New Year Guidelines: ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ: ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು, ಡಿಸೆಂಬರ್​ 26: ಹೊಸ ವರ್ಷಾಚರಣೆಗೆ ರಾಜ್ಯ ರಾಜಧಾನಿ ಬೆಂಗಳೂರು ಸಿದ್ದವಾಗುತ್ತಿದೆ. ಈ ವೇಳೆ ಕಾನೂನು ಸುವ್ಯವಸ್ಥೆಯನ್ನ ಕಾಪಾಡಲು ನಗರ ಪೊಲೀಸರು ಭರ್ಜರಿ ತಯಾರಿ ನಡೆಸುತ್ತೊದ್ದಾರೆ.

ಹೌದು, ಹೊಸ ವರ್ಷಾಚರಣೆ ವೇಳೆ ಜನರ ಸುರಕ್ಷತೆ ಹಾಗೂ ಅಹಿತಕರ ಘಟನೆ ನಡೆಯದಂತೆ ಸೂಕ್ತ ವ್ಯವಸ್ಥೆಯನ್ನ ಕಲ್ಪಿಸುವ ನಿಟ್ಟಿನಲ್ಲಿ ಬೆಂಗಳೂರು ನಗರ ಪೊಲೀಸ್​ ಆಯುಕ್ತ ಬಿ.ದಯಾನಂದ್ ಅವರು ಮಾರ್ಗಸೂಚಿ ಕುರಿತು ಸುದ್ದಿಗೋಷ್ಟಿಯ ಮೂಲಕ ಮಾಹಿತಿ ನೀಡಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡಲು ನಗರ ಪೊಲೀಸರು ತಯಾರಿ ನಡೆಸುತ್ತಿದ್ದಾರೆ. ಹೊಸ ವರ್ಷಾಚರಣೆ ವೇಳೆ ಜನರ ಸುರಕ್ಷತೆ ನಮ್ಮ ಆದ್ಯ ಕರ್ತವ್ಯ. ಯಾವುದೇ ಕಾರಣಕ್ಕೂ ಮಹಿಳೆ ಮತ್ತು ಮಕ್ಕಳಿಗೆ ಸಮಸ್ಯೆ ಆಗಬಾರದು ಎಂದು ಹೇಳಿದರು.

Release Of New Year Guidelines: Here Is Complete Information

ಅಹಿತಕರ ಘಟನೆ ನಡೆಯದಂತೆ ಸೂಕ್ತ ವ್ಯವಸ್ಥೆಗಳನ್ನು ಮಾಡುತ್ತಿದ್ದೇವೆ ಹೊಸ ವರ್ಷಾಚರಣೆ ದಿನ ಕ್ಲಬ್​ಗಳಿಗೆ ರಾತ್ರಿ 1 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ವೈನ್ ಶಾಪ್​ಗಳಿಗೆ ರಾತ್ರಿ 12 ಗಂಟೆಯವರೆಗೆ ಅವಕಾಶ ನೀಡಲಾಗಿದೆ. ಭದ್ರತೆಗೆ ಇಬ್ಬರು ಹೆಚ್ಚುವರಿ ಪೊಲೀಸ್ ಆಯುಕ್ತರನ್ನು ನಿಯೋಜಿಸಲಾಗಿದೆ. ಓರ್ವ ಜಂಟಿ ಪೊಲೀಸ್ ಆಯುಕ್ತ, 15 ಡಿಸಿಪಿ, 45 ಎಸಿಪಿ, 160 ಪಿಐ, 600 ಸಬ್​​ಇನ್ಸ್​​ಪೆಕ್ಟರ್​​ಗಳು, 600 ಎಎಸ್​​ಐ, 1800 ಹೆಡ್​ಕಾನ್ಸ್​ಟೇಬಲ್ಸ್​, 5,200 ಕಾನ್ಸ್​ಟೇಬಲ್​​ಗಳನ್ನು ಭದ್ರತೆಗೆ ನಿಯೋಜನೆ ಮಾಡಲಾಗುವುದು ಎಂದು ತಿಳಿಸಿದರು.

