Gruhalakshmi Scheme: ಉಪ ಚುನಾವಣೆ ಸಂದರ್ಭದಲ್ಲಿ ಗೃಹಲಕ್ಷ್ಮೀ ಹಣ ಬಿಡುಗಡೆ ನೀತಿ ಸಂಹಿತೆ ಉಲ್ಲಂಘನೆ: ಬಸವರಾಜ ಬೊಮ್ಮಾಯಿ
ಹಾವೇರಿ,ನವೆಂಬರ್ 12: ಪ್ರತಿ ಬಾರಿಯೂ ಚುನಾವಣೆಯ ಮುಂಚೆ ಮಹಿಳೆಯರ ಅಕೌಂಟ್ ಗೆ ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ರೂಪಾಯಿಯನ್ನು ಹಾಕುವುದು ನೀತಿ ಸಂಹಿತೆಯ ವಿರುದ್ದವಾಗಿದೆ. ಚುನಾವಣಾ ಆಯೋಗ ತಕ್ಷಣ ತಡೆ ಹಿಡಿಯಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಚುನಾವಣೆ ಪಾರದರ್ಶಕವಾಗಿರಬೇಕು. ರಾಜ್ಯ ಸರ್ಕಾರ ಪ್ರತಿ ಬಾರಿಯೂ ಚುನಾವಣೆಗೆ ಮುನ್ನ ಸರ್ಕಾರದ ಹಣದಲ್ಲಿ ತಮ್ಮ ರಾಜಕೀಯ ರೊಟ್ಟಿ ಸುಟ್ಟುಕೊಳ್ಳುವ ಕೆಲಸ ಮಾಡುತ್ತಿದೆ. ಇದು ಅತ್ಯಂತ ಖಂಡನೀಯ. ಚುನಾವಣಾ ಆಯೋಗ ಕಣ್ಣು ಮುಚ್ಚಿ ಕುಳಿತಿದೆ. ಹಾವೇರಿ ಜಿಲಾಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿದ್ದಾರೆ. ಇದನ್ನು ಕೂಡಲೆ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ಚುನಾವಣೆಗೆ ಸರ್ಕಾರದ ಹಣ ಬಳಕೆಯಾಗುತ್ತಿರುವುದು ಸ್ಪಷ್ಟ. ಸಿಎಂ ಸಿದ್ದರಾಮಯ್ಯ ಅವರು ಪ್ರಜಾಪ್ರಭುತ್ವ, ಸಂವಿಧಾನದ ಬಹಳ ಬಗ್ಗೆ ಮಾತನಾಡುತ್ತಾರೆ. ಇಡೀ ಸರ್ಕಾರವೇ ಸರ್ಕಾರಿ ದುಡ್ಡಿನಲ್ಲಿ ರಾಜಕೀಯ ಭ್ರಷ್ಟಾಚಾರ ಮಾಡುತ್ತಿದೆ. ಶಿಗ್ಗಾವಿ ಸವಣೂರು ಕ್ಷೇತ್ರದ ಜನರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ನಿರಂತರವಾಗಿ ನಡೆಯುತ್ತಿರುವ ಈ ಕ್ಷೇತ್ರದ ಅಭಿವೃದ್ಧಿಯನ್ನು ನೋಡಿ ಎಲ್ಲ ವರ್ಗದ ಜನರು ಈಗಾಗಲೇ ಏನು ತೀರ್ಮಾನ ಮಾಡಿದ್ದಿರಿ, ಅದನ್ನು ಯಾವುದೇ ಕಾರಣಕ್ಕೂ ಬದಲಾಯಿಸದೇ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.
ಹಾವೇರಿ ಎಸ್ಪಿ ಕಾಂಗ್ರೆಸ್ ಅಭ್ಯರ್ಥಿಯ ಕುರಿತು ಸ್ಪಷ್ಟೀಕರಣ ನೀಡಿರುವ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹಾವೇರಿ ಎಸ್ಪಿ ಮಾದ್ಯಮದ ಪ್ರಶ್ನೆಗೆ ಇರುವ ಪರಿಸ್ಥಿತಿಯನ್ನು ಸತ್ಯವಮ್ನು ಹೇಳಿದ್ದರು. ಅದು ಮಾಧ್ಯಮದಲ್ಲಿ ಬಂದಿದೆ. ಎಸ್ಪಿ ಸುಮ್ಮನೆ ಹೇಳಿಕೆ ನೀಡುವುದಿಲ್ಲ. ಮಾಹಿತಿ ಪಡೆದುಕೊಂಡೇ ಹೇಳಿರುತ್ತಾರೆ. ಈಗ ಸರ್ಕಾರದ ಒತ್ತಡಕ್ಕೆ ಮಣಿದು ಯಾವುದೇ ಪ್ರಕರಣ ಇಲ್ಲ ಅಂತ ಹೇಳುತ್ತಾರೆ. ಎಸ್ಪಿ ಹೇಳಿಕೆಯ ಬಗ್ಗೆ ತನಿಖೆಯಾಗಬೇಕು. ಯಾವುದು ಸತ್ಯ ಎನ್ನುವುದು ಗೊತ್ತಾಗಬೇಕು. ಈ ಬಗ್ಗೆ ನಾವು ನಾಳೆ ಚುನಾವಣಾ ಆಯೋಗಕ್ಕೆ ದೂರು ಕೊಡುತ್ತೇವೆ ಎಂದರು.
ಕಳೆದ ವರ್ಷ ಕಾಂಗ್ರೆಸ್ ಅಭ್ಯರ್ಥಿಯ ವಿರುದ್ದ ಅಷ್ಟೊಂದು ಪ್ರಕರಣಗಳು ಇದ್ದವು. ಪ್ರಕರಣಗಳು ಮುಕ್ತಾಯವಾಗಲು ಏನೆಲ್ಲ ನಿಯಮ ಇದೆ ಎಂದು ಎಸ್ಪಿಯವರು ಪೊಲಿಸ್ ಮ್ಯಾನುವಲ್ ಏನು ಅಂತ ಅವರೇ ಹೇಳಿದರು. ಈಗ ಯಾವುದೇ ಪ್ರಕರಣ ಇಲ್ಲ ಅಂತ ಸರ್ಕಾರ ಹೇಳಿಸಿದೆ ಎಂದರು.
ಕಾಂಗ್ರೆಸ್ ಅಭ್ಯರ್ಥಿಯ ತಾಲೂಕಿನಲ್ಲಿಯೇ ಅವರ ಇರುದ್ದ ಕೇಸ್ ಗಳಿವೆ ನಾನು ಯಾರ ವಿರುದ್ದವು ದ್ವೇಷದ ರಾಜಕಾರಣ ಮಾಡುವುದಿಲ್ಲ ಆ ಅಗತ್ಯ ನನಗಿಲ್ಲ. ಯಾಸಿರ್ ಖಾನ್ ಬಗ್ಗೆ ಅಜ್ಜಂಫಿರ್ ಖಾದ್ರಿ ಅವರು ಮೊದಲು ಹೇಳಿದ್ದು, ಎಸ್ಪಿಗೆ ಆ ರೀತಿ ಹೇಳಿಕೆ ನೀಡಲು ನಾನು ಹೇಳಿದ್ನಾ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಅಭ್ಯರ್ಥಿ ಭಯೋತ್ಪಾದಕರ ಜೊತೆ ಇದ್ದ ಫೊಟೊಗಳು ಮಾಧ್ಯಮಗಳೆ ಬಿಡುಗಡೆ ಮಾಡಿವೆ. ಅದಕ್ಕೂ ನನಗೂ ಏನು ಸಂಬಂಧವಿಲ್ಲ ಎಂದು ಹೇಳಿದರು.
ಇನ್ನು ಬಿಜೆಪಿ ಅಭ್ಯರ್ಥಿ ವಿರುದ್ದ ಬಿಟ್ ಕಾಯಿನ್ ಆರೋಪ ಮಾಡಿರುವ ಕುರಿತು ಕೇಳಿದ ಪ್ರಶ್ನೆಗೆ ರಾಜ್ಯ ಸರ್ಕಾರ ಕಳೆದ ಒಂದೂವರೆ ವರ್ಷದಿಂದ ತನಿಖೆ ಮಾಡುತ್ತಿದೆ. ಬಿಟ್ ಕಾಯಿನ್ ಗೂ ಭರತ್ ಬೊಮ್ಮಾಯಿಗೂ ಯಾವುದೇ ಸಂಬಂಧ ಇಲ್ಲ. ಅವರ ಆರೋಪ ನಿರಾಧಾರ ಎಂದು ಹೇಳಿದರು.












Click it and Unblock the Notifications