Get Updates
Get notified of breaking news, exclusive insights, and must-see stories!

Government Employees: ಸರ್ಕಾರಿ ನೌಕರರ ವಿವಿಧ ಭತ್ಯೆ, ಸೌಲಭ್ಯಗಳ ಪರಿಷ್ಕರಣೆ: ಬಿಗ್‌ ಅಪ್‌ಡೇಟ್‌ ಕೊಟ್ಟ ಸಿದ್ದರಾಮಯ್ಯ

ಬೆಳಗಾವಿ, ಡಿಸೆಂಬರ್‌ 12: ವಿಶೇಷ ಚೇತನ ರಾಜ್ಯ ಸರ್ಕಾರಿ ನೌಕರರಿಗೆ ವಾಹನ ಖರೀದಿಗೆ ಪ್ರಸ್ತುತ ನೀಡಲಾಗುತ್ತಿರುವ ಸಹಾಯಧನದ ಪರಿಷ್ಕರಣೆಯನ್ನೂ ಒಳಗೊಂಡಂತೆ ಸರ್ಕಾರಿ ನೌಕರರಿಗೆ ಲಭ್ಯವಿರುವ ವಿವಿಧ ಭತ್ಯೆ ಮತ್ತು ಸೌಲಭ್ಯಗಳ ಪರಿಷ್ಕರಣೆ ಕುರಿತಂತೆ ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ಸಂಪುಟ-1ರ ವರದಿಯಲ್ಲಿನ ಶಿಫಾರಸ್ಸುಗಳು ಪ್ರಸ್ತುತ ಸರ್ಕಾರದ ಪರಿಶೀಲನೆಯಲ್ಲಿರುತ್ತದೆ ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹೇಳಿದರು.

ಪರಿಷತ್ತಿನಲ್ಲಿ ಗುರುವಾರದಂದು ಸದಸ್ಯರಾದ ಬಲ್ಕೀಸ್ ಬಾನು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 7ನೇ ರಾಜ್ಯ ವೇತನ ಆಯೋಗದ ಮೊದಲನೇ ವರದಿಯಲ್ಲಿನ ಶಿಫಾರಸ್ಸುಗಳ ಬೆಳಕಿನಲ್ಲಿ ರಾಜ್ಯ ಸರ್ಕಾರಿ ನೌಕರರ ವೇತನ, ವೇತನ ಸಂಬಂಧಿತ ಭತ್ಯೆ ಹಾಗೂ ಪಿಂಚಣಿಯನ್ನು ಪರಿಷ್ಕರಿಸಿ ದಿನಾಂಕ 01.08.2024ರಿಂದ ಅನ್ವಯವಾಗುವಂತೆ ಅನುಮೋದನೆಗೊಳಿಸಲಾಗಿರುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.

Recommendations of the report of Volume 1 of 7th Pay Commission will be reviewed

ಬಜೆಟ್‍ನಲ್ಲಿ ಹೊಸ ಎಸ್‍ಟಿ ಹಾಸ್ಟೆಲ್ ಘೋಷಣೆ: ಸಿದ್ದರಾಮಯ್ಯ

ಮುಂಬರಲಿರುವ ಬಜೆಟ್‍ನಲ್ಲಿ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಪಟ್ಟಣಕ್ಕೆ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಮಂಜೂರಾತಿಗೆ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಹೇಳಿದರು. ಪರಿಷತ್ತಿನಲ್ಲಿ ಗುರುವಾರದಂದು ಸದಸ್ಯರಾದ ಶಾಂತಾರಾಮ ಬುಡ್ನಸಿದ್ಧಿ ಅವರ ಚುಕ್ಕೆಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಮೆಟ್ರಿಕ್ ನಂತರದ ವಸತಿ ನಿಲಯಗಳನ್ನು ಯಾವುದೇ ಒಂದು ಸ್ಥಳದಲ್ಲಿ ಪ್ರಾರಂಭಿಸಲು ಸುತ್ತಮುತ್ತಲಿನ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಮತ್ತು ಅವರಿಂದ ವಸತಿ ನಿಲಯ ಪ್ರವೇಶಾತಿಗೆ ಬೇಡಿಕೆಯು ಪ್ರಮುಖ ಮಾನದಂಡಗಳಾಗಿರುತ್ತವೆ.

