12 ಸಾವಿರ ಕ್ಯುಸೆಕ್‌ ನೀರು ಬಿಡುಗಡೆ ಆದೇಶದ ಬಗ್ಗೆ ಸರ್ಕಾರದಲ್ಲಿ ಚರ್ಚೆ; ಸಂಪುಟ ಸಭೆಯತ್ತ ಎಲ್ಲರ ಚಿತ್ತ

ತುಮಕೂರು: ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿದಿನ 12 ಸಾವಿರ ಕ್ಯುಸೆಕ್‌ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಶಿಫಾರಸು ಮಾಡಿರುವುದು ರಾಜ್ಯದಲ್ಲಿ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ. ನೀರು ಬಿಡುಗಡೆ ವಿಚಾರದಲ್ಲಿ ಸರ್ಕಾರದ ಮುಂದಿನ ನಡೆ ಏನು ಎಂಬ ಕುತೂಹಲ ಇದೀಗ ಹೆಚ್ಚಾಗಿದೆ.

CWRC ಶಿಫಾರಸಿನ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಸಂಪುಟ ಸಭೆಯಲ್ಲಿ ಈ ವಿಚಾರವನ್ನು ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ರಾಜ್ಯದ ಜಲಾಶಯಗಳ ನೀರಿನ ಸಂಗ್ರಹ, ಕುಡಿಯುವ ನೀರಿನ ಅಗತ್ಯ ಹಾಗೂ ರೈತರ ಹಿತಾಸಕ್ತಿಯನ್ನು ಪರಿಗಣಿಸಿ ತೀರ್ಮಾನ ಕೈಗೊಳ್ಳಬೇಕೆಂಬ ಅಭಿಪ್ರಾಯವೂ ವ್ಯಕ್ತವಾಗಿದೆ. ಈ ನಡುವೆ ತಮಿಳುನಾಡಿಗೆ 12 ಸಾವಿರ ಕ್ಯುಸೆಕ್‌ ನೀರು ಹರಿಸುವ ಆದೇಶ ಸರಿಯಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್‌ ಹೇಳಿದ್ದಾರೆ. ಈ ವಿಚಾರವನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Release 12 000 Cusecs of Cauvery Water to Tamil Nadu Major Decision in Cabinet Meeting Parameshwara

ರಾಜ್ಯದಲ್ಲಿ ಗಂಭೀರ ಬರ ಪರಿಸ್ಥಿತಿ ಇದೆ. ಇಂತಹ ಸಮಯದಲ್ಲಿ ತಮಿಳುನಾಡಿಗೆ ಪ್ರತಿನಿತ್ಯ 12 ಸಾವಿರ ಕ್ಯುಸೆಕ್‌ ನೀರನ್ನು ಹರಿಸಬೇಕು ಎಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಆತಂಕ ತಂದಿದೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ.ಜಿ.ಪರಮೇಶ್ವರ ಅವರು ತಿಳಿಸಿದರು.

ಈ ಮೊದಲು ತಮಿಳುನಾಡಿಗೆ ಪ್ರತಿನಿತ್ಯ 3 ಸಾವಿರ ಕ್ಯುಸೆಕ್‌ ನೀರು ಮಾತ್ರವಲ್ಲ, ಅದಕ್ಕೂ ಹೆಚ್ಚಿನ ರೀತಿಯಲ್ಲಿ ಅಂದರೆ ಸುಮಾರು 20 ಸಾವಿರಕ್ಕೂ ಹೆಚ್ಚು ಕ್ಯುಸೆಕ್‌ ನೀರನ್ನು ಕೊಟ್ಟಿದ್ದೇವೆ. ಆದರೆ ಈಗ ನಮ್ಮಲ್ಲಿ ಬರ ಇರುವುದರಿಂದ ಈ ಸಮಯದಲ್ಲಿ ಇಂತಹ ಆದೇಶವನ್ನು ನೀಡಿರುವುದು ಆತಂಕ ತಂದಿದೆ. ನಮ್ಮಲ್ಲಿ ಜಲಾಶಯಗಳಿಗೆ ಒಳಹರಿವು ಕಡಿಮೆಯಾಗಿದೆ. ಕೆಆರ್‌ಎಸ್‌ ಕೂಡ ತುಂಬಿಲ್ಲ. ಕಬಿನಿ, ಹೇಮಾವತಿಯಲ್ಲಿ ಸ್ವಲ್ಪ ಮಟ್ಟಿಗೆ ನೀರಿದ್ದು, ಅದನ್ನು ಶೇಖರಣೆ ಮಾಡಿ ಇಟ್ಟುಕೊಂಡಿದ್ದೇವೆ. ಇವತ್ತು 12,000 ಕ್ಯುಸೆಕ್‌ ನೀರನ್ನು ತಮಿಳುನಾಡಿಗೆ ಬಿಡಬೇಕಾದರೆ ಅಷ್ಟು ನೀರು ನಮ್ಮಲ್ಲಿ ಬೇಕು. ಜಲಾಶಯಗಳ ಒಳಹರಿವು ಹೆಚ್ಚಬೇಕು. ಆದರೆ ಅದು ಆಗಿಲ್ಲ. ಹಾಗಾಗಿ ಮುಂದಿನ ತೀರ್ಮಾನವನ್ನು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆಯುವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದರು.

