ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮಳೆಯ ರೆಡ್‌ ಅಲರ್ಟ್‌

ಬೆಂಗಳೂರು, ಸೆಪ್ಟೆಂಬರ್ 12: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್‌ ಅಲರ್ಟ್ ಘೋಷಿಸಿದೆ.

ದಕ್ಷಿಣಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹೆಚ್ಚು ಮಳೆಯಾಗಲಿದೆ. ರಾಜ್ಯದೆಲ್ಲೆಡೆ ಮೂರ್ನಾಲ್ಕು ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಿದ್ದು, ಇನ್ನೂ ಎರಡು ದಿನ ಮಳೆ ಮುಂದುವರೆಯುವ ಸಾಧ್ಯತೆಯಿದೆ.

ಎರಡು -ಮೂರು ದಿನಗಳಿಂದ ರಾಜ್ಯದ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಹಾಗೂ ಮತ್ತೆ ಕೆಲವೆಡೆ ಭಾರೀ ಮಳೆಯಾದ ವರದಿಯಾಗಿದೆ. ಬಂಗಾಳ ಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಳೆಗೆ ಪೂರಕವಾದ ಸನ್ನಿವೇಶ ಸೃಷ್ಟಿಯಾಗಿದ್ದು, ಇದೇ ರೀತಿ ಮಳೆ ಮುಂದುವರೆಯಲಿದೆ.

Rain

ಇಂದು ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡದಲ್ಲಿ ಬೆಳಗ್ಗೆಯಿಂದಲೇ ಮಳೆ ಶುರುವಾಗಿದೆ. ಕರಾವಳಿಯಲ್ಲಿ ಇಂದು ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡದಲ್ಲಿ ಮಳೆಯ ಪ್ರಮಾಣ ಗಣನೀಯವಾಗಿ ಹೆಚ್ಚಾಗಲಿದೆ.

ಮುಂದಿನ ಎರಡು ದಿನಗಳಲ್ಲಿ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗುವ ಸಾಧ್ಯತೆಗಳಿವೆ. ಕರ್ನಾಟಕದಲ್ಲಿ ಮೂರ್ನಾಲ್ಕು ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಜುಲೈ ತಿಂಗಳಲ್ಲಿ ಅಬ್ಬರಿಸಿದ ಮಳೆ ಬಳಿಕ ಕಡಿಮೆಯಾಗಿತ್ತು. 15ರಿಂದ 20 ದಿನಗಳಿಂದ ಇಳಿಮುಖವಾಗಿದ್ದ ಮಳೆ ಮತ್ತೆ ಹೆಚ್ಚಾಗಿದೆ.

ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮುಲ್ಕಿ ಹಾಗೂ ಮಂಗಳೂರು ಏರ್‌ಪೋರ್ಟ್‌ನಲ್ಲಿ ವಿಪರೀತ ಮಳೆಯಾಗಿದೆ. ಮಂಗಳೂರು, ಕೋಟಾ, ಕುಂದಾಪುರ, ಮೂಡಬಿದಿರೆ, ಕಾರ್ಕಳ, ಬೆಳ್ತಂಗಡಿ,ಕೊಲ್ಲೂರಿನಲ್ಲಿ ಮಳೆಯಾಗಿದೆ.

ಉಡುಪಿ, ಶಿರಾಲಿ, ಕಾರವಾರ, ವಿರಾಜಪೇಟೆ, ಕಿರವತ್ತಿ, ಬೈಲಹೊಂಗಲ, ಕಂಪ್ಲಿ, ಮೂಡಿಗೆರೆ, ಕೊಪ್ಪ, ಉಪ್ಪಿನಂಗಡಿ, ಸುಬ್ರಹ್ಮಣ್ಯ, ಹುಕ್ಕೇರಿ, ಅಜ್ಜಂಪುರ,ದಾವಣಗೆರೆಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ 28 ಡಿಗ್ರಿ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.ಇಂದು ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಅತ್ಯಧಿಕ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿಯ ಸಮುದ್ರದ ತೀರದಲ್ಲಿ ಗಂಟೆಗೆ 45ರಿಂದ 55 ಕಿ.ಮೀ. ವೇಗದಲ್ಲಿ ಗಾಳಿ ಬೀಸುತ್ತಿದೆ. ಕಾರವಾರದಲ್ಲೂ ದೊಡ್ಡ ಅಲೆಗಳು ಏಳಲಿವೆ.

Recommended Video

      Dubaiನಲ್ಲಿ ಶುರುವಾಯ್ತು Chahal ಮಂಗನಾಟ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+