Teacher Recruitment: 5,500 ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆ ಭರ್ತಿ

ಕಲಬುರಗಿ, ಏಪ್ರಿಲ್15:‌ ರಾಜ್ಯದಲ್ಲಿ ಶೀಘ್ರವೇ 5,500 ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದಾಗಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 5,500 ಪ್ರಾಥಮಿಕ ಶಾಲೆ ಶಿಕ್ಷಕರ ಭರ್ತಿ ಮಾಡಲಾಗುತ್ತಿದೆ.‌ ಇದಾದ ನಂತರ ಮತ್ತೆ 5 ಸಾವಿರ ಶಿಕ್ಷಕರನ್ನು ಭರ್ತಿ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

ಕಲಬುರಗಿ ನಗರದ ಕೆ.ಸಿ.ಟಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ಕರೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ 5,500 ಪ್ರಾಥಮಿಕ ಶಾಲೆ ಶಿಕ್ಷಕರ ಭರ್ತಿ ಮಾಡಲಾಗುತ್ತಿದೆ.‌ ಇದಾದ ನಂತರ ಮತ್ತೆ 5 ಸಾವಿರ ಶಿಕ್ಷಕರನ್ನು ಭರ್ತಿ ಮಾಡಲಾಗುವುದು. ಇನ್ನು 371 ಮೀಸಲಾತಿಯಂತೆ ಸ್ಥಳೀಯರಿಂದ ಹುದ್ದೆ ಭರ್ತಿ ಮಾಡಲು ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯ 371ಜೆ ಪರಿಣಾಮಕಾರಿ ಅನುಷ್ಠಾನ‌ ಸಚಿವ‌ ಸಂಪುಟ ಉಪ ಸಮಿತಿ ಸಭೆಯಲ್ಲಿ ಲೋಕಲ್ ಕೇಡರ್ ಹುದ್ದೆಗಳನ್ನು ಹಣಕಾಸು ಇಲಾಖೆ ಅನುಮತಿ ಇಲ್ಲದೆ ನೇಮಕ ಮಾಡಿಕೊಳ್ಳಲು ಕಾಯ್ದೆಯಲ್ಲಿಯೇ ಅವಕಾಶ ನೀಡಿದ್ದು, ಅದರಂತೆ ಇಲಾಖೆಗಳು ನೇಮಕಾತಿ ಚುರುಕುಗೊಳಿಸುವಂತೆ ನಿರ್ದೇಶನ ನೀಡಲಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿಯೇ ಕಲ್ಯಾಣ ಕರ್ನಾಟಕ ಭಾಗದ ಶೇ.90ರಷ್ಟು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಭರವಸೆ ನೀಡಿದರು.

Recruitment Of 5 500 Teachers Soon in Karnataka says Minister Sharan Prakash Patil

ಇನ್ನೂ ಪ್ರೌಢಶಾಲಾ ಸಹಾಯಕ ಶಿಕ್ಷಕರ ಬಡ್ತಿ ನಿರೀಕ್ಷೆಯಲ್ಲಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. 2016ಕ್ಕೂ ಪೂರ್ವದಲ್ಲಿ ನೇಮಕಗೊಂಡ ಪ್ರಾಥಮಿಕ ಶಾಲಾ ಶಿಕ್ಷಕರನ್ನು 2017ರ ವೃಂದ ಮತ್ತು ನೇಮಕಾತಿ ನಿಯಮಗಳಂತೆ 1ರಿಂದ 5 ನೇ ವರ್ಗಕ್ಕೆ ಸೀಮಿತಗೊಳಿಸಿ ಪೂರ್ವಾನ್ವಯಗೊಳಿಸುವುದು ಸರಿಯಾದ ಕ್ರಮವಲ್ಲ ಎಂದು ಸರ್ಕಾರದ ಕಾನೂನು ಇಲಾಖೆ ಅಭಿಪ್ರಾಯಪಟ್ಟಿರುವುದಾಗಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘವು ತಿಳಿಸಿದೆ.

ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಬೇಸಿಗೆ ಶಿಬಿರ: ಪ್ರಿಯಾಂಕ್ ಖರ್ಗೆ

ಗ್ರಾಮ ಪಂಚಾಯತಿ ಅರಿವು ಕೇಂದ್ರದ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಗಳನ್ನು ನಡೆಸಲು ಗ್ರಾಮಪಂಚಾಯತಿಗಳನ್ನು ಸಜ್ಜುಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿಬ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಶಾಲೆಗಳಿಗೆ ಬೇಸಿಗೆ ರಜೆ ಆರಂಭಗೊಂಡಿದ್ದು, ಬೇಸಿಗೆ ರಜೆ ಅಂತ್ಯಗೊಳ್ಳುವವರೆಗೆ ಏಪ್ರಿಲ್ 2025- ಮೇ 2025ರ ಮಾಹೆಯಲ್ಲಿ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ಹೇಳಿರುವ ಸಚಿವರು ಗ್ರಾಮ ಪಂಚಾಯತಿ ಅರಿವು ಕೇಂದ್ರದಲ್ಲಿ ಹಲವು ಮಕ್ಕಳ ಸ್ನೇಹಿ ಚಟುವಟಿಕೆಗಳನ್ನು ಈಗಾಗಲೇ ಹಮ್ಮಿಕೊಳ್ಳಲಾಗಿದೆ.

Take a Poll

ಗ್ರಾಮ ಪಂಚಾಯತಿ ನೇತೃತ್ವದಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಅರಿವು ಕೇಂದ್ರಗಳ ಮೂಲಕ ಶಾಲೆಗಳ ಬೇಸಿಗೆ ರಜೆಯ ಸಮಯದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ, ಶಿಬಿರದ ನಿರ್ವಹಣೆಯನ್ನು ಅರಿವು ಕೇಂದ್ರದ ಮೇಲ್ವಿಚಾರಕರು, ಗ್ರಾಮ ಪಂಚಾಯತಿ ಪುನರ್ವಸತಿ ಕಾರ್ಯಕರ್ತರು ಮತ್ತು ಗುರುತಿಸಿದ ಸ್ವಯಂ ಸೇವಕರೊಂದಿಗೆ ಪರಿಣಾಮಕಾರಿಯಾಗಿ ಆಯೋಜಿಸಲು ಕ್ರಮವಹಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಹದಿನೈದು ದಿನಗಳ ಕಾಲ ಶಿಬಿರವನ್ನು ಆಯೋಜಿಸುವ ಮೂಲಕ ಓದುವ, ಬರೆಯುವ, ಕಲಾತ್ಮಕ ಚಟುವಟಿಕೆಗಳಿಗೆ ಮತ್ತು ಆಟಗಳಿಗೆ ಒತ್ತು ನೀಡಲಾಗುವುದು, ಗ್ರಾಮೀಣ ಪ್ರದೇಶದಲ್ಲಿರುವ ಮಕ್ಕಳು ತಮ್ಮ ಬೇಸಿಗೆ ರಜೆಯನ್ನು ಮನರಂಜನೀಯವಾಗಿ ಹಾಗೂ ಪರಿಣಾಮಕಾರಿಯಾಗಿ ಬಳಸಿಕೊಳ್ಳಲು ಬೇಸಿಗೆ ಶಿಬಿರವನ್ನು ಆಯೋಜಿಸಲಾಗುತ್ತಿದೆ, ಓದುವ, ಬರೆಯುವ, ಅಂಕಿ ಸಂಖ್ಯೆ, ವಿಜ್ಞಾನ ವಿಷಯಗಳು, ನಾಯಕತ್ವ ಮತ್ತು ಸಂವಹನ ಕೌಶಲ್ಯವನ್ನು ಅಭಿವೃದ್ಧಿಪಡಿಸುವ ಉದ್ದೇಶವನ್ನು ಹೊಂದಲಾಗಿದೆ, ಪರಿಸರ ಮತ್ತು ಸಾಮಾಜಿಕ ಕಾಳಜಿ ಬೆಳೆಸುವುದು, ಸ್ಥಳೀಯ ಸಂಸ್ಕೃತಿ, ಜೀವನ ಶೈಲಿ, ಇತಿಹಾಸ ಅಂಶಗಳನ್ನು ತಿಳಿಯುವಂತೆ ಅರಿವು ಮೂಡಿಸುವುದು ಹಾಗೂ ಮಕ್ಕಳಲ್ಲಿರುವ ಸೃಜನಾತ್ಮಕ ಸಾಮರ್ಥ್ಯವನ್ನು ಅಭಿವೃದ್ಧಿಪಡಿಸುವುದು ಬೇಸಿಗೆ ಶಿಬಿರದ ಆಶಯವಾಗಿರುತ್ತದೆ ಎಂಬ ವಿವರಗಳನ್ನು ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+