ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಮುಂಗಾರು ಚುರುಕು: 10 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ

|
Google Oneindia Kannada News

ಬೆಂಗಳೂರು, ಜೂನ್ 19: ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಎರಡು ದಿನ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜೂನ್ 19 ರಂದು ಧಾರಾಕಾರ ಮಳೆಯಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.

 ಜೂನ್ 21ರವರೆಗೂ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯ ಮುನ್ಸೂಚನೆ ಜೂನ್ 21ರವರೆಗೂ ಕರಾವಳಿ ಜಿಲ್ಲೆಗಳಲ್ಲಿ ಅಧಿಕ ಮಳೆಯ ಮುನ್ಸೂಚನೆ

ಕರಾವಳಿಯಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 4.8 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಎಚ್ಚರಿಕೆ ನೀಡಿದೆ.

ಎಲ್ಲೆಲ್ಲಿ ಮಳೆ

ಎಲ್ಲೆಲ್ಲಿ ಮಳೆ

ಭಾಗಮಂಡಲ, ಕೊಟ್ಟಿಗೆಹಾರ, ಆಗುಂಬೆ, ತಾಳಗುಪ್ಪ, ಹೊನ್ನಾವರ, ಸಿದ್ದಾಪುರ, ಮಡಿಕೇರಿ, ಮಂಕಿ, ಕುಂದಾಪುರ, ಶೃಂಗೇರಿ, ಕೊಲ್ಲೂರು, ಸೊರಬ, ಮಾಣಿ, ಯಲ್ಲಾಪುರ, ಸಾಗರ, ಸುಬ್ರಹ್ಮಣ್ಯ, ಜಯಪುರ, ಹುಂಚದಕಟ್ಟೆ, ಮಾಣಿ, ಕದ್ರ, ಸಕಲೇಶಪುರ, ಮೂಡುಬಿದಿರೆ, ಹಿರೆಕೆರೂರು, ಹೊನ್ನಾಳಿ, ಸೋಮವಾರಪೇಟೆ, ಹಳಿಯಾಳ, ಅಥಣಿ, ಶಿರಸಿ, ಸಿದ್ದಾಪುರ, ಕಾಗಿನೆಲೆ, ಕುಷ್ಟಗಿ, ದಾವಣಗೆರೆ, ಅಜ್ಜಂಪುರ, ಚಿಕ್ಕಮಗಳೂರಿನಲ್ಲಿ ಮಳೆಯಾಗಿದೆ.

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರು ಹವಾಮಾನ ಹೇಗಿದೆ?

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಅಲ್ಲಲ್ಲಿ ಮಳೆಯಾಗಿದೆ, 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್

ಶಿವಮೊಗ್ಗ, ಚಿಕ್ಕಮಗಳೂರಿಗೆ ಆರೆಂಜ್ ಅಲರ್ಟ್

ಒಳನಾಡಿನ ಜಿಲ್ಲೆಗಳಲ್ಲೂ ಮುಂದಿನ ಎರಡು ದಿನ ವ್ಯಾಪಕ ಮಳೆಯಾಗಲಿದ್ದು, ಈ ಭಾಗದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲಿ ಆರೆಂಜ್ ಅಲರ್ಟ್ ಹಾಗೂ ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು ಕೆಲವೆಡೆ ಸಾಧಾರಣ ಮಳೆಯಾಗಬಹುದು.

ವಾಯುಭಾರ ಕುಸಿತ

ವಾಯುಭಾರ ಕುಸಿತ

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಉಡುಪಿ, ಒಡಿಶಾ, ಕೇರಳದ ಕೋಳಿಕೋಡ್ ವಯನಾಡಿನಲ್ಲಿ ಇಂದು ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Recommended Video

Karnatakaದ ಹೆಮ್ಮೆ,ಟೀಮ್ ಇಂಡಿಯಾದ ಲೆಜೆಂಡ್ Anil Kumble ಕ್ರಿಕೆಟ್ ಜರ್ನಿ | Oneindia Kannada

English summary
With the southwest monsoon turning vigorous, the weather office on Friday issued a red alert, warning of extremely heavy rainfall in three coastal districts of Karnataka over the next 48 hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X