ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ, ರೆಡ್ ಅಲರ್ಟ್ ಘೋಷಣೆ
ಬೆಂಗಳೂರು, ಜುಲೈ 17: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಜುಲೈ 21ರವರೆಗೂ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಸಮುದ್ರ ರಾಜನ ಅಬ್ಬರವೂ ಹೆಚ್ಚಾಗಿದ್ದು ಕಡಲ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿದೆ. ಮುಂದಿನ ನಾಲ್ಕು ದಿನ ಕೂಡಾ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಗಾಳಿ-ಮಳೆಯಾಗಿದೆ. ಜಿಲ್ಲೆಯ ಜನ ಜೀವನ ಅಸ್ತವ್ಯಸ್ತವಾಗಿದೆ.

ಎಲ್ಲೆಲ್ಲಿ ಅತಿ ಹೆಚ್ಚು ಮಳೆಯಾಗಿದೆ?
ಮುಲ್ಕಿ, ಪಣಂಬೂರು, ಮಾಣಿ, ಮಂಗಳೂರು, ಪುತ್ತೂರು, ಕೋಟಾ, ಕೊಲ್ಲೂರು, ಬೆಳ್ತಂಗಡಿ, ಉಪ್ಪಿನಂಗಡಿ, ಸುಳ್ಯ, ಕಾರ್ಕಳ, ಹೊಸನಗರ, ಧರ್ಮಸ್ಥಳ, ಭಾಗಮಂಡಲ, ಮಂಕಿ, ಸುಬ್ರಹ್ಮಣ್ಯ, ಕಾರವಾರ, ಗೋಕರ್ಣ, ಶಿರಾಲಿ, ಹೊನ್ನಾವರ, ಆಗುಂಬೆ, ಜಯಪುರ, ಮೂರ್ನಾಡಿನಲ್ಲಿ ಭಾರಿ ಮಳೆ ಸುರಿದಿದೆ.

ಎಲ್ಲೆಲ್ಲಿ ಸಾಧಾರಣ ಮಳೆ
ಕುಂದಾಪುರ, ಕದ್ರ, ಸಕಲೇಶಪುರ, ಶೃಂಗೇರಿ, ಕಳಸ, ಸಿದ್ದಾಪುರ, ಚಿಂಚೋಳಿ, ಶಿಕಾರಿಪುರ, ವಿರಾಜಪೇಟೆ, ಚಿಕ್ಕಮಗಳೂರು, ಲಿಂಗನಮಕ್ಕಿ, ಮಂಚಿಕೆರೆ, ತಾಳಗುಪ್ಪ, ಕಮಲಾಪುರ, ಸೇಡಂ, ಶಿರಾಳಕೊಪ್ಪ, ತ್ಯಾಗರ್ತಿ, ಸಾಗರ, ಹಾಸನ, ಭೀಮರಾಯನಗುಡಿ, ಕಲಬುರಗಿ, ಸೊರಬ, ಎಚ್‌ಡಿ ಕೋಟೆ, ಬಂಡೀಪುರ, ಮೈಸೂರು, ಶ್ರವಣ ಬೆಳಗೊಳದಲ್ಲಿ ಮಳೆಯಾಗಿದೆ.

ಅತಿ ಹೆಚ್ಚು ಮಳೆಯಾಗಲಿರುವ ಜಿಲ್ಲೆಗಳು
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಜುಲೈ 21ರವರೆಗೂ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಸಮುದ್ರ ರಾಜನ ಅಬ್ಬರವೂ ಹೆಚ್ಚಾಗಿದ್ದು ಕಡಲ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿದೆ. ಮುಂದಿನ ನಾಲ್ಕು ದಿನ ಕೂಡಾ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
Recommended Video

ಬೆಂಗಳೂರು ವಾತಾವರಣ ಹೇಗಿದೆ?
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ, ಕಳೆದ ನಾಲ್ಕೈದು ದಿನಗಳಿಂದ ಶೀತ ವಾತಾವರಣವಿದೆ. 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಎಚ್‌ಎಎಲ್‌ನಲ್ಲಿ 25.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 24.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 25.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications