ಕೊಂಕಣ ರೈಲ್ವೆಯಲ್ಲಿ ಕೆಲಸ ಖಾಲಿ ಇದೆ, ಅರ್ಜಿ ಹಾಕಿ

ಬೆಂಗಳೂರು, ಜ.29 : ಅಸಿಸ್ಟೆಂಟ್‌ ಸ್ಟೇಷನ್‌ ಮಾಸ್ಟರ್‌ ಹುದ್ದೆಗಾಗಿ ಕೊಂಕಣ ರೈಲ್ವೆ ಅರ್ಜಿಗಳನ್ನು ಆಹ್ವಾನಿಸಿದೆ. ರೈಲ್ವೆ ಯೋಜನೆಗಾಗಿ ಭೂಮಿ ಕಳೆದುಕೊಂಡವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆಬ್ರವರಿ 5.

ರೈಲ್ವೆ ಯೋಜನೆಗಾಗಿ ಭೂಮಿ ಕಳೆದುಕೊಂಡವರು, ಭೂಮಿ ಕಳೆದುಕೊಂಡವರ ಮಕ್ಕಳು, ಅವಿವಾಹಿತ ಪುತ್ರಿಯರು, ಮೊಮ್ಮಕ್ಕಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಗೋವಾ, ಕಾರವಾರ, ಉಡುಪಿ, ದಕ್ಷಿಣ ಕನ್ನಡ ಕೊಂಕಣ ರೈಲ್ವೆ ವ್ಯಾಪ್ತಿಗೆ ಒಳಪಡುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

Konkan Railway

ಒಟ್ಟು 45 ಅಸಿಸ್ಟೆಂಟ್‌ ಸ್ಟೇಷನ್‌ ಮಾಸ್ಟರ್‌ ಹುದ್ದೆಗಳು ಖಾಲಿ ಇವೆ. ಕೊಂಕಣ ರೈಲ್ವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕುಟುಂಬದದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಂತಿಲ್ಲ. ಅರ್ಜಿಯನ್ನು ಫೆಬ್ರವರಿ 5ರೊಳಗೆ ಸಲ್ಲಿಸಬೇಕಾಗಿದೆ. [ನೇಮಕಾತಿ ಆದೇಶ ಇಲ್ಲಿದೆ]

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಂತಿಲ್ಲ. [ಕೊಂಕಣ ರೈಲ್ವೆ ಮಾಹಿತಿ ಪಡೆಯಲು ಹೊಸ ಸಹಾಯವಾಣಿ]

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ತುಂಬಿರಬೇಕು. ಗರಿಷ್ಠ ವಯೋಮಿತಿ 35 ವರ್ಷ. ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಿನಾಯಿತಿ ಇದೆ.

ಅಭ್ಯರ್ಥಿಗಳು ಅರ್ಜಿಯನ್ನು ಕೊಂಕಂಣ ರೈಲ್ವೆ ವೆಬ್‌ಸೈಟ್‌ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು ಅಥವ ಕಾರವಾರ, ರತ್ನಗಿರಿ, ಬೆಲಾಪುರದ ಕೊಂಕಣ ರೈಲ್ವೆ ಕಚೇರಿಯಲ್ಲಿ ಪಡೆದುಕೊಳ್ಳಬಹುದಾಗಿದೆ. ಅರ್ಜಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿಲ್ಲ.

ಭರ್ತಿ ಮಾಡಿದ ಅರ್ಜಿಯನ್ನು Asstt. Chief Personnel Officer (Recruitment), Konkan Railway Corporation Ltd, Belapur Bhavan, Sec-11, CBD Belapur, Navi Mumbai-400614 ವಿಳಾಸಕ್ಕೆ ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು. ಅಂಚೆಯಲ್ಲಿ ಅರ್ಜಿ ತಲುಪುವುದು ತಡವಾದಲ್ಲಿ ಅದನ್ನು ಸ್ವೀಕರಿಸಲಾಗುವುದಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+