ಭಾಗ್ಯದ ಲಕ್ಷ್ಮೀ ಬಾರಮ್ಮ ಎಂಬ ಹಾಡು ಹಾಡಿ ಭಾಗ್ಯಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಕೊಳ್ಳಿ ಎಂದ ಡಿಕೆಶಿ

ರಾಮನಗರ, ಜುಲೈ 05: ಭಾಗ್ಯಲಕ್ಷ್ಮೀ ಯೋಜನೆಗೆ ಎಲ್ಲರೂ ನೋಂದಣಿ ಮಾಡಿಕೊಳ್ಳಿ ಎಂದು ಭಾಗ್ಯದ ಲಕ್ಷ್ಮೀ ಬಾರಮ್ಮ ಎಂಬ ಹಾಡು ಹಾಡಿ ಭಾಗ್ಯಲಕ್ಷ್ಮೀ ಯೋಜನೆಗೆ ನೋಂದಣಿ ಮಾಡಿಕೊಳ್ಳಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದದರು.

ರಾಮನಗರದಲ್ಲಿ ಮಂಗಳವಾರ ನಡೆದ ಚಾಮುಂಡೇಶ್ವರಿ ಕರಗ ಮಹೋತ್ಸವ ಸಂಭ್ರಮದಲ್ಲಿ ಮಾತನಾಡಿದ ಅವರು, ಚಾಮುಂಡೇಶ್ವರಿ ಆಶೀರ್ವಾದ ಪಡೆದು ಬಂದಿದ್ದೇನೆ. ತಾಯಿ ಆಶೀರ್ವಾದ ಹಾಗೂ ಜಿಲ್ಲೆಯ ಜನತೆಯ ಶಕ್ತಿಯಿಂದ ನಮ್ಮ ಸರ್ಕಾರ ಬಂದಿದೆ. ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಲಿದೆ. ಸರ್ಕಾರ ಕೊಟ್ಟ ಐದು ಗ್ಯಾರಂಟಿಗಳನ್ನ ಈಡೇರಿಸುವ ಕೆಲಸ ಮಾಡುತ್ತಿದ್ದೇವೆ.
ಮುಂದಿನ ತಿಂಗಳು ನೀವ್ಯಾರು ಕರೆಂಟ್ ಬಿಲ್ ಕಟ್ಟಂಗಿಲ್ಲ ಎಂದು ಹೇಳಿದ್ದಾರೆ.

Register For Bhagyalakshmi Scheme Says DCM DK Shivakumar

ಗೃಹಜ್ಯೋತಿಯಲ್ಲಿ ನೊಂದಣಿ ಮಾಡಿಕೊಂಡವ್ರಿಗೆ ಉಚಿತ ವಿದ್ಯುತ್. ಈಗಾಗಲೇ ಜನ ಉಚಿತ ಬಸ್ ಯೋಜನೆ ಪಡೆದುಕೊಳ್ಳುತ್ತಿದ್ದಾರೆ. ಹಾಗೆಯೇ ಭಾಗ್ಯಲಕ್ಷ್ಮೀ ಯೋಜನೆಗೆ ಎಲ್ಲರೂ ನೋಂದಣಿ ಮಾಡಿಕೊಳ್ಳಿ ಎಂದು ಹೇಳಿದರು.

ನಾವು ಚುನಾವಣಾ ಪೂರ್ಣದಲ್ಲಿ ಕೊಟ್ಟ ಮಾತಿನಂತೆ ಐದು ಗ್ಯಾರಂಟಿಗಳು ಜಾರಿಯಾಗುತ್ತವೆ. ಸರ್ಕಾರದ ಐದು ಗ್ಯಾರಂಟಿಗಳು ಈಡೇರದಿದ್ದಲ್ಲಿ ನಾನು ಮುಂದೆ ಲೋಕಸಭಾ ಚುನಾವಣೆಗೆ ಮತಕೇಳಲು ಬರಲ್ಲ. ಎಲ್ಲಾ ಭರವಸೆ ಈಡೇರಿಸುತ್ತೇವೆ. ಸರ್ಕಾರದ ಯೋಜನೆ ಪಡೆಯಲು ಯಾರೂ ಲಂಚ ಕೊಡಬೇಡಿ. ನಮ್ಮ ಪಕ್ಷದ ನಾಯಕರು, ಕಾರ್ಯಕರ್ತರೇ ಬಂದು ನಿಮಗೆ ಯೋಜನೆ ತಲುಪಿಸಲಿದ್ದಾರೆ. ರಾಮನಗರದ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು.

