• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನ.25ರೊಳಗೆ ಮತದಾರರ ಪಟ್ಟಿಗೆ ಹೆಸರು ಸೇರಿಸಿ

|

ಬೆಂಗಳೂರು, ನ.4 : ಕರ್ನಾಟಕ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯವನ್ನು ಆರಂಭಿಸಿದೆ. ನ.25ರೊಳಗೆ ಅರ್ಹರು ತಮ್ಮ ಹೆಸರನ್ನು ಮತದಾರರ ಪಟ್ಟಿಗೆ ಸೇರಿಸಬಹುದಾಗಿದೆ. ಆನ್‌ಲೈನ್ ಮೂಲಕವೂ ಹೆಸರು ನೋಂದಣಿ ಮಾಡಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನಿಲ್‌ ಕುಮಾರ್‌ ಝಾ ಈ ಕುರಿತು ಪ್ರಕಟಣೆ ಹೊರಡಿಸಿದ್ದು, 2015ರ ಜ.1ಕ್ಕೆ 18 ವರ್ಷ ಪೂರ್ಣಗೊಳ್ಳುವ ಅರ್ಹರು ನ.25ರೊಳಗೆ ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಸೇರಿಸಬೇಕು ಎಂದು ಮವಿ ಮಾಡಿದ್ದಾರೆ.

ಯಾವ ಅರ್ಜಿಯಲ್ಲಿ ಸಲ್ಲಿಸಬೇಕು : ಮತದಾರರ ಪಟ್ಟಿಯಲ್ಲಿ ಹೆಸರು ಬಿಟ್ಟು ಹೋಗಿದ್ದರೆ ಅಥವಾ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅರ್ಜಿ ನಮೂನೆ 6 ನ್ನು ಭರ್ತಿ ಮಾಡಿ ಸಲ್ಲಿಸಬೇಕು. ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು, ವಿಳಾಸ, ವಯೋಮಿತಿ ಸೇರಿದಂತೆ ಇತರೆ ಮಾಹಿತಿಯ ಲೋಪಗಳನ್ನು ಸರಿಪಡಿಸಲು ಅರ್ಜಿ ನಮೂನೆ 8ನ್ನು ಸಲ್ಲಿಸಬೇಕು.

ಮತದಾರರ ಪಟ್ಟಿಯಿಂದ ತಮ್ಮ ಹೆಸರನ್ನು ತೆಗೆದು ಹಾಕಲು ಮತ್ತು ಆಕ್ಷೇಪಣೆ ಸಲ್ಲಿಸಲು ಅರ್ಜಿ ನಮೂನೆ 7ರಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಆನ್‌ಲೈನ್‌ನಲ್ಲಿ ನೋಂದಣಿ ಮಾಡಲು www.ceokarnataka.kar.nic.in ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ. [ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ]

ಕರಡು ಪಟ್ಟಿಯನ್ನು ಒಮ್ಮೆ ನೋಡಿ : ಮತದಾರರ ಕರಡು ಪಟ್ಟಿಗಳು ತಾಲೂಕು ಕಚೇರಿ, ನಗರಸಭೆ ವಾರ್ಡ್‌ ಕಚೇರಿ ಮತ್ತು ಬಿಬಿಎಂಪಿ ಕಂದಾಯ ಅಧಿಕಾರಿಗಳ ಕಚೇರಿಯಲ್ಲಿ ಲಭ್ಯವಿದೆ. ಮತದಾರರು ಕರಡು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇದೆಯೇ ಎಂಬ ಬಗ್ಗೆ ಪರಿಶೀಲಿಸಿಕೊಳ್ಳಿ.

ಯಾವ ದಾಖಲೆ ಬೇಕು : ಕರಡು ಪಟ್ಟಿಯಲ್ಲಿ ನಿಮ್ಮ ಹೆಸರು ಇಲ್ಲದಿದ್ದರೆ 18 ವರ್ಷ ತುಂಬಿದ ಎಲ್ಲರೂ ನಮೂನೆ-6 ಅನ್ನು ಭರ್ತಿ ಮಾಡಿ, ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರ, ಮನೆಯ ವಿಳಾಸದ ಪುರಾವೆ, ಜನ್ಮ ದಿನಾಂಕದ ಪ್ರಮಾಣ ಪತ್ರದ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಬದಲಾವಣೆಗಾಗಿ ಅರ್ಜಿ ಸಲ್ಲಿಸಿ : ಮತದಾರರು ಒಂದು ಮತಗಟ್ಟೆ ವ್ಯಾಪ್ತಿಯಿಂದ ಬೇರೊಂದು ಮತಗಟ್ಟೆ ವ್ಯಾಪ್ತಿಗೆ ಅಂದರೆ ಒಂದೇ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸ್ಥಳಾಂತರಗೊಂಡಿದ್ದಲ್ಲಿ ಅರ್ಜಿ ನಮೂನೆ 8ಎ ಅನ್ನು ಅಗತ್ಯ ದಾಖಲಾತಿಗಳೊಂದಿಗೆ ಸಲ್ಲಿಸಬೇಕು.

ಒಂದು ವಿಧಾನಸಭಾ ಕ್ಷೇತ್ರದಿಂದ ಮತ್ತೂಂದು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಸ್ಥಳಾಂತರಗೊಂಡಿದ್ದಲ್ಲಿ ಅಂತಹವರು ಅರ್ಜಿ ನಮೂನೆ-6ನ್ನು ಸಲ್ಲಿಸಬೇಕು. ಅಲ್ಲಿನ ಭಾಗ-4ರಲ್ಲಿ ಇರುವ ಘೋಷಣೆಯನ್ನು ಕಡ್ಡಾಯವಾಗಿ ಭರ್ತಿ ಮಾಡಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ಸಂಖ್ಯೆ 1950ಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದು.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka Election Commission launched voter registration campaign again. If your name is not included in voters list, go to nearest govt office and register your name before November 25. For online registration visit For more details visit http://www.ceokarnataka.kar.nic.in/ website.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more