ಭಾರಿ ಮಳೆ ಮುನ್ಸೂಚನೆ: ಕರ್ನಾಟಕದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್
ಬೆಂಗಳೂರು, ಆಗಸ್ಟ್ 15: ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆಯಲ್ಲಿ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಚಿಸಲಾಗಿದೆ.
24 ತಾಸಲ್ಲಿ 205 ಮಿ.ಮೀಗೂ ಹೆಚ್ಚು ಮಳೆ ಸಾಧ್ಯತೆ ಇದೆ ಎನ್ನಲಾಗಿದೆ. ಕರಾವಳಿ, ಮಲೆನಾಡಲ್ಲಿ ಹೆಚ್ಚು ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಮಹಾರಾಷ್ಟ್ರ ಮತ್ತು ಛತ್ತೀಸ್ ಗಢದಲ್ಲಿ ವಾಯುಭಾರ ಕುಸಿತದಿಂದ ಮುಂಗಾರು ಮಾರುತಗಳು ಮತ್ತಷ್ಟು ಚುರುಕುಗೊಂಡ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ ಒಟ್ಟು ಆರು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮೈಸೂರು, ಹಾಸನ, ಬೆಳಗಾವಿಯಲ್ಲಿ ಒಂದು ದಿನದಲ್ಲಿ 115 ಮಿ.ಮೀ ನಿಂದ 205 ಮಿ.ಮೀ ವರೆಗೆ ಭಾರಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಆಗಸ್ಟ್ 16ರಿಂದ ಆ.18ರವರೆಗೆ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದೆ.
ಬುಧವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ಉತ್ತರ ಕನ್ನಡದ ಹೊನ್ನಾವರ ಹಾಗೂ ಕುಮಟಾದಲ್ಲಿ 10 ಸೆಂ,ಮೀ ಮಳೆಯಾಗಿದೆ. ಉಡುಪಿ, ಕುಂದಾಪುರದಲ್ಲಿ ತಲಾ 9 ಸೆಂ.ಮೀ, ಮಂಗಳೂರು, ದಕ್ಷಿಣ ಕನ್ನಡ, ಪಣಂಬೂರಿನಲ್ಲಿ ತಲಾ 7 ಸೆಂ.ಮೀ ಮಳೆಯಾಗಿದೆ.












Click it and Unblock the Notifications