ನಾವು 10 ಕೆ ಜಿ ಅಕ್ಕಿ ಕೊಡುತ್ತೇವೆ. ನಮ್ಮ ಮೇಲೆ ನಂಬಿಕೆ ಇಡಿ, ನಿಮ್ಮ ನಂಬಿಕೆಯನ್ನ ನಾವು ಉಳಿಸಿಕೊಳ್ಳುತ್ತೇವೆ. ಮಹಿಳೆಯರಿಗೆ ಉಚಿತ ಬಸ್‌ ನೀಡಿದ್ದೇವೆ. ನಾವು ಕೊಟ್ಟ ಮಾತನ್ನ ನಾವು ಉಳಿಸಿಕೊಂಡಿದ್ದೇವೆ. ನಮ್ಮ ಕ್ಷೇತ್ರದಲ್ಲಿ ನಾವು ಬದಲಾವಣೆ ತಂದಿದ್ದೇವೆ.

ಗ್ಯಾರಂಟಿ ಜಾರಿ; ಬಿಜೆಪಿ ವಿರುದ್ದ ದಿನೇಶ್‌ ಗುಂಡೂರಾವ್‌ ಕಿಡಿ

ಬಿಜೆಪಿಯವರು ಅಧಿವೇಶನದಲ್ಲಿ ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಅನಗತ್ಯವಾಗಿ ಗದ್ದಲ ಎಬ್ಬಿಸುತ್ತಿದ್ದಾರೆ. ಈಗಾಗಲೇ ನಮ್ಮ ಸರ್ಕಾರ, ನಾವು ಕೊಟ್ಟ 5 ಗ್ಯಾರಂಟಿಗಳ ಪೈಕಿ 3 ಗ್ಯಾರಂಟಿ ಅನುಷ್ಠಾನಕ್ಕೆ ತಂದಿದೆ ಎಂದು ಸಚಿವ ದಿನೇಶ್‌ ಗುಂಡೂರಾವ್‌ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

ಗೃಹಲಕ್ಷ್ಮಿ ಯೋಜನೆ ಆಗಸ್ಟ್ 15 ರಿಂದ ಚಾಲನೆಯಾಗಲಿದೆ‌. ಯುವನಿಧಿ ಯೋಜನೆಗೂ ಚಾಲನೆ ದೊರೆಯಲಿದೆ. ಹೀಗಿರುವಾಗ ಬಿಜೆಪಿಯವರಿಗೆ ಏನು ಸಮಸ್ಯೆ.? ಎಂದು ಪ್ರಶ್ನಿಸಿದ್ದು, ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದರೂ ಬಿಜೆಪಿಯವರು ಸದನದ ಒಳಗೆ ಹಾಗೂ ಹೊರಗೆ ಪ್ರತಿಭಟನೆ ನಡೆಸುತ್ತಿರುವುದು ಹತಾಶೆಯಿಂದಲೇ ಹೊರತು ಮತ್ಯಾವ ಕಾರಣದಿಂದಲೂ ಅಲ್ಲ. ನಮ್ಮ ಗ್ಯಾರಂಟಿ ಯೋಜನೆಗಳ ಜನಪ್ರಿಯತೆ ಬಿಜೆಪಿ ನಾಯಕರ ನಿದ್ದೆ ಹಾಗೂ ನೆಮ್ಮದಿ ಕೆಡಿಸಿದೆ. ಹಾಗಾಗಿ ಬಿಜೆಪಿ ನಾಯಕರ ಪ್ರತಿಭಟನೆ ಅತೃಪ್ತ ಆತ್ಮಗಳ ವೃಥಾ ಆಲಾಪದಂತೆ ಕಾಣುತ್ತಿದೆ.

ಬಿಜೆಪಿ ಯವರು ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಅಧಿವೇಶನದಲ್ಲಿ ಅಂಗಿ ಹರಿದುಕೊಳ್ಳುವುದ ಬಿಟ್ಟು ಕೇಂದ್ರ ಅಕ್ಕಿ ಕೊಡದ ಬಗ್ಗೆ ಚಕಾರ ಎತ್ತಿದ್ದರೆ ರಾಜ್ಯದ ಜನ ಭೇಷ್ ಎನ್ನುತ್ತಿದ್ದರು. ಕೇಂದ್ರ ಸರ್ಕಾರ ಅಕ್ಕಿ ಕೊಡದಿದ್ದಾಗ ರಾಜ್ಯ ಬಿಜೆಪಿ ಯವರ ನಾಲಗೆಯ‌ ಪಸೆ ಆರಿ ಹೋಗಿತ್ತು. ಈಗ ಅಕ್ಕಿ ಕೊಡಿ ಎನ್ನುತ್ತಿದ್ದಾರೆ. ಇವರಿಗೆ ಯಾವ ನೈತಿಕತೆ ಇದೆ.? ಎಂದು ಪ್ರಶ್ನಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+