಚುನಾವಣಾ ಅಕ್ರಮಗಳ ಬಗ್ಗೆ ಏನು ಕ್ರಮಕೈಗೊಳ್ಳಬೇಕೆಂಬ ಬಗ್ಗೆ ರಾಹುಲ್ ಗಾಂಧಿಯವರು ಮತ್ತು ಎಐಸಿಸಿ ಅಧ್ಯ್ಕಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ಸಮಾಲೋಚಿಸಿ, ನಾವು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications