Get Updates
Get notified of breaking news, exclusive insights, and must-see stories!

Red Fort Blast: ದೇಶದ ರಾಜಧಾನಿಯಲ್ಲಿ ಇಷ್ಟು ಪ್ರಮಾಣದ ಭದ್ರತಾ ಲೋಪ ಹೇಗೆ ಸಾಧ್ಯ: ಕಾಂಗ್ರೆಸ್ ನಾಯಕರ ಪ್ರಶ್ನೆ

Red Fort Blast: ದೆಹಲಿಯ ಹೃದಯಭಾಗದಲ್ಲಿ ನವೆಂಬರ್ 10ರ (ಸೋಮವಾರ) ಬಾಂಬ್ ಸ್ಫೋಟಗೊಂಡಿದ್ದು, ಭಾರೀ ಆತಂಕದ ವಾತಾವರಣ ನಿರ್ಮಾಣವಾಗಿದೆ. ದೇಶದಲ್ಲಿ ಇತ್ತೀಚಿನ ದಿನಗಳಲ್ಲಿ ನಡೆದ ಭೀಕರ ಬಾಂಬ್ ಸ್ಫೋಟ ಪ್ರಕರಣ ಇದಾಗಿದೆ. ಈ ನಡುವೆ ಇದು ರಾಜಕೀಯ ವಾಕ್ಸಮರ ಹಾಗೂ ವಾಗ್ದಾಳಿಗೂ ಕಾರಣವಾಗಿದೆ. ಕರ್ನಾಟಕ ರಾಜ್ಯ ಕಾಂಗ್ರೆಸ್ ನಾಯಕರು ಈ ವಿಚಾರವಾಗಿ ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.

ಇಂತಹ ಘಟನೆಗಳು ಎಂದಿಗೂ ಸಂಭವಿಸಬಾರದು. ದೇಶದ ರಾಜಧಾನಿಯಲ್ಲಿ ಇಷ್ಟು ಪ್ರಮಾಣದ ಭದ್ರತಾ ಲೋಪ ಹೇಗೆ ಸಾಧ್ಯವಾಯಿತು ಎಂದು ಸಚಿವ ರಾಮಲಿಂಗಾರೆಡ್ಡಿ ಅವರು ಪ್ರಶ್ನೆ ಮಾಡಿದ್ದಾರೆ. ದೆಹಲಿಯಲ್ಲಿ ನಡೆದ ಸ್ಫೋಟದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಮೃತರ ಕುಟುಂಬದವರಿಗೆ ನನ್ನ ಹೃದಯಪೂರ್ವಕ ಸಂತಾಪಗಳು ಮತ್ತು ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತೇನೆ.

Red Fort Blast Congress questions major security lapse in heart of national capital Delhi

ಇಂತಹ ಘಟನೆಗಳು ಎಂದಿಗೂ ಸಂಭವಿಸಬಾರದು. ದೇಶದ ರಾಜಧಾನಿಯಲ್ಲಿ ಇಷ್ಟು ಪ್ರಮಾಣದ ಭದ್ರತಾ ಲೋಪ ಹೇಗೆ ಸಾಧ್ಯವಾಯಿತು. ಈ ಕೃತ್ಯಕ್ಕೆ ನಿಖರವಾದ ಕಾರಣವನ್ನು ಶೀಘ್ರವಾಗಿ ಪತ್ತೆ ಹಚ್ಚಿ, ಇದನ್ನು ಎಸಗಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದು ಆಗ್ರಹಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಸಚಿವ ಎಂ.ಬಿ ಪಾಟೀಲ್ ಅವರು, ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಭೀಕರ ಸ್ಫೋಟದಿಂದ ತೀವ್ರ ಆಘಾತಗೊಂಡಿದ್ದೇನೆ. ಹನ್ನೊಂದು ಅಮಾಯಕರ ಜೀವಹಾನಿಯಾಗಿದ್ದು, ಹಲವರು ಗಾಯಗೊಂಡಿರುವ ಈ ಹೃದಯವಿದ್ರಾವಕ ಘಟನೆ ಮನಕಲಕಿದೆ. ಬಲಿಯಾದವರ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ. ಪೊಲೀಸರು ತ್ವರಿತವಾಗಿ ತನಿಖೆ ನಡೆಸಿ, ಈ ಘೋರ ಕೃತ್ಯಕ್ಕೆ ಕಾರಣರಾದವರನ್ನು ಪತ್ತೆಹಚ್ಚಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರು, ದೆಹಲಿಯ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಕಾರು ಸ್ಫೋಟದ ಸುದ್ದಿ ಕೇಳಿ ತುಂಬಾ ದುಃಖವಾಯಿತು. ಈ ಘಟನೆಯಲ್ಲಿ ಹಲವು ಅಮೂಲ್ಯ ಜೀವಗಳು ಬಲಿಯಾಗಿವೆ ಎಂದು ಆರಂಭಿಕ ವರದಿಗಳು ಹೇಳಿವೆ. ಈ ದುಃಖದ ಕ್ಷಣದಲ್ಲಿ ಮೃತರ ಕುಟುಂಬದೊಂದಿಗೆ ನಾವಿದ್ದೇವೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಳಬೇಕೆಂದು ನಾವು ಪ್ರಾರ್ಥಿಸುತ್ತೇವೆ.

ಹೆಚ್ಚಿನ ಭದ್ರತೆ ಮತ್ತು ಆಗಾಗ್ಗೆ ಜನದಟ್ಟಣೆ ಇರುವ ಸ್ಥಳದಲ್ಲಿ ಸಂಭವಿಸಿದ ಈ ಸ್ಫೋಟದ ಬಗ್ಗೆ ಸರ್ಕಾರವು ತ್ವರಿತ ಮತ್ತು ಸಮಗ್ರ ತನಿಖೆಯನ್ನು ಖಚಿತಪಡಿಸಿಕೊಳ್ಳಬೇಕು. ಇನ್ನು ಈ ಲೋಪ ಹಾಗೂ ಘಟನೆಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ದೆಹಲಿಯ ಕೆಂಪುಕೋಟೆ ಬಳಿ ಕಾರ್ ಸ್ಪೋಟದಿಂದ ಹಲವರು ಸಾವಿಗೀಡಾಗಿರುವುದು ನೋವನ್ನುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಗಾಯಾಳುಗಳು ಶೀಘ್ರ ಗುಣಮುಖರಾಗಲಿ. ಬೆಂಗಳೂರು ಸೇರಿದಂತೆ ಎಲ್ಲ ಜಿಲ್ಲಾ ಕೇಂದ್ರ ಹಾಗೂ ಪ್ರಮುಖ ಸ್ಥಳಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಿ, ನಾಗರಿಕರ ಸುರಕ್ಷತೆಗೆ ಭದ್ರತೆ ಹೆಚ್ಚಿಸುವಂತೆ ರಾಜ್ಯದ ಪೊಲೀಸ್ ಮುಖ್ಯಸ್ಥರಿಗೆ ಸೂಚಿಸಿದ್ದೇನೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಅವರು ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+