Get Updates
Get notified of breaking news, exclusive insights, and must-see stories!

Yeshasvini Scheme: ಯಶಸ್ವಿನಿ ಯೋಜನೆಗೆ ನೋಂದಣಿ ಆರಂಭ, ಮಾನದಂಡಗಳು

ಬೆಂಗಳೂರು, ಡಿಸೆಂಬರ್ 03: ಕರ್ನಾಟಕ ಸರ್ಕಾರ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ನೋಂದಣಿ 2025ಕ್ಕೆ ಚಾಲನೆ ನೀಡಿದೆ. ಯೋಜನೆಯಡಿ ನೋಂದಣಿಯಾದ ಸದಸ್ಯರಿಗೆ ಸರ್ಕಾರ ಮಾರ್ಚ್‌ 1ರಿಂದ ಐಡಿ ಕಾರ್ಡ್‌ಗಳನ್ನು ನೀಡಲಿದೆ. ರಾಜ್ಯದಲ್ಲಿ ಕಾರ್ಯ ನಿರ್ವಹಣೆ ಮಾಡುತ್ತಿರುವ ಯಾವುದೇ ಸಹಕಾರ ಸಂಘ/ ಬ್ಯಾಂಕ್‌ಗಳ ಸದಸ್ಯರು ಅಥವ ಸಹಕಾರಿ ಸ್ವ-ಸಹಾಯ ಗುಂಪುಗಳ ಸದಸ್ಯರು ಸಹ ನೋಂದಣಿ ಮಾಡಿಕೊಳ್ಳಬಹುದು.

2025ನೇ ಸಾಲಿನಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ನೋಂದಣಿಗೆ ಸರ್ಕಾರ ಆದೇಶವನ್ನು ಹೊರಡಿಸಿದೆ. ಮಾರ್ಗಸೂಚಿಗಳನ್ನು ಹೊರಡಿಸಿದೆ. ಖಾಸಗಿ ಕಂಪನಿ ಅಥವ ಇತರ ಸಂಸ್ಥೆಗಳಲ್ಲಿ ತಿಂಗಳಿಗೆ 30 ಸಾವಿರ ರೂ.ಗಿಂತ ಹೆಚ್ಚು ವೇತನ ಪಡೆಯುವವರು ಯಶಸ್ವಿನಿ ಆರೋಗ್ಯ ಯೋಜನೆ ನೋಂದಣಿಗೆ ಅರ್ಹರಲ್ಲ.

Registration For Yeshasvini Health Insurance Scheme Guidelines

ಕೆಲವು ಹೊಸ ಷರತ್ತುಗಳೊಂದಿಗೆ ಯಶಸ್ವಿನಿ ಯೋಜನೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ನೀಡಲಾಗಿದೆ. ಡಿಸೆಂಬರ್ 1 ರಿಂದ 31ರ ತನಕ ನೋಂದಣಿ ಮಾಡಿಕೊಳ್ಳಬಹುದು. ಚಿಕಿತ್ಸಾ ಅವಧಿ 2025ರ ಏಪ್ರಿಲ್ 1 ರಿಂದ 2026ರ ಮಾರ್ಚ್ 31 ಎಂದು ನಿಗದಿಗೊಳಿಸಲಾಗಿದೆ. ಈಗ ನೋಂದಣಿ ಮಾಡಿಕೊಂಡವರಿಗೆ ಮಾರ್ಚ್ 1 ರಿಂದ ಯೂನಿಕ್ ಐಡಿ ಸಂಖ್ಯೆ ಹೊಂದಿದ ಗುರುತಿನ ಚೀಟಿಗಳನ್ನು ನೀಡಲಾಗುತ್ತದೆ.

2025ರ ಏಪ್ರಿಲ್ 1ರಿಂದ ಫಲಾನುಭವಿಗಳು ನಗದು ರಹಿತ ಚಿಕಿತ್ಸೆಗಳನ್ನು ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ನೀಡಿ ಪಡೆಯಬಹುದು. ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯಡಿ ನೋಂದಣಿಯಾಗಿ ಕಾರ್ಯ ನಿರತ ಸಹಕಾರ ಸಂಘಗಳಲ್ಲಿ ಕನಿಷ್ಠ 3 ವರ್ಷ ಸೇವೆ ಪೂರ್ಣಗೊಳಿಸಿ ಮಾಸಿಕ 30 ಸಾವಿರಕ್ಕಿಂತ ಕಡಿಮೆ ವೇತನ ಪಡೆಯುತ್ತಿರುವವರು ಹಾಗೂ ಅವರ ಅರ್ಹ ಕುಟುಂಬ ಸದಸ್ಯರು ನೋಂದಣಿ ಮಾಡಿಕೊಳ್ಳಲು ಅರ್ಹರು.

