ಇಂಧನ ಇಲಾಖೆಯಲ್ಲಿ 15 ಸಾವಿರ ಹುದ್ದೆಗಳ ಭರ್ತಿ

ಬೆಂಗಳೂರು, ಜೂ. 08 : ರಾಜ್ಯದ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ 15 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಹೇಳಿದರು. ಕಿರಿಯ ಲೈನ್‌ ಮ್ಯಾನ್ ಹುದ್ದೆಗಳ ನೇಮಕಾತಿಗೆ ಜೂನ್ 10 ರಂದು ಅಧಿಸೂಚನೆ ಹೊರಡಿಸಲಾಗುತ್ತದೆ ಎಂದು ಅವರು ತಿಳಿಸಿದರು.

ವಿಧಾನಸೌಧದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಸಚಿವರು, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಸೇರಿದಂತೆ ವಿವಿಧ ವಿದ್ಯುತ್ ಸರಬರಾಜು ಕಂಪನಿಗಳಲ್ಲಿ ಖಾಲಿ ಇರುವ ಇಂಜಿನಿಯರ್, ಲೈನ್‌ ಮ್ಯಾನ್, ಅಕೌಂಟೆಂಟ್ ಒಳಗೊಂಡಂತೆ 15 ಸಾವಿರಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ ಎಂದರು.

dk shivakumar

14, 998 ಜೂನಿಯರ್ ಲೈನ್‌ ಮ್ಯಾನ್ ಹುದ್ದೆಗಳು ಹಾಗೂ 900 ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಮೊದಲ ಹಂತದಲ್ಲಿ 8,080 ಹುದ್ದೆಗಳನ್ನು ಭರ್ತಿ ಮಾಡಿಕೊಂಡು, ಎರಡನೇ ಹಂತದಲ್ಲಿ 4,737 ಹಾಗೂ ಮೂರನೇ ಹಂತದಲ್ಲಿ 2,131 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು ಎಂದು ಸಚಿವರು ವಿವರಣೆ ನೀಡಿದರು. [1,129 ಹುದ್ದೆಗೆ ಅರ್ಜಿ ಆಹ್ವಾನಿಸಿದ ಯುಪಿಎಸ್ ಸಿ]

8,080 ಕಿರಿಯ ಲೈನ್ ಮ್ಯಾನ್ ಹುದ್ದೆಗಳ ಭರ್ತಿಗೆ ಜೂನ್ 10ರಂದು ಅಧಿಸೂಚನೆ ಹೊರಡಿಸಲಾಗುತ್ತದೆ. ಇದರಲ್ಲಿ ಮಹಿಳಾ ಮೀಸಲಾತಿ ಇರುವುದಿಲ್ಲ ಎಂದು ಸಚಿವರು ಸ್ಪಷ್ಟನೆ ನೀಡಿದರು. ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾದವರು ಮತ್ತು ವಿದ್ಯುತ್ ಕಂಬ ಏರುವ ಶಕ್ತಿವುಳ್ಳವರು ಅರ್ಜಿ ಸಲ್ಲಿಸಬಹುದಾಗಿದೆ ಎಂದು ವಿವರಣೆ ನೀಡಿದರು.

ವೇತನ ಶ್ರೇಣಿ : ಆಯ್ಕೆಯಾದವರಿಗೆ ಮೊದಲ ವರ್ಷ 10 ಸಾವಿರ, ಎರಡನೇ ವರ್ಷ 11 ಸಾವಿರ, 3ನೇ ವರ್ಷ 12 ಸಾವಿರ ರೂ. ವೇತನವನ್ನು ನೀಡಲಾಗುತ್ತದೆ. ಇದನ್ನು ತರಬೇತಿ ಅವಧಿ ಎಂದು ಪರಿಗಣಿಸಲಾಗುತ್ತದೆ ಎಂದು ಸಚಿವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+