ಶೀಘ್ರವೇ 15000 ಶಿಕ್ಷಕರ ನೇಮಕಾತಿ: ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ತುಮಕೂರು, ಫೆಬ್ರವರಿ 03: ರಾಜ್ಯದಲ್ಲಿ ಹೊಸದಾಗಿ 15 ಸಾವಿರ ಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶಿಕ್ಷಣ ಇಲಾಖೆಯಲ್ಲಿ ಖಾಲಿಯಿದ್ದ 13,500 ಶಾಲಾ ಶಿಕ್ಷಕರ ನೇಮಕಾತಿ ಮಾಡಲಾಗಿದೆಯಲ್ಲದೆ ಹೊಸದಾಗಿ 15000 ಶಾಲಾ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎನ್. ಮಧು ಬಂಗಾರಪ್ಪ ತಿಳಿಸಿದರು.

ಜಿಲ್ಲಾ ಪಂಚಯತಿ ಸಭಾಂಗಣದಲ್ಲಿ ಶನಿವಾರ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶಿಕ್ಷಕರ ಕೊರತೆ ನೀಗಿ ಸಲು ಹೊಸದಾಗಿ ಶಿಕ್ಷಕರ ನೇಮಕಾತಿಗೆ ಸರ್ಕಾರ ಮುಂದಾಗಿದೆ. ಖಾಲಿಯಿರುವ ಶಿಕ್ಷಕರ ಹುದ್ದೆಗಳನ್ನು ಹಂತ-ಹಂತವಾಗಿ ಭರ್ತಿ ಮಾಡಲು ಕ್ರಮಕೈಗೊಳ್ಳಲಾಗುತ್ತಿದೆ ಎಂದು ಸಚಿವ ಎನ್. ಮಧು ಬಂಗಾರಪ್ಪ ತಿಳಿಸಿದರು.

Recruitment Of 15000 Teachers Soon in Karnataka says Madhu Bangarappa

ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಮಧ್ಯಾಹ್ನದ ಬಿಸಿಯೂಟ, ಉಚಿತ ಸಮವಸ್ತ್ರ ಪುಸ್ತಕ, ಶೂ, ಮತ್ತಿತರ ಸೌಲಭ್ಯಗಳನ್ನು ನೀಡಲಾಗುತ್ತಿದೆಯಲ್ಲದೆ, ಶಾಲೆಗಳನ್ನು ಕೆಪಿಎನ್ ಶಾಲೆಗಳನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ಇದರಿಂದ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಆಸಕ್ತಿ ತೋರುತ್ತಿದ್ದಾರೆ ಪ್ರಸಕ್ತ ವರ್ಷದಲ್ಲಿ ಪದವಿಪೂರ್ವ ಕಾಲೇಜು ಗಳನ್ನೂ ಸಹ ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ಹೇಳಿದರು.

ಸರ್ಕಾರಿ ಶಾಲೆಗಳಲ್ಲಿ ಕ್ಷೀಣಿಸುತ್ತಿರುವ ಮಕ್ಕಳ ಸಂಖ್ಯೆ ಹೆಚ್ಚಿಸಲು ಹಲವಾರು ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಕ್ಕೆ ತರಲಾಗಿದೆ. ಶಾಲೆಗಳಲ್ಲಿದ್ದ ನ್ಯೂನ್ಯತೆಗಳನ್ನು ಸರಿಪಡಿಸಲಾಗಿದೆ. ಶಾಲೆಗಳಿಗೆ ಹೆಚ್ಚಿನ ಸಂಖ್ಯೆ ಯಲ್ಲಿ ವಿಜ್ಞಾನ ಲ್ಯಾಬ್‌ಗಳನ್ನು ಮಂಜೂರು ಮಾಡಲಾಗಿದೆ ಎಂದು ತಿಳಿಸಿದರು. ಸರ್ಕಾರಿ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು. ಇದರಿಂದ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚುತ್ತದೆ ಎಂದು ಸಚಿವ ಎನ್. ಮಧು ಬಂಗಾರಪ್ಪ ಅವರು ತಿಳಿಸಿದರು.

ಇನ್ನೂ ಪದವಿಪೂರ್ವ ಕಾಲೇಜು ಗಳಿಗೂ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕ್ರಮವಹಿಸಲಾಗುವುದು ಎಂದು ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದು, ಜಿಲ್ಲೆಯಲ್ಲಿ ಶತಮಾನ ಕಂಡ ಶಾಲೆಗಳನ್ನೂ ಸಹ ಅಭಿವೃದ್ಧಿಪಡಿಸಲಾಗುವುದು. ವಿಶೇಷ ಅನುದಾನದಡಿ ಶತಮಾನ ಕಂಡ ಶಾಲೆಗಳು ಮುಂದಿನ ಪೀಳಿಗೆಗೆ ಮಾದರಿಯಾಗುವಂತ ಉಳಿಸಿಕೊಂಡು ಅಭಿವೃದ್ಧಿಪಡಿಸಲಾಗುವುದು ಎಂದು ಮಧು ಬಂಗಾರಪ್ಪ ಅವರು ಹೇಳಿದರು.

ನಮ್ಮ ಶಾಲೆ ನಮ್ಮ ಜವಾಬ್ದಾರಿ ಕಾರ್ಯ ಕ್ರಮದಡಿ ತಾವು ಓದಿದ ಶಾಲೆಗಳ ಅಭಿವೃದ್ಧಿಗೆ ಹಲವಾರು ದಾನಿಗಳು ಆರ್ಥಿಕ ನೆರವು ನೀಡಲು ಮುಂದೆ ಬರುತ್ತಿದ್ದಾರೆ. ಶಾಲಾ ಪೀಠೋ ಪಕರಣ, ಲೇಖನ ಸಾಮಗ್ರಿ, ಸ್ಮಾರ್ಟ್ ತರಗತಿ ನಿರ್ಮಾಣಕ್ಕೆ ಸಹಾಯಹಸ್ತ ನೀಡುತ್ತಿದ್ದಾರೆ. ಅಲ್ಲದೆ ಈ ಕಾರ್ಯಕ್ರಮಕ್ಕೆ ಸಿಎಸ್‌ಆರ್ ನಿಧಿಯಿಂದ 1591 ಕೋಟಿ ರೂ.ಗಳನ್ನು ಸದ್ವಿನಿಯೋಗಿಸಲಾಗುತ್ತಿದೆ. ಜನಪ್ರತಿನಿಧಿಗಳು, ಅಧಿಕಾರಿಗಳೂ ಸಹ ತಾವು ಓದಿದ ಶಾಲೆಗಳ ಅಭಿವೃದ್ಧಿಗಾಗಿ ಕೊಡುಗೆಯನ್ನು ನೀಡಲು ಸಂಕಲ್ಪ ಮಾಡಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎನ್. ಮಧು ಬಂಗಾರಪ್ಪ ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+