ಮಾರ್ಗಸೂಚಿಗಳು

* ಯಾವುದೇ ಸಹಕಾರ ಸಂಘಗಳ ಕಾಯ್ದೆಗಳಡಿ (ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಕರ್ನಾಟಕ ಸೌಹಾರ್ದ ಸಹಕಾರಿಗಳ ಕಾಯ್ದೆ 1997 ಅಥವಾ ಬಹು ರಾಜ್ಯ ಸಹಕಾರಿ ಸಂಘಗಳ ಕಾಯ್ದೆ 2002) ನೋಂದಾಯಿಸಿ, ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಯಾವುದೇ ಸಹಕಾರ ಸಂಘ/ ಬ್ಯಾಂಕುಗಳ (ಗ್ರಾಮೀಣ ಮತ್ತು ನಗರ ಸಹಕಾರ ಸಂಘಗಳು ಒಳಗೊಂಡಂತೆ) ಸದಸ್ಯರು ಅಥವಾ ಸಹಕಾರಿ ಸ್ವ-ಸಹಾಯ ಗುಂಪುಗಳ ಸದಸ್ಯರು, ಸದಸ್ಯರಾಗಿ ಒಂದು ತಿಂಗಳು ಪೂರ್ಣಗೊಂಡಿದ್ದಲ್ಲಿ ಅಂತಹ ಸದಸ್ಯರು ಅಥವಾ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959ರಡಿ ನೋಂದಣಿಯಾಗಿ ಕಾರ್ಯನಿರತ ಸಹಕಾರ ಸಂಘಗಳಲ್ಲಿ ಕನಿಷ್ಟ ಮೂರು ವರ್ಷ ಸೇವೆ ಪೂರ್ಣಗೊಳಿಸಿ ಮಾಸಿಕ ರೂ. 30,000 ಮತ್ತು ಅದಕ್ಕಿಂತ ಕಡಿಮೆ ಒಟ್ಟು ವೇತನ ಪಡೆಯುತ್ತಿರುವ ನೌಕರರು ಮತ್ತು ಅವರ ಅರ್ಹ ಕುಟುಂಬ ಸದಸ್ಯರು ನಿಗದಿತ ವಾರ್ಷಿಕ ವಂತಿಗೆಯನ್ನು ಪಾವತಿಸಿ ಯಶಸ್ವಿನಿ ಯೋಜನೆಯಡಿ ಸದಸ್ಯರಾಗಲು ಅರ್ಹರಿರುತ್ತಾರೆ (ನೌಕರರಾಗಿದ್ದಲ್ಲಿ ಕನಿಷ್ಠ ಮೂರು ವರ್ಷ ಸೇವೆ ಮತ್ತು ರೂ. 30,000 ಮತ್ತು ಅದಕ್ಕಿಂತ ಕಡಿಮೆ ವೇತನ ಪಡೆಯುತ್ತಿರುವ ಬಗ್ಗೆ ಸಂಬಂಧಿಸಿದ ಸಹಕಾರ ಸಂಘದ ಆಡಳಿತ ಮಂಡಳಿ ದೃಢೀಕರಣ ಪತ್ರ ಲಗತ್ತಿಸಬೇಕು)

* ಸಮಾಪನೆ/ ನಿಷ್ಕ್ರಿಯಗೊಂಡಿರುವ ಸಹಕಾರ ಸಂಘಗಳ ಹಾಗೂ ನೌಕರರ ಸಹಕಾರ ಸಂಘಗಳ ಸದಸ್ಯರು ಅಥವಾ ಪ್ರಧಾನ ಅರ್ಜಿದಾರರು ಮತ್ತು ಅವನ ಕುಟುಂಬದ ಯಾವುದೇ ಸದಸ್ಯನು ಸರ್ಕಾರಿ ನೌಕರರಾಗಿದ್ದಲ್ಲಿ ಯೋಜನೆಗೆ ಅರ್ಹರಿರುವುದಿಲ್ಲ. ಅದೇ ರೀತಿ ಒಬ್ಬ ವ್ಯಕ್ತಿ ಖಾಸಗಿ ಕಂಪನಿ ಅಥವಾ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದು ಮಾಸಿಕ ರೂ. 30,000ಕ್ಕಿಂತ ಹೆಚ್ಚು ಒಟ್ಟು ವೇತನ ಪಡೆಯುತ್ತಿದ್ದಲ್ಲಿ ಅಥವಾ ಒಬ್ಬ ವ್ಯಕ್ತಿ ಯಾವುದೇ ಆರೋಗ್ಯ ವಿಮಾ ಯೋಜನೆಯಡಿಯಲ್ಲಿ ಸದಸ್ಯರಾಗಿದ್ದಲ್ಲಿ ಅಂತಹವರು ಯಶಸ್ವಿನಿ ಯೋಜನೆಯಡಿ ಸದಸ್ಯರಾಗಲು ಅರ್ಹರಿರುವುದಿಲ್ಲ. ಅಂತಹವರನ್ನು ಯಶಸ್ವಿನಿ ಯೋಜನೆಯ ಫಲಾನುಭವಿಯಾಗಿ ನೋಂದಾಯಿಸಬಾರದು. ಆದಾಗ್ಯೂ ಯಾವುದೇ ಕಾರಣಕ್ಕೆ ನೋಂದಾಯಿಸಿದ್ದಲ್ಲಿ ಸಹಿತ ಅವರು ಯೋಜನೆ ಸೌಲಭ್ಯ ಪಡೆಯಲು ಅರ್ಹರಾಗುವುದಿಲ್ಲ. ಅಂತಹ ವ್ಯಕ್ತಿಗಳು ಪಾವತಿಸಿದ ವಂತಿಗೆಯನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು.

* ಗ್ರಾಮೀಣ ಸಹಕಾರ ಸಂಘಗಳ/ ಸ್ವ-ಸಹಾಯ ಗುಂಪುಗಳ ಗರಿಷ್ಠ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ರೂ. 500ಗಳ ವಂತಿಗೆ ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರುಗಳ ಕುಟುಂಬದ ಪ್ರತಿಯೊಬ್ಬ ಹೆಚ್ಚುವರಿ ಸದಸ್ಯರಿಗೆ ರೂ. 100ಗಳನ್ನು ಪಾವತಿಸತಕ್ಕದ್ದು. ನಗರ ಸಹಕಾರ ಸಂಘಗಳ ಗರಿಷ್ಟ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ರೂ.1000ಗಳ ವಂತಿಗೆ ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರುಗಳ ಕುಟುಂಬದ ಪ್ರತಿಯೊಬ್ಬ ಹೆಚ್ಚುವರಿ ಸದಸ್ಯರಿಗೆ ರೂ. 200ಗಳನ್ನು ಪಾವತಿಸತಕ್ಕದ್ದು.

* ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಸದಸ್ಯರಿಗೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಸಹಾಯ ಧನ ನೀಡುವ ಮೂಲಕ ಅವರ ವಾರ್ಷಿಕ ಸದಸ್ಯತ್ವದ ವಂತಿಗೆಯನ್ನು ಸರ್ಕಾರವೇ ಭರಿಸುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ವಿವರಗಳನ್ನು ಸರ್ಕಾರಕ್ಕೆ ಕಡ್ಡಾಯವಾಗಿ ಸಲ್ಲಿಸಬೇಕಾಗಿರುವುದರಿಂದ ಈ ಸಮುದಾಯಗಳಿಗೆ ಸಂಬಂಧಿಸಿದಂತೆ ಜಾತಿ ಪಮಾಣ ಪತ್ರದಲ್ಲಿರುವ R.D ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸತಕ್ಕದ್ದು. R D ಸಂಖ್ಯೆಗಳು ಒದಗಿಸದಿದ್ದಲ್ಲಿ ಯಶಸ್ವಿನಿ ಕಾರ್ಡ್‌ ಅನ್ನು ಒದಗಿಸಲು ಸಾಧ್ಯವಾಗುವುದಿಲ್ಲ ಮತ್ತು ಸರ್ಕಾರದಿಂದ ಅನುದಾನ ಸೌಲಭ್ಯ ದೊರೆಯುವುದಿಲ್ಲ.

* ಪಸ್ತುತ ಯಶಸ್ವಿನಿ ಯೋಜನೆಯಡಿಯಲ್ಲಿ ಟ್ರಸ್ಟ್ ಗುರುತಿಸಿದ 1650 ವಿವಿಧ ಚಿಕಿತ್ಸೆಗಳು ಮತ್ತು 478 ICU ಚಿಕಿತ್ಸೆಗಳೂ ಸೇರಿದಂತೆ ಒಟ್ಟು 2128 ಚಿಕಿತ್ಸೆಗಳನ್ನು ಅಳವಡಿಸಿಕೊಳ್ಳಲಾಗಿದೆ. ರೋಗಿಗಳಿಗೆ ಸದರಿ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದಲ್ಲಿ ನೋಂದಾಯಿಸಿದ ಯಶಸ್ಸಿನಿ ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಒದಗಿಸಲಾಗುವುದು. ನೆಟ್‌ವರ್ಕ್ ಆಸ್ಪತ್ರೆಗಳನ್ನು ಹೊರತುಪಡಿಸಿ ಇತರೆ ಆಸ್ಪತ್ರೆಗಳಲ್ಲಿ ಯಶಸ್ವಿನಿ ಯೋಜನೆಯ ಸೇವೆ ಲಭ್ಯವಿರುವುದಿಲ್ಲ. ಯಶಸ್ವಿನಿ ಯೋಜನೆಯಡಿ ಫಲಾನುಭವಿ ಚಿಕಿತ್ಸೆ ಪಡೆಯುವ ಮೊದಲು ಆಸ್ಪತ್ರೆಯು ಯೋಜನೆಗೆ ಒಳಪಟ್ಟಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು ನಂತರ ಚಿಕಿತ್ಸೆ ಪಡೆಯತಕ್ಕದ್ದು.

* ಯೋಜನೆಯಲ್ಲಿ ಒಳಪಡದ ಚಿಕಿತ್ಸೆಗಳ ಮತ್ತು ಟ್ರಸ್ಟ್ ಅಂಗೀಕರಿಸದ ಆಸ್ಪತ್ರೆಗಳಲ್ಲಿ ಪಡೆದಂತಹ ಚಿಕಿತ್ಸೆಗಳಿಗೆ ಯಶಸ್ವಿನಿ ಟ್ರಸ್ಟ್ ಜವಾಬ್ದಾರರಾಗುವುದಿಲ್ಲ ಹಾಗೂ ಯಾವುದೇ ಕಾರಣಕ್ಕೂ ಆಸ್ಪತ್ರೆಗಳಿಗಾಗಲಿ ಅಥವಾ ಫಲಾನುಭವಿಗಳಿಗಾಗಲಿ ಚಿಕಿತ್ಸಾ ವೆಚ್ಚವನ್ನು ಪಾವತಿಸಲಾಗುವುದಿಲ್ಲ. ಎರಡು ಜೀವಂತ ಮಕ್ಕಳು ಅಥವಾ ಎರಡು ಹೆರಿಗೆಗೆ ಮಾತ್ರ ಯಶಸ್ವಿನಿ ಯೋಜನೆಯಲ್ಲಿ ಸೌಲಭ್ಯ ದೊರೆಯುತ್ತದೆ.

* ಯಶಸ್ವಿನಿ ಯೋಜನೆಯ ಪ್ರೋಟೋಕಾಲ್ ಪ್ರಕಾರ ಯಶಸ್ವಿನಿ ಫಲಾನುಭವಿಗಳು ಜನರಲ್ ವಾರ್ಡನಲ್ಲಿ ಮಾತ್ರ ಚಿಕಿತ್ಸೆ ಪಡೆಯಲು ಅರ್ಹರಿರುತ್ತಾರೆ. ಒಂದು ವೇಳೆ ಯೋಜನೆಯಡಿ ನಿಗದಿಪಡಿಸಿರುವ ಜನರಲ್ ವಾರ್ಡ್ ಬದಲಾಗಿ ಉನ್ನತ (Semi Special Ward Or Special Ward)ನಲ್ಲಿ ಚಿಕಿತ್ಸೆ ಪಡೆಯಲು ಇಚ್ಚಿಸಿದಲ್ಲಿ, ಸದರಿ ಫಲಾನುಭವಿಗಳಿಗೆ ಯೋಜನೆಯಡಿ ನಿಗದಿ ಪಡಿಸಿರುವಂತೆ ಜನರಲ್ ವಾರ್ಡಗೆ ಅನ್ವಯಿಸುವ ಚಿಕಿತ್ಸೆಯ ವೆಚ್ಚವನ್ನು ಮಾತ್ರ ಭರಿಸಲಾಗುವುದು. ಉನ್ನತ ವಾರ್ಡ್/ ಸ್ಪೆಷಲ್ ವಾರ್ಡಿಗೆ ಆಗುವ ಹೆಚ್ಚುವರಿ ವ್ಯತ್ಯಾಸದ ಚಿಕಿತ್ಸಾ ಮೊತ್ತವನ್ನು ಸದರಿ ಫಲಾನುಭವಿಗಳೇ ಭರಿಸತಕ್ಕದ್ದು.

