ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌: ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳ ಮೇಲ್ದರ್ಜೆ, ಹೈಸ್ಕೂಲ್ ಹಂತಕ್ಕೂ ವಿಸ್ತರಣೆ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮದಲ್ಲಿ ಪ್ರಾಥಮಿಕ ಶಿಕ್ಷಣ ಪೂರೈಸಿ, ಮುಂದಿನ ವಿದ್ಯಾಭ್ಯಾಸಕ್ಕಾಗಿ ಅತಂತ್ರ ಸ್ಥಿತಿಯಲ್ಲಿದ್ದ ಸುಮಾರು 30 ಸಾವಿರ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಕೊನೆಗೂ ದೊಡ್ಡ ನೆಮ್ಮದಿಯ ಸುದ್ದಿ ಸಿಕ್ಕಿದೆ. ಹೈಸ್ಕೂಲ್ ಹಂತದಲ್ಲಿ ಆಂಗ್ಲ ಮಾಧ್ಯಮ ಇಲ್ಲದ ಕಾರಣ ತೀವ್ರ ಆತಂಕಕ್ಕೆ ಒಳಗಾಗಿದ್ದ ಈ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಉಳಿಸಲು ಶಾಲಾ ಶಿಕ್ಷಣ ಇಲಾಖೆಯು ಪರ್ಯಾಯ ಕ್ರಮಕ್ಕೆ ಮುಂದಾಗಿದೆ.

ಹಾಲಿ ಇರುವ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳು ಹಾಗೂ ಪ್ರೌಢಶಾಲೆಗಳನ್ನು 8ನೇ ತರಗತಿಯಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮಕ್ಕೆ ಮೇಲ್ದರ್ಜೆಗೆ ಏರಿಸಲು ಇಲಾಖೆ ನಿರ್ಧರಿಸಿದ್ದು, ಈ ಕುರಿತು ಸರ್ಕಾರಕ್ಕೆ ಸಮಗ್ರ ವರದಿಯ ಪ್ರಸ್ತಾವನೆಯನ್ನು ಸಲ್ಲಿಕೆ ಮಾಡಿದೆ.

Government English Medium

30 ಸಾವಿರಕ್ಕೂ ಹೆಚ್ಚು ಮಕ್ಕಳ ಭವಿಷ್ಯ ಅತಂತ್ರವಾಗಿತ್ತು

ರಾಜ್ಯ ಸರ್ಕಾರವು ಕಳೆದ 2018-19ನೇ ಶೈಕ್ಷಣಿಕ ಸಾಲಿನಲ್ಲಿ ರಾಜ್ಯಾದ್ಯಂತ ಒಟ್ಟು 1,001 ಸರ್ಕಾರಿ ಕನ್ನಡ ಪ್ರಾಥಮಿಕ ಶಾಲೆಗಳಲ್ಲಿ ಪ್ರಾಯೋಗಿಕವಾಗಿ 1 ರಿಂದ 7ನೇ ತರಗತಿಯವರೆಗೆ ಆಂಗ್ಲ ಮಾಧ್ಯಮ ವಿಭಾಗಗಳನ್ನು ಆರಂಭಿಸಿತ್ತು. ಅಂದು ಒಂದನೇ ತರಗತಿಗೆ ದಾಖಲಾಗಿದ್ದ ಸುಮಾರು 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದೀಗ ಯಶಸ್ವಿಯಾಗಿ 7ನೇ ತರಗತಿ ಪೂರೈಸಿ ಹೊರಬಂದಿದ್ದಾರೆ. ಆದರೆ, ಸರ್ಕಾರಿ ವಲಯದಲ್ಲಿ 8ನೇ ತರಗತಿಯಿಂದ ಮೇಲ್ಪಟ್ಟ ಪ್ರೌಢಶಾಲೆಗಳಲ್ಲಿ ಆಂಗ್ಲ ಮಾಧ್ಯಮದ ಸೌಲಭ್ಯ ಇಲ್ಲದ ಕಾರಣ ಈ ಮಕ್ಕಳ ಮುಂದಿನ ವಿದ್ಯಾಭ್ಯಾಸದ ದಾರಿ ಮುಚ್ಚಿಹೋಗಿತ್ತು.

ಒಂದು ಕೆಲಸ ಸಿಕ್ಕರೆ ಸಾಕಪ್ಪ ಅಂತಾರೆ, ಆದ್ರೆ 23 ವರ್ಷದ ಈಕೆ ಪಡೆದಿದ್ದು 19 ಸರಕಾರಿ ನೌಕರಿ ಆಫರ್ಸ್‌
ಒಂದು ಕೆಲಸ ಸಿಕ್ಕರೆ ಸಾಕಪ್ಪ ಅಂತಾರೆ, ಆದ್ರೆ 23 ವರ್ಷದ ಈಕೆ ಪಡೆದಿದ್ದು 19 ಸರಕಾರಿ ನೌಕರಿ ಆಫರ್ಸ್‌

ಬಡತನದ ಹಿನ್ನೆಲೆಯುಳ್ಳ ಪೋಷಕರಿಗೆ ತಮ್ಮ ಮಕ್ಕಳನ್ನು ದುಬಾರಿ ವೆಚ್ಚದ ಖಾಸಗಿ ಇಂಗ್ಲಿಷ್ ಮೀಡಿಯಂ ಶಾಲೆಗಳಿಗೆ ಸೇರಿಸಲು ಆರ್ಥಿಕ ಶಕ್ತಿ ಇರಲಿಲ್ಲ. ಇದರಿಂದಾಗಿ ಸಾವಿರಾರು ಮಕ್ಕಳ ಭವಿಷ್ಯ ಅಡ್ಡಕತ್ತರಿಯಲ್ಲಿ ಸಿಲುಕಿತ್ತು. ಈ ಗಂಭೀರ ಸಮಸ್ಯೆಯ ಕುರಿತು ಮಾಧ್ಯಮಗಳು ಸರಣಿ ವರದಿಗಳನ್ನು ಪ್ರಸಾರ ಮಾಡಿ ಸರ್ಕಾರದ ಗಮನ ಸೆಳೆದಿದ್ದವು.

ಶಿಕ್ಷಣ ಇಲಾಖೆಯ ಪರ್ಯಾಯ ಯೋಜನೆ

ಮಾಧ್ಯಮಗಳ ವರದಿಯ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಶಾಲಾ ಶಿಕ್ಷಣ ಇಲಾಖೆ, ಮಕ್ಕಳ ಹಿತದೃಷ್ಟಿಯಿಂದ ಮಹತ್ವದ ನಿರ್ಧಾರ ಕೈಗೊಂಡಿದೆ. ಇಲಾಖೆಯ ಹೊಸ ಪ್ರಸ್ತಾವನೆಯ ಪ್ರಕಾರ, ಎರಡು ಕಿಲೋಮೀಟರ್ ವ್ಯಾಪ್ತಿಯಲ್ಲಿ ಈಗಾಗಲೇ ಯಾವುದೇ ಸರ್ಕಾರಿ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳು ಲಭ್ಯವಿದ್ದರೆ, ಈ 7ನೇ ತರಗತಿ ಪಾಸಾದ ವಿದ್ಯಾರ್ಥಿಗಳನ್ನು ಅಲ್ಲಿಗೆ ದಾಖಲು ಮಾಡಿಕೊಳ್ಳಲು ಸೂಚಿಸಲಾಗಿದೆ.

ಒಂದು ವೇಳೆ ನಿಗದಿತ 2 ಕಿಲೋಮೀಟರ್ ವ್ಯಾಪ್ತಿಯೊಳಗೆ ಯಾವುದೇ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇಲ್ಲದೇ ಹೋದರೆ, ಪ್ರಸ್ತುತ ವಿದ್ಯಾರ್ಥಿಗಳು ಓದುತ್ತಿರುವ ಪ್ರಾಥಮಿಕ ಶಾಲೆಗಳಲ್ಲಿಯೇ 8ನೇ ತರಗತಿಯಿಂದ ಆಂಗ್ಲ ಮಾಧ್ಯಮ ವಿಭಾಗವನ್ನು ವಿಸ್ತರಿಸಿ, ಶಾಲೆಗಳನ್ನು ಮೇಲ್ದರ್ಜೆಗೆ ಏರಿಸಲು ಶಿಫಾರಸು ಮಾಡಲಾಗಿದೆ.

ಬೆಂಗಳೂರು: ಪಾಲಿಕೆ ಶಾಲಾ ಕಾಲೇಜುಗಳ ಪ್ರವೇಶಾತಿಗೆ ಜುಲೈ 31 ರವರೆಗೂ ಅವಕಾಶ, ದಾಖಲಾತಿ ಆಗಿದ್ದೆಷ್ಟು?
ಬೆಂಗಳೂರು: ಪಾಲಿಕೆ ಶಾಲಾ ಕಾಲೇಜುಗಳ ಪ್ರವೇಶಾತಿಗೆ ಜುಲೈ 31 ರವರೆಗೂ ಅವಕಾಶ, ದಾಖಲಾತಿ ಆಗಿದ್ದೆಷ್ಟು?

ಪೋಷಕರಲ್ಲಿ ಮೂಡಿದ ಹೊಸ ಭರವಸೆ

ಸರ್ಕಾರದ ಈ ದಿಢೀರ್ ನಡೆ ಕಡುಬಡತನದಲ್ಲೂ ಮಕ್ಕಳಿಗೆ ಇಂಗ್ಲಿಷ್ ಶಿಕ್ಷಣ ಕೊಡಿಸಬೇಕು ಎಂದು ಕನಸು ಕಂಡಿದ್ದ ಪೋಷಕರಲ್ಲಿ ಹೊಸ ಭರವಸೆ ಮೂಡಿಸಿದೆ. ಹೈಸ್ಕೂಲ್ ಹಂತದಲ್ಲೂ ಉಚಿತವಾಗಿ ಸರ್ಕಾರಿ ಆಂಗ್ಲ ಮಾಧ್ಯಮ ಮುಂದುವರಿದರೆ ಗುಣಮಟ್ಟದ ಶಿಕ್ಷಣ ಎಲ್ಲರಿಗೂ ಲಭ್ಯವಾಗಲಿದೆ. ಶಿಕ್ಷಣ ಇಲಾಖೆಯು ನೀಡಿರುವ ಈ ಸಮಗ್ರ ವರದಿಗೆ ಸರ್ಕಾರ ಶೀಘ್ರದಲ್ಲೇ ಆಡಳಿತಾತ್ಮಕ ಅನುಮೋದನೆ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಒಟ್ಟಾರೆಯಾಗಿ, ಸರ್ಕಾರದ ಎಡವಟ್ಟಿನಿಂದಾಗಿ ಅತಂತ್ರ ಸ್ಥಿತಿಯಲ್ಲಿದ್ದ 30 ಸಾವಿರ ಬಡ ವಿದ್ಯಾರ್ಥಿಗಳ ಉಜ್ವಲ ಶೈಕ್ಷಣಿಕ ಬದುಕಿಗೆ ಈಗ ಹೊಸ ದಾರಿ ಸಿಕ್ಕಂತಾಗಿದೆ. ಸರ್ಕಾರದ ಈ ನಿರ್ಧಾರ ಪೋಷಕರ ಮುಖದಲ್ಲಿ ಮಂದಹಾಸ ತಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+