Rain alert Karnataka : ಕರ್ನಾಟಕದ ಈ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ ಘೋಷಣೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು, ಜೂನ್‌ 13: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಜೋರಾಗಿದೆ. ವರುಣಾನ ಆರ್ಭಟದಿಂದಾಗಿ ರಾಜ್ಯದಲ್ಲಿ ಎಡೆಬಿಡೆದ ಮಳೆಯಾಗುತ್ತಿಉದ್ದು, ರೈತ ರು ಕಂಗಾಲಾಗಿದ್ದಾರೆ. ಮಲೆನಾಡಿನಲ್ಲಿ ಮುಂಗಾರು ಚುರುಕು ಪಡೆದಿದೆ. ಕರಾವಳಿಯಲ್ಲಿ ದಿನ-ರಾತ್ರಿ ಪೂರ್ತಿ ಮಳೆಯಾಗಿದೆ. ಕರಾವಳಿ, ಮಲೆನಾಡು ಸೇರಿ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಿಗೆ ರೆಡ್ ಅಲರ್ಟ್ ಕೊಡಲಾಗಿದೆ. ಉಳಿದೆಡೆ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಇದೆ.

ಬೆಂಗಳೂರಿನಲ್ಲಿಯೂ ಸಹ ಮಳೆಯಾಗುತ್ತಿದ್ದು, ಕೊಂಚ ವಿರಾಮ ಕೊಟ್ಟ ವರುಣಾ ಇದೀಗ ಸಂಜೆಯಾಗುತ್ತಿದ್ದಂತೆ ಬೆಂಗಳೂರಿನ ವಿವಿಧ ಭಾಗಗಳಲ್ಲೂ ಭರ್ಜರಿ ಮಳೆಯಾಗುತ್ತಿದೆ. ನೈಋತ್ಯ ಮಾನ್ಸೂನ್‌ ಎಲ್ಲೆಡೆ ಪೂರ್ಣ ಪ್ರಯಾಣದಲ್ಲಿ ಕಂಡು ಬಂದಿದ್ದು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಾಳಿ ಸಹಿತ ಮಳೆಯಾಗುತ್ತಿದೆ. ಇನ್ನೂ ಭಾರತೀಯ ಹವಾಮಾನ ಇಲಾಖೆ ಪ್ರಕಾರ ರಾಜ್ಯಾದ್ಯಂತ ಏಳು ದಿನಗಳ ಕಾಲ ವ್ಯಾಪಕ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.

Red Alert Issued For These Districts in Karnataka Strong Winds Warning in City

ಬೆಂಗಳೂರು ನಗರ ಮತ್ತು ಗ್ರಾಮೀಣ ಜಿಲ್ಲೆಗಳಿಗೆ ಹೆಚ್ಚು ಮಳೆಯಾಗಲಿದೆ ಎಂದು ಐಎಂಡಿ ಹಳದಿ ಎಚ್ಚರಿಕೆ ನೀಡಿದ್ದು, ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ ಅಲ್ಲದೇ ಗಂಟೆಗೆ 50 ಕಿ.ಮೀ. ವೇಗದ ಗಾಳಿಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯೂ ಎಚ್ಚರಿಕೆ ನೀಡಿದೆ. ಇನ್ನೂ ಸಂಜೆಯಾಗುತ್ತಿದ್ದಂತೆ ಮೋಡ ಕವಿತ ವಾತಾವರಣವಿರಲಿದೆ. ಅಲ್ಲದೇ ವಾರವಿಡೀ ಸಾಧಾರಣ ಮಳೆಯಾಗುವ ಸಾಧ್ಯತೆ ಇದ. ಇನ್ನೂ ವಾಹನ ಸಾವರರು ಎಚ್ಚರಿಕೆಯಿಂದ ಇರುವಂತಿಯೂ ಸಹ ತಿಳಿಸಿದಲಾಗಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗಲಿದ್ದು, ರೆಡ್‌ ಅಲರ್ಟ್‌ ಘೋಷಿಸಿಲಾಗಿದೆ. ಇನ್ನೂ ಈ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಕೆಲವು ಪ್ರದೇಶಗಳಲ್ಲಿ ಗಾಳಿಯ ವೇಗ ಗಂಟೆಗೆ 60 ಕಿ.ಮೀ.ವರೆಗೆ ತಲುಪಬಹುದು, ಇದರಿಂದಾಗಿ ನಿವಾಸಿಗಳು ತೀವ್ರ ಮಳೆಯ ಸಮಯದಲ್ಲಿ ಮನೆಯೊಳಗೆ ಇರುವುದು ಉತ್ತಮ ಎಂದು ತಿಳಿಸಲಾಗಿದೆ.

ದಾವಣಗೆರೆ, ಹಾಸನ, ಹಾವೇರಿ, ಗದಗ, ಬೆಳಗಾವಿ ಮತ್ತು ಧಾರವಾಡದಂತಹ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲೂ ಅತಿ ಹೆಚ್ಚು ಮಳೆ ಮತ್ತು ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಇನ್ನೂ ಧಾರವಾಡದ ಹುಬ್ಬಳ್ಳಿಯಲ್ಲಿ ಗುರುವಾರ ರಾತ್ರಿಯಿಡೀ ಧಾರಾಕಾರ ಮಳೆಯಾಗಿದ್ದು, ಹನಶಿ ಗ್ರಾಮದಂತಹ ತಗ್ಗು ಪ್ರದೇಶಗಳಲ್ಲಿ ತೀವ್ರ ನೀರು ನುಗ್ಗಿದು ಜನರಿಗೆ ತೀವ್ರ ಸಮಸ್ಯೆಯಾಗಿದೆ. ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗಿನ ಕೆಲವು ಭಾಗಗಳಲ್ಲಿ ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+