ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಾಸನದಲ್ಲಿ ಉದ್ಯೋಗ ಮೇಳಕ್ಕೆ ನೋಂದಣಿ ಮಾಡಿಕೊಳ್ಳಿ

|
Google Oneindia Kannada News

ಹಾಸನ, ಡಿ.23 : ಹೊಯ್ಸಳ ಉತ್ಸವ ಆಚರಣೆಯ ಸಂದರ್ಭದಲ್ಲಿ ವಿದ್ಯಾವಂತ ನಿರುದ್ಯೋಗಿ ಯುವಕ-ಯುವತಿಯವರಿಗೆ ಉದ್ಯೋಗಾವಕಾಶವನ್ನು ಒದಗಿಸಲು ಹಾಸನ ಜಿಲ್ಲಾಡಳಿತ ನಿರ್ಧರಿಸಿದೆ. ಹಾಸನದಲ್ಲಿ ಜನವರಿ 9 ಮತ್ತು 10 ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಹಾಸನ ಜಿಲ್ಲಾಡಳಿತ, ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ನಿಗಮ ನಿಯಮಿತ, ಬೆಂಗಳೂರು, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ, ಬೆಂಗಳೂರು ಜಂಟಿಯಾಗಿ ಜ.9 ಮತ್ತು 10 ರಂದು ಹಾಸನ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಯೋಗಮೇಳವನ್ನು ಆಯೋಜಿಸಲು ನಿರ್ಧರಿಸಿವೆ.

hassan

ಈ ಉದ್ಯೋಗಮೇಳದಲ್ಲಿ ಎಸ್ಎಸ್‌ಎಲ್‌ಸಿ ಉತ್ತೀರ್ಣ/ಅನುತ್ತೀರ್ಣ, ಪಿಯುಸಿ, ಜೆಓಸಿ, ಐಟಿಐ, ಡಿಪ್ಲೊಮೋ, ಸಾಮಾನ್ಯ ಹಾಗೂ ವೃತ್ತಿ ಆಧಾರಿತ ಪದವೀಧರರು, ಸ್ನಾತಕೋತ್ತರ ಪದವೀಧರರು ಹಾಗೂ ಎಲ್ಲಾ ರೀತಿಯ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. [ಉದ್ಯೋಗದ ಮಾಹಿತಿ ಇಲ್ಲಿದೆ ನೋಡಿ]

ಉದ್ಯೋಗಾಕಾಂಕ್ಷಿಗಳು ಮೊದಲು ಅರ್ಜಿ ಸಲ್ಲಿಸಿ, ಸ್ವೀಕೃತಿ ಪಡೆಯಬಹುದಾಗಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವಾಗ ಕಡ್ಡಾಯವಾಗಿ ಸ್ವೀಕೃತಿಯನ್ನು ತರತಕ್ಕದ್ದು. ನೋಂದಾವಣೆಗಾಗಿ www.hassanjobfair.kar.nic.in ವೆಬ್‌ಸೈಟ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ವೆಬ್‌ ಸೈಟ್‌ನಲ್ಲಿ ಅರ್ಜಿ ಸಲ್ಲಿಸಲು ಸಾಧ್ಯವಾಗದಿದ್ದರೆ ನೇರವಾಗಿ ಎಲ್ಲಾ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಕೈಗಾರಿಕಾ ಕೇಂದ್ರಕ್ಕೆ ಭೇಟಿನೀಡಿ, ನೋಂದಣಿ ಮಾಡಿಸಿ ಸ್ವೀಕೃತಿ ಪಡೆಯಬಹುದಾಗಿದೆ.

ಉದ್ಯೋಗ ಮೇಳಕ್ಕೆ ಆಗಮಿಸುವ ಉದ್ಯೋಗಾಕಾಂಕ್ಷಿಗಳು ಬಯೋಡಾಟಾ, ಅಂಕಪಟ್ಟಿ ಹಾಗೂ ಇತರೆ ದಾಖಲೆಗಳ ಸಾಕಷ್ಟು ಜೆರಾಕ್ಸ್ ಪ್ರತಿಗಳನ್ನು ಮಾತ್ರ ತರಬೇಕು. ಉದ್ಯೋಗಮೇಳದ ಎಲ್ಲಾ ಚಟುವಟಿಕೆಗಳು ಸಂಪೂರ್ಣ ಉಚಿತವಾಗಿದ್ದು, ಅಭ್ಯರ್ಥಿಗಳು ಎಲ್ಲಿಯೂ ಹಣವನ್ನು ಪಾವತಿಸಬಾರದು ಎಂದು ಹಾಸನ ಜಿಲ್ಲೆಯ ಹೊಯ್ಸಳ ಉತ್ಸವ ಸಮತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ವಿ.ಅನ್ಬುಕುಮಾರ್ ಮನವಿ ಮಾಡಿದ್ದಾರೆ.

English summary
Hassan District Administration and District Employment Exchange has organized Mega Job Fair in Hassan city on Jan 9 and 10, 2015. Candidates can register either online or offline.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X