ಅಂತರರಾಜ್ಯ ಪ್ರಯಾಣಿಕರಿಗೆ ಕೆಎಸ್ಆರ್‌ಟಿಸಿ ಸೂಚನೆ

ಬೆಂಗಳೂರು, ಜೂನ್ 21 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಂತರರಾಜ್ಯ ಪ್ರಯಾಣಿಕರಿಗೆ ಸೂಚನೆಯೊಂದನ್ನು ನೀಡಿದೆ. ಆಂಧ್ರಪ್ರದೇಶಕ್ಕೆ ಕೆಎಸ್ಆರ್‌ಟಿಸಿ ಸಾಮಾನ್ಯ ಬಸ್ ಸೇವೆಯನ್ನು ಆರಂಭಿಸಲಾಗಿದೆ.

Recommended Video

      Dancing is the most difficult thing for me : Sudeep | Filmibeat Kannada

      ಕರ್ನಾಟಕ ಸರ್ಕಾರದ ಆದೇಶದಂತೆ ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಇತರ ರಾಜ್ಯಗಳಿಂದ ಕರ್ನಾಟಕಕ್ಕೆ ಬರುವ ಎಲ್ಲಾ ಪ್ರಯಾಣಿಕರು ಸೇವಾ ಸಿಂಧು ಪೋರ್ಟಲ್‌ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

      ಬೇರೆ ರಾಜ್ಯಗಳಿಂದ ವಿಮಾನ, ರೈಲಿನಲ್ಲಿ ಬರುವ ಪ್ರಯಾಣಿಕರಿಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ನೋಂದಣಿ ಕಡ್ಡಾಯವಾಗಿತ್ತು. ಈಗ ಕೆಎಸ್ಆರ್‌ಟಿಸಿ ಬಸ್‌ಗಳಲ್ಲಿ ಬರುವ ಪ್ರಯಾಣಿಕರಿಗೆ ಸಹ ಇದನ್ನು ಕಡ್ಡಾಯಗೊಳಿಸಲಾಗಿದೆ.

      Rigister In Seve Sindhu Must For Inter State Bus Passengers

      ಅಂತರರಾಜ್ಯ ಪ್ರಯಾಣಿಕರು ಹೆಸರು, ವಿಳಾಸ, ಮೊಬೈಲ್ ನಂಬರ್ ನೀಡಿ ನೋಂದಣಿ ಮಾಡಿಕೊಳ್ಳಬೇಕು. ಕರ್ನಾಟಕದ ಸರ್ಕಾರದ ಅನುಮತಿಗಾಗಿ ಕಾಯುವ ಅಗತ್ಯವಿಲ್ಲ. ಕೇವಲ ನೋಂದಣಿ ಮಾಡಿಕೊಂಡರೆ ಸಾಕು ಎಂದು ಸ್ಪಷ್ಟನೆ ನೀಡಲಾಗಿದೆ.

      ಸೇವಾಸಿಂಧು ಫೋರ್ಟಲ್‌ನಲ್ಲಿ ಹೆಸರು ನೋಂದಣಿ ಮಾಡಿಸಿರುವುದನ್ನು ಬಸ್ ನಿರ್ವಾಹಕರಿಗೆ ತೋರಿಸಬೇಕು. ಇಲ್ಲವಾದಲ್ಲಿ ಬಸ್ ಹತ್ತಲು ಅವಕಾಶ ನೀಡುವುದಿಲ್ಲ ಎಂದು ಕೆಎಸ್ಆರ್‌ಟಿಸಿ ಪ್ರಕಟಣೆಯಲ್ಲಿ ಹೇಳಿದೆ.

      ಆಂಧ್ರಪ್ರದೇಶದಿಂದ ಕರ್ನಾಟಕ, ಕರ್ನಾಟಕದಿಂದ ಆಂಧ್ರಪ್ರದೇಶಕ್ಕೆ ಸಂಚಾರ ನಡೆಸುವ ಪ್ರಯಾಣಿಕರು ಕಡ್ಡಾಯವಾಗಿ ಆಧಾರ್ ಕಾರ್ಡ್‌ ಜೊತೆಯಲ್ಲಿ ಇಟ್ಟುಕೊಂಡಿರಬೇಕು ಎಂದು ಕೆಎಸ್ಆರ್‌ಟಿಸಿ ಸೂಚನೆ ನೀಡಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+