ಜಿಲ್ಲೆಗಳಿಂದ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ನಿಲಯಗಳ ಮಂಜೂರಾತಿ ಕುರಿತು ಸೂಕ್ತ ಪ್ರಸ್ತಾವನೆ ಸ್ವೀಕೃತವಾದಲ್ಲಿ ಮತ್ತು ಅತ್ಯಾವಶ್ಯಕ ಎಂದು ಕಂಡುಬಂದಲ್ಲಿ, ಆದ್ಯತೆಯ ಮೇರೆಗೆ ಪರಿಶೀಲಿಸಿ, ಅನುದಾನದ ಲಭ್ಯತೆಗೆ ಅನುಸಾರ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡಲು ಪರಿಶೀಲಿಸಲಾಗುವುದು. 2024-25 ಮತ್ತು 2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ ಅತ್ಯಾವಶ್ಯಕವಾಗಿ ಬೇಕಾಗಿರುವ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಒಟ್ಟು 34 ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗಿದ್ದು, ಈ ಪೈಕಿ ಉತ್ತರಕನ್ನಡ ಜಿಲ್ಲೆಯ ಜಿಲ್ಲಾ ಕೇಂದ್ರದಲ್ಲಿ 02 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳನ್ನು ಪ್ರಾರಂಭಿಸಲಾಗಿರುತ್ತದೆ ಎಂದು ಸಿದ್ದರಾಮಯ್ಯ ಅವರು ವಿವರಿಸಿದರು.

ಇನ್ನೂ ಮೇಲ್ಮನೆಯಲ್ಲಿ ಗುರುವಾರದಂದು ಪ್ರಶ್ನೋತ್ತರ ವೇಳೆ ಸದಸ್ಯರಾದ ಡಾ.ಧನಂಜಯ ಸರ್ಜಿ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ ಅವರು, ಇನ್ನೂ ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಲ್ಲಿ ಮಂಜೂರಾದ ಹುದ್ದೆಗಳಲ್ಲಿ ಶೇ.80ರವರೆಗೆ ಹುದ್ದೆಗಳ ನೇಮಕಾತಿಯನ್ನು ಆಡಳಿತ ಇಲಾಖೆಗಳ ಹಂತದಲ್ಲಿಯೇ ನಿಯಮಾನುಸಾರ ಭರ್ತಿ ಮಾಡಿಕೊಳ್ಳಲು ಇಲಾಖಾ ಕಾರ್ಯದರ್ಶಿಗಳಿಗೆ ತಿಳಿಸಲಾಗಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.

ಕರ್ನಾಟಕ ಸರ್ಕಾರದ (ಕಾರ್ಯಕಲಾಪಗಳ ನಿರ್ವಹಣೆ) ನಿಯಮಗಳು 1977ರ ನಿಯಮ 42ರಲ್ಲಿ ರಾಜ್ಯದ ಹಣಕಾಸಿನ ಮೇಲೆ ಪರಿಣಾಮ ಉಂಟು ಮಾಡುವಂತಹ ವಿಶೇಷವಾಗಿ ಯಾವುದೇ ಹುದ್ದೆಯನ್ನು ಸಾರ್ವಜನಿಕ ಹುದ್ದೆಗೆ ಸೇರಿಸುವ ಅಥವಾ ಸಾರ್ವಜನಿಕ ಸೇವೆಯಿಂದ ರದ್ದುಪಡಿಸುವ ಅಥವಾ ಯಾವುದೇ ಹುದ್ದೆಯ ಅವಧಿಯನ್ನು ಅಥವಾ ಉಪಲಬ್ದಗಳನ್ನು ವ್ಯತ್ಯಾಸ ಮಾಡುವ ಪ್ರಸ್ತಾವನೆಗಳಿಗೆ ಆರ್ಥಿಕ ಇಲಾಖೆಯ ಅನುಮತಿ ಪಡೆಯಲು ತಿಳಿಸಲಾಗಿರುತ್ತದೆ. ಆದ್ದರಿಂದ ಹುದ್ದೆಗಳ ಸೃಜನ ಅಥವಾ ಹುದ್ದೆಗಳ ಸಂಖ್ಯೆಯನ್ನು ಒಳಗೊಂಡ ಪ್ರಸ್ತಾವನೆ, ಯೋಜನೆಗಳ ಕುರಿತು ಆದೇಶಗಳನ್ನು ಹೊರಡಿಸುವ ಪೂರ್ವದಲ್ಲಿ ಆರ್ಥಿಕ ಇಲಾಖೆಯ ಸಹಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ.