ಬಿಬಿಎಂಪಿ, ಮೇಟ್ರೋ, ಬಿಎಂಟಿಸಿ, ಅಬಕಾರಿ, ಆರೋಗ್ಯ ಇಲಾಖೆ, ಅಗ್ನಿಶಾಮಕ, ಮಾಲಿನ್ಯ ನಿಯಂತ್ರಣ ಮಂಡಳಿ, ಬಿಎಂಆರ್​ಸಿಎಲ್, ಬೆಸ್ಕಾಂ ಜೊತೆಗೆ ಮಾತುಕತೆ ನಡೆಸಲಾಗಿದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಕಬ್ಬನ್ ಪಾರ್ಕ್, ಟ್ರಿನಿಟಿ, ಫಿನಿಕ್ಸ್ ಮಾಲ್, ಕ್ಲಬ್​ಗಳ ಮುಂಭಾಗ ಬಿಗಿ ಪೊಲೀಸ್ ಭದ್ರತೆ ಮಾಡಲಾಗುತ್ತದೆ ಎಂದು ನಗರ ಪೊಲೀಸ್​ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದರು.

ಇನ್ನೂ ಹೊಸ ವರ್ಷದಂದು ಎಲ್ಲಾ ಫ್ಲೈ ಓವರ್​ ಮೇಲೆ ವೇಗವಾಗಿ ವಾಹನ ಚಲಾಯಿಸುವುದು ಮತ್ತು ವ್ಹೀಲಿಂಗ್​ ಮಾಡುವುದನ್ನು ತಡೆಗಟ್ಟಲು ಎಲ್ಲ ಫ್ಲೈ ಓವರ್​ಗಳನ್ನು ಬಂದ್​ ಮಾಡಲಾಗುತ್ತದೆ. ಸಂಜೆ 6ರಿಂದ ಬೆಳಗ್ಗೆ 6ವರೆಗೆ ಫ್ಲೈ ಓವರ್ ಬಂದ್ ಮಾಡಲಿದ್ದೇವೆ. ಡ್ರಗ್ಸ್ ಉಪಟಳಕ್ಕೆ ಕಡಿವಾಣ ಹಾಕಲು ನಗರದಾದ್ಯಂತ ಒಂದು ವಾರದಿಂದ ನಿರಂತರ ಪರಿಶೀಲನೆ ನಡೆಯುತ್ತಿದೆ. ಸಿಸಿಬಿ ಅಧಿಕಾರಿಗಳು ಮಾದಕ ವಸ್ತು ಸಂಗ್ರಹಿಸಿದ್ದ ಮನೆಗಳ ಮೇಲೆ ದಾಳಿ ಮಾಡಿ, ಪರಿಶೀಲನೆ ನಡೆಸಿದ್ದಾರೆ.

ಏರ್​ಪೋರ್ಟ್​ ರಸ್ತೆ ಹೊರತುಪಡಿಸಿ ಉಳಿದೆಡೆ ಸಿಸಿಟಿವಿ ಅಳವಡಿಕೆ. ಹಲವೆಡೆ ಡ್ರೋನ್ ಕ್ಯಾಮರಾ ಕಾರ್ಯಾಚರಣೆ ಕೂಡ ಇರಲಿದೆ. ಕೋರಮಂಗಲ, ಇಂದಿರಾನಗರ 100 ಅಡಿ ರಸ್ತೆಗಳಲ್ಲಿ ಹೆಚ್ಚಿನ ಭದ್ರತೆ ನೀಡಲಾಗುತ್ತದೆ. ಸಿವಿಲ್​​ ಡ್ರಸ್​​ಗಳಲ್ಲಿ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಅಧಿಕ ಲಿಕ್ಕರ್ ಶೇಖರಣೆ, ಅನಧಿಕೃತ ಮಾರಾಟದ ಮೇಲೆ ಹದ್ದಿನ ಕಣ್ಣಿಟ್ಟಿದ್ದೇವೆ. ಆಯಕಟ್ಟಿನ ಪ್ರದೇಶದಗಳಲ್ಲಿ ಪೊಲೀಸ್ ಚೌಕಿಗಳನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+