* ಯಶಸ್ವಿನಿ ಯೋಜನೆಯ ಪ್ಯಾಕೇಜಿನಲ್ಲಿ Implants ಅಗತ್ಯವಿರುವ ಕಡೆ Implants ದರವನ್ನು ಒಳಗೊಂಡಿರುತ್ತದೆ. ಒಂದು ವೇಳೆ ಫಲಾನುಭವಿಗಳು ಉನ್ನತ Implants ಅಥವಾ Lens ಪಡೆಯಲು ಸ್ವ-ಇಚ್ಛೆಯಿಂದ ಒಪ್ಪಿಗೆ ಸೂಚಿಸಿದ್ದಲ್ಲಿ, ಅಂತಹ ಉನ್ನತ Implants ಮತ್ತು Lens ಗೆ ತಗಲುವ ವ್ಯತ್ಯಾಸದ ಹೆಚ್ಚುವರಿ ಮೊತ್ತವನ್ನು ಅಂತ ಫಲಾನುಭವಿಗಳೇ ಭರಿಸಿ ಚಿಕಿತ್ಸೆಯನ್ನು ಪಡೆಯತಕ್ಕದ್ದು.

* ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ಯಶಸ್ವಿನಿ ಸದಸ್ಯರಿಗೆ ಹೊರ ರೋಗಿ ಚಿಕಿತ್ಸೆಗೆ (OPD) ಗರಿಷ್ಠ ರೂ.200ಗಳನ್ನು (ಮೂರು ತಿಂಗಳ ಅವಧಿಗೆ) ಮಿತಿ ನಿಗದಿಪಡಿಸಿದ್ದು, ಈ ಪೈಕಿ ರೂ.100 ಗಳನ್ನು ಯಶಸ್ವಿನಿ ಟ್ರಸ್ಟ್ ವತಿಯಿಂದ ಪಾವತಿಸಲಾಗುವುದು. ಸದಸ್ಯರ ನೋಂದಣಿಗೆ ಮಾರ್ಗಸೂಚಿಗಳು, ಯಶಸ್ವಿನಿ ನೆಟ್‌ವರ್ಕ್ ಆಸ್ಪತ್ರೆಗಳ ಯಾದಿ, ಯಾದಿ ಇವುಗಳನ್ನು ಶಸ್ತ್ರಚಿಕಿತ್ಸೆಗಳ ಸಹಕಾರ ಇಲಾಖೆಯ ಸಹಕಾರ ಸಿಂಧು ವೆಬ್‌ಸೈಟ್‌ನಲ್ಲಿ/ ಟ್ರಸ್ಟ್ ವೆಬ್‌ಸೈಟ್‌ನಲ್ಲೂ ಅಪ್‌ಲೋಡ್ ಮಾಡಲಾಗುವುದು.

* ಸದಸ್ಯರು ಕಡ್ಡಾಯವಾಗಿ ಮೊಬೈಲ್ ಸಂಖ್ಯೆ ಮತ್ತು ಆಧಾರ್ ಕಾರ್ಡ್ ಒದಗಿಸತಕ್ಕದು. ಯಶಸ್ವಿನಿ ಯೋಜನೆಯ ಮಾರ್ಗಸೂಚಿಗಳ ಬಗ್ಗೆ ತಿಳುವಳಿಕೆ ನೀಡಲು ಆಯಾಯ ಪ್ರಾಂತ್ಯದ ಸಹಕಾರ ಸಂಘಗಳ ಜಂಟಿ ನಿಬಂಧಕರು ಅವರ ವ್ಯಾಪ್ತಿಯ ಇಲಾಖಾಧಿಕಾರಿಗಳ, ಜಿಲ್ಲಾ ಸಹಕಾರ ಬ್ಯಾಂಕುಗಳ, ಹಾಲು ಉತ್ಪಾದಕರ ಸಂಘಗಳ ಒಕ್ಕೂಟಗಳ ಮತ್ತು ಇತರೆ ಪುಮುಖ ಸಹಕಾರ ಸಂಘ/ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯನ್ನು ಪ್ರಾಂತೀಯ ಮಟ್ಟದಲ್ಲಿ ನಿರ್ವಹಿಸಲು ಸೂಚಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+