ಆರ್ಥಿಕ ಇಲಾಖೆಯ ಪೂರ್ವಾನುಮತಿಯನ್ನು ಪಡೆಯದೇ ಆಡಳಿತ ಇಲಾಖೆಗಳು ಹುದ್ದೆಗಳನ್ನು ಭರ್ತಿ ಮಾಡಿಕೊಂಡಲ್ಲಿ ಈ ಹುದ್ದೆಗಳಿಗೆ ನೀಡಬೇಕಾದ ವೇತನಕ್ಕಾಗಿ ಆಯವ್ಯಯದಲ್ಲಿ ಸೂಕ್ತ ಅನುದಾನವನ್ನು ಕಲ್ಪಿಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಜೊತೆಗೆ ಆರ್ಥಿಕ ಇಲಾಖೆಯು ಅಗತ್ಯತೆಗೆ ಅನುಗುಣವಾಗಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಸಹಮತಿಸುತ್ತದೆ. ಜೊತೆಗೆ, ಕೆಲವು ಇಲಾಖೆಗಳ ಕಾರ್ಯವೈಖರಿ ಅಥವಾ ಕಾರ್ಯ ಪದ್ಧತಿಗಳಲ್ಲಿ ಬದಲಾವಣೆ ಉಂಟಾದಾಗ, ಸಿಬ್ಬಂದಿಯ ಅವಶ್ಯಕತೆ ಹಾಗೂ ಸಂಖ್ಯೆಯ ಬಗ್ಗೆ ಪರಾಮರ್ಶಿಸಬೇಕಾಗುತ್ತದೆ. ಈ ಕಾರ್ಯಗಳನ್ನು ಆರ್ಥಿಕ ಇಲಾಖೆ ನಿರ್ವಹಿಸುತ್ತದೆ.

ಒಂದು ವೇಳೆ ಆಡಳಿತ ಇಲಾಖೆಗಳು ಆರ್ಥಿಕ ಇಲಾಖೆಯ ಸಹಮತಿಯನ್ನು ಪಡೆಯದೇ ತಮ್ಮ ಹಂತದಲ್ಲಿಯೇ ಹುದ್ದೆಗಳನ್ನು ಭರ್ತಿ ಮಾಡಿಕೊಂಡಲ್ಲಿ ಆಯವ್ಯಯದಲ್ಲಿ ಸೂಕ್ತ ಅನುದಾನದ ಕೊರತೆ ಉಂಟಾಗಿ ಸಿಬ್ಬಂದಿಯ ವೇತನ ಪಾವತಿಗೆ ತೊಂದರೆಯಾಗುತ್ತದೆ. ಆರ್ಥಿಕ ಇಲಾಖೆಯ ಅನುಮತಿ ಪಡೆದು ಸೇವೆ ಪಡೆದ ಇಲಾಖೆಗಳ ಸಿಬ್ಬಂದಿಯ ವೇತನ ಪಾವತಿಸಲು ಆಯವ್ಯಯದಲ್ಲಿ ಅಗತ್ಯ ಅನುದಾನ ಕಲ್ಪಿಸಲಾಗುತ್ತದೆ. ಆದುದರಿಂದ ವೇತನ ಪಾವತಿಗೆ ತೊಂದರೆ ಹಾಗೂ ವಿಳಂಬ ಆಗುವುದಿಲ್ಲ.

ಆದಾಗ್ಯೂ ಮುಂಬಡ್ತಿ ಮೂಲಕ ಭರ್ತಿ ಮಾಡಿಕೊಳ್ಳಬೇಕಾದ ಹುದ್ದೆಗಳು, ಅನುಕಂಪದ ಆಧಾರದ ನೇಮಕಾತಿಗಳು, ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳಲ್ಲಿ ಮಂಜೂರಾದ ಹುದ್ದೆಗಳಲ್ಲಿ ಶೇ.80ರವರೆಗೆ ಹುದ್ದೆಗಳ ನೇಮಕಾತಿ, ಆರ್ಥಿಕ ಇಲಾಖೆಯಿಂದ ಅನುಮೋದಿಸಲ್ಪಟ್ಟ ಹುದ್ದೆಗಳಲ್ಲಿ ಬ್ಯಾಕ್‌ಲಾಗ್ ಹುದ್ದೆಗಳೆಂದು ಗುರುತಿಸಿದ ಹುದ್ದೆಗಳ ನೇಮಕಾತಿಯನ್ನು ಆಡಳಿತ ಇಲಾಖೆಗಳ ಹಂತದಲ್ಲಿಯೇ ನಿಯಮಾನುಸಾರ ಭರ್ತಿ ಮಾಡಿಕೊಳ್ಳಲು ಇಲಾಖಾ ಕಾರ್ಯದರ್ಶಿಗಳಿಗೆ ತಿಳಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+