Good News : ಶೀಘ್ರವೇ 15000 ಶಿಕ್ಷಕರ ನೇಮಕಾತಿ: ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್
ಬೆಂಗಳೂರು, ನವೆಂಬರ್ 21: ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಕರ್ನಾಟಕ ಸರ್ಕಾರವು ಭರ್ಜರಿ ಗುಡ್ ನ್ಯೂಸ್ ನೀಡಿದೆ. ಶೀಘ್ರವೇ 15 ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಮೂಲಕ ಮಾಹಿತಿ ನೀಡಿರುವ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯದ ಕಾಲೇಜುಗಳಲ್ಲಿ 800 ವಿಜ್ಞಾನ ಉಪನ್ಯಾಸಕರ ಹುದ್ದೆಗಳು ಹಾಗೂ 15000 ಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಶೀಘ್ರವೇ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಇನ್ನೂ ಶಿಕ್ಷಿಕರ ನೇಮಕಾತಿ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಪ್ಪಿಗೆ ನೀಡಿದ್ದು, 15,000 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಅಗತ್ಯವಿದ್ದು, ಶೀಘ್ರವೇ 800 ವಿಜ್ಞಾನ ಉಪನ್ಯಾಸಕರು ಹಾಗೂ 15 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ನಡೆಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ.
ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ ಮೇಲೆ ಅಸ್ತ್ರ: ಸ್ಟುಪಿಡ್ ಎಂದ ಬಿಜೆಪಿ
ಬುಧವಾರ ವಿಧಾನಸೌಧದಲ್ಲಿ ನಡೆದ ನೀಟ್ ಕೋಚಿಂಗ್ ತರಬೇತಿ ಉದ್ಘಾಟನಾ ಸಮಾರಂಭದಲ್ಲಿ ಓರ್ವ ವಿದ್ಯಾರ್ಥಿ ಶಿಕ್ಷಣ ಮಂತ್ರಿ ಮಧು ಬಂಗಾರಪ್ಪ ಅವರಿಗೆ "ಕನ್ನಡ ಬರಲ್ಲ ಎಂದು ಹೇಳಿದ್ದನು. ಇದರಿಂದ ಆಕ್ರೋಶಗೊಂಡ ಸಚಿವ ಮಧು ಬಂಗಾರಪ್ಪ ಆ ವಿದ್ಯಾರ್ಥಿ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಇಂಗ್ಲೀಷ್ ನಲ್ಲಿ ಆದೇಶಿಸಿದ್ದಾರೆ.
ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮಲ್ಲಿ ಸಚಿವರು ಬೇರೆ ಬೇರೆ ಜಿಲ್ಲೆಗಳ ವಿದ್ಯಾರ್ಥಿ ಹಾಗೂ ಶಿಕ್ಷಕರ ಅಭಿಪ್ರಾಯ ಸಂಗ್ರಹಕ್ಕೆ ಮುಂದಾಗಿದ್ದರು. ಈ ವೇಳೆ ಆನ್ಲೈನ್ನಲ್ಲಿ ಅಭಿಪ್ರಾಯ ಹಂಚಿಕೊಳ್ಳುವ ವೇಳೆ ವಿದ್ಯಾರ್ಥಿಯೊಬ್ಬ "ಶಿಕ್ಷಣ ಸಚಿವರಿಗೆ ಕನ್ನಡ ಬರಲ್ಲ" ಅಂತ ಹೇಳಿದ್ದಾನೆ. ಈ ವೇಳೆ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಅವರ ಮೇಲೆ ಕ್ಷಮ ಕೈಗೊಳ್ಳಿ ಎಂದು ಹೇಳಿದ್ದು, ಬಿಜೆಪಿ ಕರ್ನಾಟಕ ಸ್ಟುಪಿಡ್ ಎಂದು ಹೇಳಿದೆ.
ಇನ್ನೂ ವಿದ್ಯಾರ್ಥಿ ಹೇಳಿಕೆಯನ್ನು ಆರಂಭದಲ್ಲಿ ತಮಾಷೆಯಾಗಿ ತೆಗೆದುಕೊಂಡ ಶಿಕ್ಷಣ ಸಚಿವ ಮಧು ಬಂಗಾರಪ್ಪ ನಂತರ ವಿದ್ಯಾರ್ಥಿ ವಿರುದ್ಧ ಗರಂ ಆದರು. ಈಗ ನಾನೇನು ಉರ್ದುವಿನಲ್ಲಿ ಮಾತನಾಡುತ್ತಿದ್ದೇನಾ? ಸ್ಟುಪೀಡ್ ಎಂದು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಗರಂ ಆಗಿದ್ದಾರೆ. ಯಾರೂ ಹಾಗೆ ಹೇಳಿದ್ದು, ಮಾಹಿತಿ ತೆಗದುಕೊಳ್ಳಿ ಸುಮ್ಮನೆ ಬಿಡಬೇಡಿ ಅಂತಾ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಅವರಿಗೆ ಮಧು ಬಂಗಾರಪ್ಪ ಅವರ ಸೂಚನೆ ನೀಡಿದ್ದಾರೆ.
ಶಿಕ್ಷಣ ಸಚಿವರ ಈ ಆದೇಶಕ್ಕೆ ಕರ್ನಾಟಕ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದು, ಟ್ವೀಟ್ ಮಾಡಿ, ಇದ್ದದ್ದನ್ನು ಇದ್ದ ಹಾಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ದರಂತೆ. ಇದು ಅಕ್ಷರಶಃ ನಮ್ಮ ಅವಿದ್ಯಾವಂತ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಅನ್ವಯಿಸುತ್ತದೆ ಎಂದು ಹೇಳಿದರು.












Click it and Unblock the Notifications