ಜಿಲ್ಲೆಗೆ ಹೇಮಾವತಿ ನೀರು ಹರಿಸುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ವಿಚಾರವನ್ನು ಈಗಾಗಲೇ ಮಾನ್ಯ ಶಾಸಕರು ಸಭೆಯಲ್ಲಿ ಪ್ರಸ್ತಾಪಿಸಿದ್ದಾರೆ. ಐಸಿಸಿ ಸಭೆಯನ್ನು ಮುಂದಿನ ವಾರ ಕರೆಯಲು ತೀರ್ಮಾನಿಸಿದ್ದೇವೆ. ಆ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳುತ್ತೇವೆ. ಹಾಸನ, ತುಮಕೂರು ಜಿಲ್ಲೆಯ ಶಾಸಕರು ಹಾಗೂ ಐಸಿಸಿ ಸದಸ್ಯರು ಜೊತೆಯಾಗಿ ಕುಳಿತುಕೊಂಡು ತೀರ್ಮಾನಿಸುತ್ತೇವೆ ಎಂದರು.

ತುಮಕೂರಿನಲ್ಲಿ ಗಂಭೀರ ಬರ ಪರಿಸ್ಥಿತಿ ಇದೆ. ಜುಲೈ ತಿಂಗಳಲ್ಲಿ ಮಳೆ ಶೇ.80 ರಿಂದ ಶೇ.90 ರಷ್ಟು ಕಡಿಮೆಯಾಗಿದೆ. ಈ ತರಹದ ಪರಿಸ್ಥಿತಿ ಯಾವತ್ತೂ ಬಂದಿರಲಿಲ್ಲ. ನಿನ್ನೆ ಮತ್ತು ಇಂದು ಜಿಲ್ಲೆಯ ತಾಲೂಕುಗಳಿಗೆ ಭೇಟಿ ನೀಡಿ, ಕುಡಿಯುವ ನೀರು, ಮೇವು ಬಗ್ಗೆ ಪರಿಶೀಲನೆ ಮಾಡಿ, ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಚನೆಯನ್ನು ಕೊಟ್ಟಿದ್ದೇನೆ. ಮುಖ್ಯಮಂತ್ರಿಗಳು ಕೂಡ ಇಂದು ಬೆಳಗ್ಗೆ ಅಧಿಕಾರಿಗಳ ಜೊತೆಗೆ ವಿಡಿಯೋ ಸಂವಾದ ನಡೆಸಿ ಮಾತನಾಡಿದ್ದಾರೆ. ಬರ ಪರಿಸ್ಥಿತಿಯನ್ನು ಬಹಳ ಗಂಭೀರವಾಗಿ ಪರಿಗಣಿಸಬೇಕು ಮತ್ತು ಎಲ್ಲ ಅಧಿಕಾರಿಗಳು ಸ್ಪಂದಿಸುವಂತೆ ತಿಳಿಸಿರುವುದಾಗಿ ಮಾಹಿತಿ ನೀಡಿದರು.

ಪ್ರಸ್ತುತ ರಾಜ್ಯದ ಸ್ಥಿತಿಗತಿಗಳನ್ನು ವರದಿ ಮಾಡಿ, ಈ ತಿಂಗಳೊಳಗಾಗಿ ಕೇಂದ್ರಕ್ಕೆ ಸಲ್ಲಿಸುತ್ತೇವೆ. ಅವರ ಗಮನಕ್ಕೂ ತರುತ್ತೇವೆ. ಅವರು ನಮಗೆ ಸಹಕಾರವನ್ನು ನೀಡಬೇಕು. ಬರ ಪರಿಶೀಲನೆ ವೇಳೆ ವಿಪಕ್ಷದವರು ಬಂದರೂ ಒಳ್ಳೆಯದು. ಕೆಲವು ದಿನಗಳ ಹಿಂದೆ ನಾವು ದೆಹಲಿಯಲ್ಲಿ ಸಂಸದರೊಂದಿಗೆ ಸಭೆಯನ್ನು ನಡೆಸಿದ್ದೆವು. ನಮ್ಮ ರಾಜ್ಯವನ್ನು ಪ್ರತಿನಿಧಿಸುವ ಎಲ್ಲಾ ಜನಪ್ರತಿನಿಧಿಗಳು ಭಾಗಿಯಾಗಿದ್ದರು. ರಾಜ್ಯಕ್ಕೆ ಸಮಸ್ಯೆಯಾದಾಗ ನಾವೆಲ್ಲ ನಿಮ್ಮ ಜೊತೆ ಇರುತ್ತೇವೆ ಎಂದು ಭರವಸೆ ನೀಡಿದ್ದಾರೆ. ಆ ವಿಶ್ವಾಸವೂ ನಮಗಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+