PSI Recruitment: ಶೀಘ್ರವೇ ಖಾಲಿ ಇರುವ ಹುದ್ದೆಗಳ ನೇಮಕ: ಜಿ.ಪಮರೇಶ್ವರ
ಬೆಂಗಳೂರು, ಜುಲೈ 16: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ನೂರಾರು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (PSI) ಹುದ್ದೆಗಳನ್ನು ಆದಷ್ಟು ಶೀಘ್ರವೇ ನೇಮಕ ಮಾಡಿಕೊಳ್ಳಲಾಗುವುದು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ಭಾನುವಾರ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಪೊಲೀಸ್ ಇಲಾಖೆ ವ್ಯಾಪ್ತಿಯಲ್ಲಿ ಪಿಎಸ್‌ಐಗಳ ಅಭಾವವಿದೆ. ಉದ್ದೇಶಿತ 545 ಹುದ್ದೆಗಳ ಜೊತೆಗೆ 400 ಪಿಎಸ್‌ಐ ನೇಮಕ (PSI Recruitment) ಮಾಡಿಕೊಳ್ಳಲಾಗುವುದು. ಆದಷ್ಟು ಶೀಘ್ರವೇ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

545 ಪಿಪಿಎಸ್ ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಪ್ರಕರಣ ರಾಜ್ಯದಲ್ಲಿ ಸಂಚಲವನ್ನೇ ಸೃಷ್ಟಿಸಿತ್ತು. ಈ ಸಂಬಂಧ ಪೊಲೀಸ್ ಹಿರಿಯ ಅಧಿಕಾರಿಗಳು ಸೇರಿದಂತೆ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿತ್ತು. ಪ್ರಕರಣವು ನ್ಯಾಯಾಂಗ ತನಿಖೆ ವ್ಯಾಪ್ತಿಯಲ್ಲಿದ್ದು, ಸದ್ಯ ತನಿಖೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.
ಕೋರ್ಟ್‌ನಿಂದ ತಡೆಯಾಜ್ಞೆ
ಈ ಹಿಂದೆ ಇದ್ದ ಬಿಜೆಪಿ ಸರ್ಕಾರವು ಪಿಎಸ್‌ಐ ಹಗರಣ ಬೆಳಕಿಗೆ ಬಂದ ಬಳಿಕ ಪುನರ್ ಪರೀಕ್ಷೆ ಮಾಡಲು ನಿರ್ಧರಿಸಿತ್ತು. ಸರ್ಕಾರದ ಆದೇಶಕ್ಕೆ ನ್ಯಾಯಾಲಯದಿಂದ ತಡೆಯಾಜ್ಞೆ ನೀಡಿತ್ತು. ರಾಜ್ಯ ಹೈಕೋರ್ಟ್ ನಿಂದ ಸೂಕ್ತ ನಿರ್ದೇಶನ ಬರಬೇಕು ಎಂದು ಹೇಳಲಾಯಿತು. ನಂತರ ಪ್ರಕರಣದ ಕುರಿತ ಸರ್ಕಾರದ ಅಭಿಪ್ರಾಯವನ್ನು ಮುಚ್ಚಿದ ಲಕೋಟೆಯಲ್ಲಿ ಹೈಕೋರ್ಟ್‌ಗೆ ಸಲ್ಲಿಸಲಾಗಿದೆ.
ಸದ್ಯ ನಮ್ಮ ಸರ್ಕಾರ ಹೈಕೋರ್ಟ್ ಏನು ತೀರ್ಪು ನೀಡಲಿದೆ ಎಂಬ ನಿರೀಕ್ಷೆಯಲ್ಲಿದೆ. ಕೋರ್ಟ್ ತೀರ್ಪು ನೋಡುಕೊಂಡು ಮುಂದಿನ ಹೆಜ್ಜೆ ಇಡಲಾಗುವುದು ಎಂದು ಗೃಹ ಸಚಿವರು ತಿಳಿಸಿದರು.

ಇತ್ತೀನ ಯುವಾ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಕೇಸಿಗೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಿದ್ದಾರೆ. ನಾವು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ. ಇದನ್ನು ಜಿಲ್ಲಾ ಉಸ್ತುವಾರಿ ಸಚಿವರು ಮಾಡಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.
ಬಿಜೆಪಿಯಿಂದ ದೇಶದಲ್ಲಿ ಅಭಿವೃದ್ಧಿ ಆಗಿಲ್ಲ: ಪರಮೇಶ್ವರ
ರಾಜ್ಯದ ರಾಜಧಾನಿಯಲ್ಲಿ ಸೋಮವಾರ ಹೈ ಓಲ್ಟೋಜ್ ಕೇಂದ್ರ ವಿರೋಧ ಪಕ್ಷದ ನಾಯಕರ ಸಭೆ ನಡೆಯಲಿದೆ. ಈ ವಿಚಾರವಾಗಿ ಮಾತನಾಡಿದ ರಾಜ್ಯ ಗೃಹ ಸಚಿವರು, ಕಳೆದ 9 ವರ್ಷಗಳಿಂದ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಬಿಜೆಪಿ ಅವಧಿಯಲ್ಲಿ ದೇಶದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸಗಳು ಆಗಿಲ್ಲ.
ಕೇಂದ್ರದ ಏಕರೂಪ ನಾಗರಿಕ ಸಂಹಿತೆಯಿಂದ ಅಶಾಂತಿ ಮೂಡಿಸುತ್ತಿದೆ. ದೇಶದ ಎಲ್ಲಾ ರಾಜ್ಯಗಳಲ್ಲಿ ಭಯದ ವಾತಾವರಣ ಉಂಟಾಗಿದೆ. ಕೇಂದ್ರದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ವಿಪಕ್ಷಗಳು ಎಲ್ಲವು ಸೇರಿ ಪ್ರಯತ್ನ ಮಾಡಬೇಕಿದೆ. ಈ ಸಂಬಂಧ ನಾಳೆ ಸೋಮವಾರ ಸಭೆಯಲ್ಲಿ 20 ಪಕ್ಷಗಳ ಮುಖಂಡರು ಭಾಗವಹಿಸುತ್ತಾರೆ. ನಮ್ಮ ದೃಷ್ಟಿಯಲ್ಲಿ ಇದು ಒಳ್ಳೆಯ ಬೆಳವಣಿಗೆಯಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ ಎಂದು ಟಿವಿ ನೈನ್ ವರದಿ ಮಾಡಿದೆ.












Click it and Unblock the Notifications